Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ರಾಜ್ಯ

ಜಾತಿ ಗಣತಿ ವರದಿ ಅನುಷ್ಠಾನ ಶತಸಿದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 22 ವೀಕ್ಷಣೆಗಳು
siddaramiah

ಜಾತಿ ಗಣತಿ ವರದಿಯು ವೈಜ್ಞಾನಿಕವಾಗಿ ನಡೆದಿದ್ದು ಅದನ್ನು ನಮ್ಮ ಸರ್ಕಾರ ಖಂಡಿತವಾಗಿಯೂ ಜಾರಿಗೊಳಿಸುತ್ತದೆ ಇದರಲ್ಲಿ ಯಾವುದೇ ಸಂಶಯ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ .

ಬೆಂಗಳೂರಿನಲ್ಲಿ ಮಂಗಳವಾರ ನಡೆದ ಹಿಂದುಳಿದ ವರ್ಗಗಳ ಮುಖಂಡರು ಹಾಗೂ ಹಿಂದುಳಿದ ವರ್ಗಗಳ ಸಂಘ ಸಂಸ್ಥೆಗಳ ಪ್ರತಿನಿಧಿಗಳ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಜಾತಿ ಗಣತಿ ಅನುಷ್ಠಾನಕ್ಕೆ ಸಭೆಯಲ್ಲಿ ಒಕ್ಕೊರಲಿನಿಂದ ಒತ್ತಾಯ ಬಂದ ಸಂದರ್ಭದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಸರ್ಕಾರ ಜಾತಿ ಗಣತಿ ಪರವಾಗಿದೆ . ನಮ್ಮ ಸರ್ಕಾರ ಜಾತಿ ಗಣತಿ ವರದಿಯನ್ನು ಸ್ವೀಕರಿಸಿದೆ.‌ ಮುಂದಿನ ದಿನಗಳಲ್ಲಿ ಅದನ್ನು ಖಂಡಿತವಾಗಿಯೂ ಜಾರಿ ಮಾಡಲಾಗುತ್ತದೆ ಅದರ ಬಗ್ಗೆ ಅನುಮಾನ ಬೇಡ ಎಂದರು.

ತಮಿಳು ನಾಡು ಮಾದರಿಯಲ್ಲಿ ಮೀಸಲಾತಿ ಹೆಚ್ಚಳಕ್ಕೆ ಸಭೆ ಆಗ್ರಹಿಸಿದಾಗ 1992 ರ ಇಂದಿರಾ ಸಹಾನಿ ಕೇಸನ್ನು ಉಲ್ಲೇಖಿಸಿ ಮೀಸಲಾತಿ ಶೇಕಡ 50ರಷ್ಟು ಮೀರಬಾರದು ಎನ್ನುವ ಅಂಶವನ್ನು ಸಭೆಗೆ ತಿಳಿಸುತ್ತಾ, ಕಳೆದ ಸರ್ಕಾರದಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ಎಂದು ( EWS) ಮೀಸಲಾತಿ ಕಲ್ಪಿಸಿದ್ದು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ.
ಸಂವಿಧಾನದ ಆರ್ಟಿಕಲ್ ( 15)(16)ರ ಪ್ರಕಾರ ಮೀಸಲಾತಿ ನೀಡಬೇಕಾಗಿರುವುದು ಸಾಮಾಜಿಕವಾಗಿ ಶೈಕ್ಷಣಿಕವಾಗಿ ಹಿಂದುಳಿದವರಿಗೆ ಮಾತ್ರ ನೀಡಬೇಕು ಎಂದಿದೆ .

ಜಾತಿ ಗಣತಿಯ ವರದಿ ವೈಜ್ಞಾನಿಕವಾಗಿ ತಯಾರಾಗಿದ್ದು ಸಮಾಜದ ಎಲ್ಲಾ ವರ್ಗಗಳ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸ್ಥಿತಿಗತಿ ತಿಳಿಯಲು ಅನುಕೂಲ ವಾಗಿದೆ. ಆ ಪ್ರಕಾರ ಸರ್ಕಾರದ ಕಾರ್ಯಕ್ರಮಗಳನ್ನು ರೂಪಿಸಲು ಸಹಕಾರಿಯಾಗುತ್ತದೆ. ಇಷ್ಟು ವರ್ಷಗಳಾದರೂ ಸಮಾನತೆ ಯಾಕೆ ಬಂದಿರುವುದಿಲ್ಲ ಎಂಬುದು ಮುಖ್ಯ. ಕೆಲವರು ತಪ್ಪು ಗ್ರಹಿಕೆಯಿಂದ ಅದನ್ನು ವಿರೋಧಿಸುತ್ತಿದ್ದಾರೆ ಎಂದರು.

ಬಡವರು, ಹಿಂದುಳಿದವರು, ಅಲ್ಪಸಂಖ್ಯಾತರು ಮಹಿಳೆಯರು ಎಲ್ಲರನ್ನೂ ಮುಖ್ಯ ವಾಹಿನಿಗೆ ತರುವುದು ನಮ್ಮ ಸರ್ಕಾರದ ಉದ್ದೇಶ. ಅಸಮಾನತೆ ಹೋಗಬೇಕು ಜಾತಿ ವ್ಯವಸ್ಥೆಯಿಂದ ನಿರ್ಮಾಣವಾಗಿರುವ ಅಸಮಾನತೆಯಿಂದ ಬಹು ಸಂಖ್ಯಾತ ಜನ ಅವಕಾಶ ವಂಚಿತರಾಗಿದ್ದಾರೆ ಎಲ್ಲರಿಗೂ ಸಮಾನ ಅವಕಾಶ ನೀಡಬೇಕಿದೆ ತಳ ಸಮುದಾಯವಿರಲಿ, ಮೇಲ್ವರ್ಗವಿರಲಿ ಎಲ್ಲರಿಗೂ ಸಮಾನತೆ ಇರಬೇಕು ಎಂಬ ಅಂಶವನ್ನು ಬಾಬಾ ಸಾಹೇಬ್ ಅಂಬೇಡ್ಕರ್ ಹೇಳಿದ್ದಾರೆ

ಹಿಂದುಳಿದ ಜಾತಿಗಳಲ್ಲೂ ತಾರತಮ್ಯ ಅಸಮಾನತೆ ಇದೆ ಇದನ್ನು ಒಂದೇ ಬಾರಿಗೆ ಹೋಗಲಾಡಿಸಲು ಸಾಧ್ಯವಿಲ್ಲ. ಅಲೆಮಾರಿ ಜನಾಂಗಕ್ಕೆ ವಿಶೇಷ ಸ್ಥಾನಮಾನ ನೀಡುವ ಬಗ್ಗೆ ಪ್ರತಿಕ್ರಿಯಿಸಿ ಅಲೆಮಾರಿ ಆಯೋಗ ರಚನೆಗೆ ಉಂಟಾಗಿರುವ ಸಮಸ್ಯೆಗಳಿಂದಾಗಿ ಆಯೋಗ ರಚನೆ ಸಾಧ್ಯವಾಗಿರುವುದಿಲ್ಲ ಎಂದರು.

ಅಲೆಮಾರಿ ಜನಾಂಗಕ್ಕೆ ಉಚಿತ ಶಿಕ್ಷಣ ಹಕ್ಕು ಒತ್ತಾಯಕ್ಕೆ ಪ್ರತಿಕ್ರಿಯಿಸಿ ಸರ್ಕಾರ ಶಿಕ್ಷಣದ ಹಕ್ಕನ್ನು ನೀಡಿದೆ (RTE) ಪ್ರಕಾರ ಸರ್ಕಾರಿ ಶಾಲೆಗಳಲ್ಲಿ ಉಚಿತ ಶಿಕ್ಷಣ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿಯೂ ಅವಕಾಶ ಸಿಗಲು ಸರ್ಕಾರ ಅವಕಾಶ ಮಾಡಿಕೊಟ್ಟಿದೆ. ಈ ಬಾರಿಯ ಆಯವ್ಯಯದಲ್ಲಿ ಅಲೆಮಾರಿ ಜನಾಂಗಕ್ಕೆ ವಿಶೇಷ ಗಮನ ಹರಿಸುವುದಾಗಿ ತಿಳಿಸಿದರು.

ಅತಿ ಹಿಂದುಳಿದ ವರ್ಗದವರಿಗೂ ಕಾರ್ಯಕ್ರಮಗಳನ್ನು ಈ ಬಾರಿಯ ಆಯವ್ಯಯದಲ್ಲಿ ಅನುಷ್ಠಾನಗೊಳಿಸಲು ಪ್ರಯತ್ನಿಸುವುದಾಗಿ ಹೇಳಿದರು. ಜೊತೆಗೆ ಹಣಕಾಸಿನ ಲಭ್ಯತೆಗೆ ಅನುಗುಣವಾಗಿ ಹಿಂದುಳಿದ ವರ್ಗಗಳಿಗೆ ಕಾರ್ಯಕ್ರಮಗಳನ್ನು ರೂಪಿಸುವುದಾಗಿ ಭರವಸೆ ನೀಡಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment