Wednesday, December 24, 2025
Google search engine
Homeರಾಜ್ಯಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ ಕೆ-ಸೆಟ್‌ ಅರ್ಜಿ ಆಹ್ವಾನ

ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ ಕೆ-ಸೆಟ್‌ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ (ಕೆ- ಸೆಟ್​​) ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಅರ್ಜಿ ಆಹ್ವಾನಿಸಲಾಗಿದ್ದು, ಇಂದಿನಿಂದಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ.

ಸಹಾಯಕ ಪ್ರಾಧ್ಯಾಪಕರ ಹುದ್ದೆ ನಿರ್ವಹಣೆಗೆ ಈ ಪರೀಕ್ಷೆ ಅರ್ಹತೆ ಕಡ್ಡಾಯವಾಗಿರುವ ಹಿನ್ನೆಲೆ ಈ ಪರೀಕ್ಷೆ ಹೆಚ್ಚು ಮಹತ್ವಪೂರ್ಣವಾಗಿದೆ. ಸಹಾಯಕ ಪ್ರಾಧ್ಯಾಪಕರ ಹುದ್ದೆಯ ಆಕಾಂಕ್ಷಿಗಳಾಗಿರುವ ಸ್ನಾತಕೋತ್ತರ ಪದವೀಧರ ಅಭ್ಯರ್ಥಿಗಳು ಈ ಪರೀಕ್ಷೆಯಲ್ಲಿ ತೇರ್ಗಡೆಯಾಗಬೇಕು.

2025ನೇ ಸಾಲಿನ ಕೆ ಸೆಟ್ ಪರೀಕ್ಷೆಗೆ ಇಂದಿನಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದೆ. ಒಟ್ಟು 32 ವಿಷಯಗಳಲ್ಲಿ ಕೆಸೆಟ್​ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆಯಲ್ಲಿ ಉತ್ತಿರ್ಣರಾದವರು ರಾಜ್ಯದ ಯಾವುದೇ ವಿಶ್ವವಿದ್ಯಾಲಯ, ಪ್ರಥಮ ದರ್ಜೆ ಕಾಲೇಜು, ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ನೇಮಕಾತಿಗೆ ಅರ್ಹತೆ ಪಡೆಯುತ್ತಾರೆ.

ವಿದ್ಯಾರ್ಹತೆ: ಅಧಿಕೃತ ವಿಶ್ವ ವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪೂರೈಸಿದ ಅಭ್ಯರ್ಥಿಗಳು ಈ ಪರೀಕ್ಷೆಯನ್ನು ಬರೆಯಬಹುದಾಗಿದೆ.

ವಯೋಮಿತಿ: ಸ್ನಾತಕೋತ್ತರ ಪದವಿ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಯಾವುದೇ ಗರಿಷ್ಠ ವಯೋಮಿತಿ ಇಲ್ಲ.

ಅರ್ಜಿ ಸಲ್ಲಿಕೆ: ಈ ಹುದ್ದೆಗೆ ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಸಾಮಾನ್ಯ, ಪ್ರವರ್ಗ 2 ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 1,000 ಮತ್ತು ಪರಿಶಿಷ್ಟ ಜಾತಿ, ಪಂಗಡ, ವಿಶೇಷಚೇತನ ಅಭ್ಯರ್ಥಿಗಳಿಗೆ 700 ರೂ. ನಿಗದಿಸಲಾಗಿದೆ.

ಪರೀಕ್ಷೆ: ಈ ಅರ್ಹತಾ ಪರೀಕ್ಷೆಯು ಎರಡು ಪತ್ರಿಕೆಗಳನ್ನು ಒಳಗೊಂಡಿರಲಿದೆ. ಈ ಪರೀಕ್ಷೆಯಲ್ಲಿ ಕನಿಷ್ಠ 40 ಅಂಕಗಳನ್ನು ಗಳಿಸುವ ಮೂಲಕ ಅರ್ಹತೆ ಸಂಪಾದಿಸಬಹುದು. ರಾಜ್ಯದ ಪ್ರಮುಖ 11 ಕೇಂದ್ರದಲ್ಲಿ ಈ ಪರೀಕ್ಷೆ ನಡೆಯಲಿದೆ.

ಅರ್ಜಿ ಸಲ್ಲಿಕೆ: ಈ ಅರ್ಹತಾ ಪರೀಕ್ಷೆಗೆ ಇಂದಿನಿಂದ ಅಂದರೆ, ಆಗಸ್ಟ್​ 28 ರಿಂದ ಅಭ್ಯರ್ಥಿಗಳು ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ಸೆ. 18 ಆಗಿದೆ. ಅರ್ಜಿ ಶುಲ್ಕ ಪಾವತಿಗೆ ಕಡೆಯ ದಿನಾಂಕ ಸೆಪ್ಟೆಂಬರ್​ 19 ಆಗಿದೆ. ಈ ಪರೀಕ್ಷೆಗಳನ್ನು ಪ್ರಾಧಿಕಾರ ನವೆಂಬರ್​ 2ರಂದು ನಡೆಸುವ ಸಾಧ್ಯತೆ ಇದೆ ಎಂಬ ದಿನಾಂಕವನ್ನು ಘೋಷಿಸಲಾಗಿದೆ.

ಅರ್ಹತಾ ಪರೀಕ್ಷೆ ಕುರಿತು ಹೆಚ್ಚಿನ ವಿವರ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು cetonline.karnataka.gov.in ಇಲ್ಲಿಗೆ ಭೇಟಿ ನೀಡಬಹುದಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments