Thursday, December 25, 2025
Google search engine
Homeರಾಜ್ಯರೈಲ್ವೆ ನೇಮಕಾತಿ ಪರೀಕ್ಷೆಯಲ್ಲಿ ಜನಿವಾರ, ಮಂಗಳಸೂತ್ರ ಧರಿಸಲು ಕೇಂದ್ರ ಕ್ರಮ

ರೈಲ್ವೆ ನೇಮಕಾತಿ ಪರೀಕ್ಷೆಯಲ್ಲಿ ಜನಿವಾರ, ಮಂಗಳಸೂತ್ರ ಧರಿಸಲು ಕೇಂದ್ರ ಕ್ರಮ

ರಾಜ್ಯದಲ್ಲಿ ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ್ದಕ್ಕೆ ಪೋಷಕರು ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ಕೇಂದ್ರ ಸರ್ಕಾರ ನಾಳೆಯಿಂದ ನಡೆಯಲಿರುವ ರೈಲ್ವೆ ನೇಮಕಾತಿ ಪರೀಕ್ಷೆ ವೇಳೆ ಯಾವುದೇ ತೊಂದರೆ ಆಗದಂತೆ ಕ್ರಮಕೈಗೊಳ್ಳಲು ಮುಂದಾಗಿದೆ.

ಏಪ್ರಿಲ್ 28, 29 ಮತ್ತು 30 ರಂದು ರೈಲ್ವೆ ಇಲಾಖೆಯ ನೇಮಕಾತಿಗಾಗಿ ಪರೀಕ್ಷೆ ನಡೆಯುತ್ತಿದೆ. ಪರೀಕ್ಷೆ ವೇಳೆ ಜನಿವಾರ, ಮಂಗಳಸೂತ್ರ ಸೇರಿದಂತೆ ಯಾವುದೇ ಧಾರ್ಮಿಕ ಚಿಹ್ನೆಯ ವಸ್ತ್ರ ಧರಿಸಲು ಅವಕಾಶ ನೀಡಲು ಕೇಂದ್ರ ಮುಂದಾಗಿದೆ.

ಅಭ್ಯರ್ಥಿಗಳು ಜನಿವಾರ, ಮಾಂಗಲ್ಯ ಸೂತ್ರ ತೆಗೆದಿಟ್ಟು ಪರೀಕ್ಷೆ ಬರೆಯಬೇಕೆಂಬ ವಿಷಯವನ್ನು ಪರೀಕ್ಷಾ ನಿಯಮದಲ್ಲಿ ಉಲ್ಲೇಖಿಸಲಾಗಿದೆಯೆಂಬ ದೂರುಗಳು ನನಗೆ ಬಂದಿದೆ. ಈ ಬಗ್ಗೆ, ಸಂಸದರು, ಶಾಸಕರು ಇದನ್ನು ಸರಿಪಡಿಸುವಂತೆ ಕೇಂದ್ರ ರೈಲ್ವೆ ಸಹಾಯಕ ಸಚಿವ ವಿ.ಸೋಮಣ್ಣ ಮನವಿ ಮಾಡಿದ್ದಾರೆ.

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಮತ್ತು ವಿವಿಧ ಸಂಘಟನೆಗಳು ಈ ಬಗ್ಗೆ ನನ್ನ ಗಮನವನ್ನು ಸೆಳೆದಿದ್ದು, ದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವ ಶ್ರೀ ಅಶ್ವಿನಿ ವೈಷ್ಣವ್ ಅವರೊಂದಿಗೆ ಮತ್ತು ರೈಲ್ವೆ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಈ ಗೊಂದಲ ನಿವಾರಿಸಲಾಗಿದೆ. ಜನಿವಾರ, ಮಾಂಗಲ್ಯ ಇತ್ಯಾದಿ ಸಂಸ್ಕೃತಿಯನ್ನು ಬಿಂಬಿಸುವ ಯಾವುದೇ ವಸ್ತುವನ್ನು ಧರಿಸಿ ಬಂದಲ್ಲಿ ಅಭ್ಯರ್ಥಿಗಳಿಗೆ ತೊಂದರೆ ನೀಡಬಾರದೆಂದು ಸಂಬಂಧಪಟ್ಟವರಿಗೆ ಸೂಚನೆ ನೀಡಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತರ ಎಲ್ಲಾ ಪರೀಕ್ಷಾ ನಿಯಮವನ್ನು ಪಾಲಿಸಿ, ಅಭ್ಯರ್ಥಿಗಳಿಗೆ ಪರೀಕ್ಷೆ ಬರೆಯಲು ಅನುವು ಮಾಡಿಕೊಡಲು ಸೂಚಿಸಲಾಗಿದೆ. ಪರೀಕ್ಷಾ ಅಭ್ಯರ್ಥಿಗಳು ಸಹ ನಿಯಮಾನುಸಾರ ಪರೀಕ್ಷೆ ಬರೆಯುವಂತೆ ಮನವಿ ಮಾಡುತ್ತೇನೆ. ಅಭ್ಯರ್ಥಿಗಳು ಗೊಂದಲಕ್ಕೀಡಾಗಬಾರದೆಂದು ಮನವಿ ಮಾಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments