Thursday, December 25, 2025
Google search engine
Homeರಾಜ್ಯರಾಜ್ಯದ ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವ ಸಂಭಾವನೆ 2,000 ರೂ. ಹೆಚ್ಚಳ!

ರಾಜ್ಯದ ಅತಿಥಿ ಶಿಕ್ಷಕರು, ಉಪನ್ಯಾಸಕರ ಗೌರವ ಸಂಭಾವನೆ 2,000 ರೂ. ಹೆಚ್ಚಳ!

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರಿಗೆ ರಾಜ್ಯ ಸರ್ಕಾರವು ಸಿಹಿ ಸುದ್ದಿ ನೀಡಿದೆ.

ಬಹುದಿನದ ಬೇಡಿಕೆಯಂತೆ, ಈ ಎಲ್ಲಾ ಅತಿಥಿ ಬೋಧಕರ ಮಾಸಿಕ ಗೌರವಧನವನ್ನು ತಲಾ 2,000 ರೂ. ಹೆಚ್ಚಿಸಿ ಸರ್ಕಾರ ಆದೇಶ ಹೊರಡಿಸಿದೆ. ಈ ಆದೇಶವು ತಕ್ಷಣದಿಂದಲೇ ಜಾರಿಗೆ ಬರಲಿದ್ದು, ಮುಂದಿನ ಆದೇಶದವರೆಗೆ ಈ ಪರಿಷ್ಕೃತ ಗೌರವ ಸಂಭಾವನೆ ಜಾರಿಯಲ್ಲಿರಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಈ ಹಿಂದೆ ಸರ್ಕಾರ ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರಿಗೆ ₹10,000 ಹಾಗೂ ಪ್ರೌಢಶಾಲಾ ಅತಿಥಿ ಶಿಕ್ಷಕರಿಗೆ ₹10,500 ಗೌರವ ಸಂಭಾವನೆಯನ್ನು ನಿಗದಿಪಡಿಸಿತ್ತು. ಇದೀಗ, ಈ ಮೊತ್ತಕ್ಕೆ ಹೆಚ್ಚುವರಿಯಾಗಿ 2,000 ರೂ. ಸೇರಿಸಲಾಗಿದ್ದು, ಪರಿಷ್ಕೃತ ಗೌರವ ಸಂಭಾವನೆಯು ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರಿಗೆ 12,000 ರೂ. ಹಾಗೂ ಪ್ರೌಢಶಾಲಾ ಅತಿಥಿ ಶಿಕ್ಷಕರಿಗೆ 12,500 ರೂ. ಆಗಲಿದೆ.

ಅಂತೆಯೇ, ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೂ 2,000 ಗಳಷ್ಟು ಗೌರವಧನ ಹೆಚ್ಚಳವಾಗಲಿದೆ. ಈ ಹಿಂದೆ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ 12,000 ರೂ. ನಿಗದಿಯಾಗಿತ್ತು. ಇಂದಿನ ಆದೇಶದಿಂದ ಪರಿಷ್ಕೃತ ಗೌರವ ಸಂಭಾವನೆಯು ಅತಿಥಿ ಉಪನ್ಯಾಸಕರಿಕೆ 14,000 ರೂ. ಆಗಲಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments