Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ರಾಜ್ಯ

ಹಾಸನಾಂಬೆ ಗರ್ಭಗುಡಿ ಬಂದ್: ದಾಖಲೆಯ 26 ಲಕ್ಷ ಭಕ್ತರಿಂದ ದರ್ಶನ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 32 ವೀಕ್ಷಣೆಗಳು
krishna byregowda

ಶ್ರೀ ಸಿದ್ದೇಶ್ವರ ಸ್ವಾಮಿ ಜಾತ್ರೆ ಮಹೋತ್ಸವ ನೆರವೇರಿತು. ಈ ಮೂಲಕ ವರ್ಷಕ್ಕೊಮ್ಮೆ ಬಾಗಿಲು ತೆರೆಯುವ ಹಾಸನ ಅಧಿದೇವತೆ ಹಾಸನಾಂಬೆ ದೇವಿಯ ಗರ್ಭಗುಡಿಗೆ ಬಾಗಿಲು ಮುಚ್ಚಲಾಯಿತು.

ಅಕ್ಟೋಬರ್ 9ರಿಂದ ನಡೆದ ಹಾಸನಾಂಬೆ ದೇವಿಯ ದರ್ಶನ ಒಂದು ತಿಂಗಳ ಕಾಲ ಸುಗಮನವಾಗಿ ನೆರವೇರಿದ್ದು, ದಾಖಲೆ ಪ್ರಮಾಣದಲ್ಲಿ 26 ಲಕ್ಷ ಭಕ್ತರು ದರ್ಶನ ಪಡೆದಿದ್ದಾರೆ.

ಬುಧವಾರ ರಾತ್ರಿ ಸಿದ್ದೇಶ್ವರ ಸ್ವಾಮಿ ಜಾತ್ರೆ ನೆರವೇರಿತು. ವಿಶೇಷ ಪೂಜೆಯ ನಂತರ ಗುರುವಾರ ಬೆಳಿಗ್ಗೆ ಅರ್ಚಕರು ಹಾಸನಾಂಬೆ ದೇವಿಯ ವರ್ಷಪೂರ್ತಿ ಬೆಳಗುವ ದೀಪ ಬೆಳಗಿಸಿ ಬಾಗಿಲು ಮುಚ್ಚಿದರು.

ಶಾಸ್ತ್ರೋಕ್ತವಾಗಿ ಪೂಜೆ ನೆರವೇರಿಸಿದ ನಂತರ ಪ್ರಧಾನ ಅರ್ಚಕ ನಾಗರಾಜ್ ನೇತೃತ್ವದಲ್ಲಿ ಪಂಜಿನ ಮೂಲಕ ಪೂಜೆ ನೆರವೇರಿಸಲಾಯಿತು. ದೇವಿಗೆ ಹಾಕಿದ್ದ ಆಭರಣಗಳನ್ನು ತೆಗೆದು ಎಲ್ಲರೂ ಗರ್ಭಗುಡಿಯಿಂದ ಹೊರಗೆ ಬಂದರು. ನಂತರ ಅರ್ಚಕರು ಮಧ್ಯಾಹ್ನ 1.20ಕ್ಕೆ ಗರ್ಭಗುಡಿಯ ಬಾಗಿಲು ಮುಚ್ಚಿ ಬೀಗ ಹಾಕಿದರು.

ಮುಂದಿನ ವರ್ಷ ಅಕ್ಟೋಬರ್ 29ರಿಂದ ನವೆಂಬರ್ 11ರವರೆಗೆ ಹಾಸನಾಂಬೆ ದೇವಿಯ ಬಾಗಿಲು ತೆರೆಯಲಿದೆ ಎಂದು ಇದೇ ಸಂದರ್ಭದಲ್ಲಿ ಘೋಷಿಸಲಾಯಿತು.

ಕಳೆದ ವರ್ಷ ಸಾಕಷ್ಟು ಗೊಂದಲ ಮತ್ತು ಟೀಕೆಗಳ ನಡುವೆರ 17.47 ಲಕ್ಷ ಜನರು ದೇವಿಯ ದರ್ಶನ ಪಡೆದಿದ್ದರು. ಆದರೆ ಈ ಬಾರಿ ಅತ್ಯಂತ ಸುವ್ಯವಸ್ಥಿತವಾಗಿ ದರ್ಶನ ವ್ಯವಸ್ಥೆ ಮಾಡಿದ್ದರಿಂದ 26 ಲಕ್ಷಕ್ಕೂ ಅಧಿಕ ಭಕ್ತರು ದೇವಿಯ ದರ್ಶನ ಪಡೆದಿದ್ದಾರೆ.

ಅಕ್ಟೋಬರ್ 9ರಂದು ಮೊದಲ ದಿನ 58 ಸಾವಿರ ಭಕ್ತರು ದರ್ಶನ ಪಡೆದಿದ್ದರೆ, ಎರಡನೇ ದಿನ 2.07 ಲಕ್ಷ ಜನ, ಮೂರನೇ ದಿನ 1.45 ಲಕ್ಷ, ನಾಲ್ಕನೇ ದಿನ 2.29 ಲಕ್ಷ, 5ನೇ ದಿನ 2.43 ಲಕ್ಷ, 6ನೇ ದಿನ 2.46 ಲಕ್ಷ, 7ನೇ ದಿನ 2.58 ಲಕ್ಷ, 8ನೇ ದಿನ ಗರಿಷ್ಠ 3.61 ಲಕ್ಷ, 9ನೇ ದಿನ 2.16 ಲಕ್ಷ, 10ನೇ ದಿನ 1.26 ಲಕ್ಷ, 11ನೇ ದಿನ 2.02 ಲಕ್ಷ, 12ನೇ ದಿನ 1.50 ಲಕ್ಷ ಹಾಗೂ 13 ಹಾಗೂ ಅಂತಿಮ ದಿನವಾದ ಬುಧವಾರ 1.59 ಲಕ್ಷ ಭಕ್ತರು ಭೇಟಿ ನೀಡಿದ್ದಾರೆ.

ವಿಐಪಿ ಸಂಸ್ಕೃತಿಗೆ ಕಡಿವಾಣ ಹಾಕಿ ಸಾರ್ವಜನಿಕ ದರ್ಶನಕ್ಕೆ ಅನುಕೂಲ ಮಾಡಿಕೊಡುವ ಮೂಲಕ ಹಾಸನ ಜಿಲ್ಲಾ ಉಸ್ತುವಾರಿ ಹಾಗೂ ಕಂದಾಯ ಸಚಿವ ಕೃಷ್ಣ ಭೈರೇಗೌಡ ಗಮನ ಸೆಳೆದಿದ್ದಾರೆ. ಅಲ್ಲದೇ ಇಡೀ 14 ದಿನಗಳ ಕಾಲ ಹಾಸನಾಂಬೆ ದೇವಿಯ ದರ್ಶನಕ್ಕೆ ತಾವೇ ಖುದ್ದು ನಿಂತು ಉಸ್ತುವಾರಿ ನೋಡಿಕೊಂಡು ಸುಗಮ ವ್ಯವಸ್ಥೆ ಕಲ್ಪಿಸಿದ್ದಾರೆ.

ಕಳೆದ ವರ್ಷ ವಿಶೇಷ ದರ್ಶನಕ್ಕೆ 3 ಸಾವಿರ ರೂ. ನಿಗದಿಪಡಿಸಲಾಗಿತ್ತು. ಆದರೂ ಸಾಕಷ್ಟು ಅವ್ಯವಸ್ಥೆಯಿಂದ ಸಾಕಷ್ಟು ಟೀಕೆಗೆ ಗುರಿಯಾಗಿತ್ತು. ಆದರೆ ಈ ಬಾರಿ 300 ರೂ. ಹಾಗೂ 1000 ಮುಖಬೆಲೆಯ ಟಿಕೆಟ್ ವ್ಯವಸ್ಥೆ ಮಾಡಲಾಗಿದ್ದು, ಇದರಿಂದ ಹಾಸನಾಂಬೆ ದರ್ಶನದಿಂದ 6 ಕೋಟಿಗೂ ಅಧಿಕ ಆದಾಯ ನಿರೀಕ್ಷಿಸಲಾಗಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment