ಬ್ರೇಕ್ ಫೇಲ್ ಆದ ಸರ್ಕಾರಿ ಬಸ್ ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ 5 ಮಂದಿ ಮೃತಪಟ್ಟ ಭೀಕರ ಘಟನೆ ಮಂಗಳೂರಿನಲ್ಲಿ ಗುರುವಾರ ಸಂಭವಿಸಿದೆ.
ತಲಪಾಡಿಯಲ್ಲಿ ಗುರುವಾರ ಮಧ್ಯಾಹ್ನ ಬ್ರೇಕ್ ಫೇಲ್ ಆದ ಕೆಎಸ್ಸಾರ್ಟಿಸಿ ಬಸ್ ಹಿಮ್ಮುಖವಾಗಿ ಚಲಿಸಿ ನಿಂತಿದ್ದ ಆಟೋಗೆ ಡಿಕ್ಕಿ ಹೊಡೆದಿದೆ. ಇದರಿಂದ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಆಟೋದಲ್ಲಿ 5 ಮಂದಿ ಸ್ಥಳದಲ್ಲೇ ಅಸುನೀಗಿದ್ದಾರೆ.
ಮೃತರಲ್ಲಿ ನಾಲ್ವರು ಮಹಿಳೆಯರು ಮತ್ತು ಮಗು ಸೇರಿದೆ ಎಂದು ಹೇಳಲಾಗಿದೆ. ರಿಕ್ಷಾ ಚಾಲಕ ಗಂಭೀರ ಗಾಯಗೊಂಡಿದ್ದಾರೆ. ಬಸ್ಸು ಕಾಸರಗೋಡಿನಿಂದ ಮಂಗಳೂರು ಬಸ್ ನಿಲ್ದಾಣಕ್ಕೆ ಬರುತ್ತಿತ್ತು. ಮಂಜೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರ ವಿಚಾರಣೆಯ ಬಳಿಕ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ.


