ರಾಜಧಾನಿ ಬೆಂಗಳೂರಿನಲ್ಲಿ ಚೀನಾದಲ್ಲಿ ಅಬ್ಬರಿಸುತ್ತಿರುವ ಹೊಸ ಮಹಾಮಾರಿ ಎಚ್ ಎಂಪಿವಿ ವೈರಸ್ ಪತ್ತೆಯಾಗಿದೆ. ಇದು ದೇಶದಲ್ಲೇ ಪತ್ತೆಯಾದ ಮೊದಲ ಎಚ್ ಎಂಪಿ ವೈರಸ್ ಸೋಂಕು ಪ್ರಕರಣ ಇದಾಗಿದೆ.
ಹೊಸ ವರ್ಷದ ಆರಂಭದಲ್ಲೇ ಚೀನಾದಲ್ಲಿ ಭಾರೀ ಕೋಲಾಹಲ ಸೃಷ್ಟಿಸಿರುವ ಎಚ್ ಎಂವಿಪಿ ವೈರಸ್ ರಾಜ್ಯದಲ್ಲಿ ಮೊದಲ ಪ್ರಕರಣ ಪತ್ತೆಯಾದ ಬೆನ್ನಲ್ಲೇ ಮತ್ತೊಂದು ಮಗುವಿನಲ್ಲೂ ಸೋಂಕು ದೃಢಪಟ್ಟಿದೆ.
ಬೆಂಗಳೂರಿನಲ್ಲಿ 3 ಮತ್ತು 8 ತಿಂಗಳ ಮಗುವಿನಲ್ಲಿ ಎಚ್ ಎಂಪಿವಿ ವೈರಸ್ ಪತ್ತೆಯಾಗಿತ್ತು. ಸೋಮವಾರ ಮಧ್ಯಾಹ್ನದ ವೇಳೆ 3 ತಿಂಗಳ ಮಗುವನ್ನು ಡಿಸ್ಚಾರ್ಜ್ ಮಾಡಲಾಗಿದೆ. ಈ ಮೂಲಕ ಆತಂಕಕ್ಕೆ ಒಳಗಾಗಿದ್ದ ಜನರು ನಿಟ್ಟುಸಿರುಬಿಟ್ಟಿದ್ದಾರೆ.
3 ತಿಂಗಳ ಮಗು ಆರೋಗ್ಯವಾಗಿದ್ದು, ಆಹಾರ ಸೇವಿಸುತ್ತಿರುವುದರಿಂದ ಚಿಕಿತ್ಸೆ ನೀಡಿ ಡಿಸ್ಚಾರ್ಜ್ ಮಾಡಲಾಗಿದೆ. ಆದರೆ ಮಗುವಿಗೆ ತಗುಲಿದ ಸೋಂಕು ಚೀನಾ ಸೋಂಕೆ ಅಥವಾ ಮಾಮೂಲು ಎಚ್ ಎಂಪಿವಿ ವೈರಸ್ ಎಂಬುದು ಇನ್ನೂ ದೃಢಪಟ್ಟಿಲ್ಲ ಎಂದು ಅವರು ತಿಳಿಸಿದ್ದಾರೆ.
ನಮಗೆ ಚೀನಾದಲ್ಲಿ ಮ್ಯುಟೇಟ್ ಆಗಿರುವ ವೈರಸ್ ಹೇಗಿದೆ ಎಂದು ತಿಳಿದಿಲ್ಲ. ಹೀಗಾಗಿ ಇಲ್ಲಿ ಪತ್ತೆಯಾಗಿರುವುದು ಸಾಮಾನ್ಯ HMPV ವೈರಸ್ಸೇ ಅಥವಾ ಚೀನಾದ ತಳಿಯಾ ಎಂಬ ಗೊಂದಲ ಇದೆ ಎಂದು ಅವರು ಸ್ಪಷ್ಟೊಪಡಿಸಿದರು.
ಭಾರತದಲ್ಲೂ ಸಾಮಾನ್ಯ HMPV ವೈರಸ್ ಶೇ 0.78 ರಷ್ಟು ಕಾಣಿಸುತ್ತದೆ ಎಂದು ಅವರು ತಿಳಿಸಿದ್ದಾರೆ. ಸದ್ಯ ಸೋಂಕು ಪತ್ತೆಯಾಗಿರುವ ಮಗುವಿಗೆ ಮತ್ತು ಕುಟುಂಬದವರಿಗೆ ಟ್ರಾವೆಲ್ ಹಿಸ್ಟರಿ ಇಲ್ಲ. ಈ ಹಿನ್ನೆಲೆಯ ಬಗ್ಗೆ ಆರೋಗ್ಯ ಇಲಾಖೆ ಕೂಡಾ ಪರಿಶೀಲನೆ ನಡೆಸುತ್ತಿದೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಹರ್ಷಗುಪ್ತ ತಿಳಿಸಿದ್ದಾರೆ.