Sunday, 22 November 2026 — Kannadavahini
BREAKING NEWS
ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್
ರಾಜ್ಯ

ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
3 ನಿಮಿಷ ಓದು 49 ವೀಕ್ಷಣೆಗಳು
vidhana soudha
vidhana soudha

ಬೆಂಗಳೂರು: ಕಾಡುಗೊಲ್ಲ (ಅಡವಿಗೊಲ್ಲ) ಮತ್ತು ಹಟ್ಟಿಗೊಲ್ಲ ಸಮುದಾಯವನ್ನು ಪರಿಶಿಷ್ಟ ಪಂಗಡಗಳ (ಎಸ್‌ಟಿ) ಪಟ್ಟಿಗೆ ಸೇರ್ಪಡೆಗೊಳಿಸಬೇಕೆಂಬ ಬಹುದಿನಗಳ ಬೇಡಿಕೆಗೆ ಸ್ಪಂದಿಸಿರುವ ರಾಜ್ಯ ಸರ್ಕಾರ, ಈ ಸಂಬಂಧ ಹೊಸದಾಗಿ ಸಮಗ್ರ ಕುಲಶಾಸ್ತ್ರೀಯ ಅಧ್ಯಯನ ನಡೆಸಲು ನಿರ್ಧರಿಸಿದೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಈ ಹಿಂದೆ ರಾಜ್ಯ ಸರ್ಕಾರ ಸಲ್ಲಿಸಿದ್ದ ಪ್ರಸ್ತಾವನೆಗಳಿಗೆ ಕೇಂದ್ರ ಸರ್ಕಾರದಿಂದ ಅನುಮೋದನೆ ದೊರೆಯದ ಹಿನ್ನೆಲೆಯಲ್ಲಿ, ಈ ಬಾರಿ ಹೊಸ ಸಾಕ್ಷ್ಯಾಧಾರಗಳು ಹಾಗೂ ಸಮಗ್ರ ಮಾಹಿತಿಯೊಂದಿಗೆ ಮತ್ತೊಮ್ಮೆ ಶಿಫಾರಸು ಸಲ್ಲಿಸಲು ಸರ್ಕಾರ ಮುಂದಾಗಿದೆ.

ಕಾಡುಗೊಲ್ಲ ಸಮುದಾಯದ ಸಾಮಾಜಿಕ, ಸಾಂಸ್ಕೃತಿಕ, ಆರ್ಥಿಕ ಹಾಗೂ ಬುಡಕಟ್ಟು ಹಿನ್ನೆಲೆಯನ್ನು ಸಮಗ್ರವಾಗಿ ಅಧ್ಯಯನ ಮಾಡಿ ವರದಿ ಸಿದ್ಧಪಡಿಸಲು ಧಾರವಾಡದ ಸೆಂಟರ್ ಫಾರ್ ಮಲ್ಟಿ-ಡಿಸಿಪ್ಲಿನರಿ ಡೆವಲಪ್‌ಮೆಂಟ್ ರಿಸರ್ಚ್  ಸಂಸ್ಥೆಯ ತಜ್ಞ ಮಾನವಶಾಸ್ತ್ರಜ್ಞರ ನೆರವು ಪಡೆಯಲು ನಿರ್ಧರಿಸಲಾಗಿದೆ.

ಈ ಸಂಬಂಧ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯು ನವೆಂಬರ್ 18ರಂದು ಆದೇಶ ಹೊರಡಿಸಿದೆ. ಮೂರು ತಿಂಗಳೊಳಗೆ ಅಧ್ಯಯನ ಪೂರ್ಣಗೊಳಿಸಿ ವರದಿ ಸಲ್ಲಿಸುವಂತೆ ಇಲಾಖೆಯ ನಿರ್ದೇಶಕರು ಹಾಗೂ ಮೈಸೂರಿನ ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯ ನಿರ್ದೇಶಕರಿಗೆ ಸೂಚಿಸಲಾಗಿದೆ.

ಸಮುದಾಯದ ವಿಶಿಷ್ಟ ಜೀವನಶೈಲಿ, ಸಾಮಾಜಿಕ ಸ್ಥಿತಿಗತಿ, ಸಾಂಪ್ರದಾಯಿಕ ಆಚರಣೆಗಳು, ವಾಸಸ್ಥಳ ಹಾಗೂ ಬುಡಕಟ್ಟು ಲಕ್ಷಣಗಳನ್ನು ದಾಖಲಿಸಿ, ಕೇಂದ್ರ ಸರ್ಕಾರದ ಪರಿಶೀಲನೆಗೆ ಅಗತ್ಯವಿರುವ ಸಮಗ್ರ ದಾಖಲೆಗಳನ್ನು ಸಿದ್ಧಪಡಿಸುವಂತೆ ಸೂಚಿಸಲಾಗಿದೆ.

ಕೇಂದ್ರದಿಂದ ಆಕ್ಷೇಪ:

ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಸೇರಿಸುವಂತೆ ರಾಜ್ಯ ಸರ್ಕಾರ 2015ರಿಂದ ಕೇಂದ್ರಕ್ಕೆ ಪ್ರಸ್ತಾವನೆಗಳನ್ನು ಸಲ್ಲಿಸುತ್ತಾ ಬಂದಿದೆ. 2015ರ ಮಾರ್ಚ್ 18ರಂದು ಮೊದಲ ಪ್ರಸ್ತಾವನೆ ಸಲ್ಲಿಸಲಾಗಿತ್ತು. ನಂತರ ಆಗಸ್ಟ್ 17, 2018ರ ಸೆಪ್ಟೆಂಬರ್ 28, 2021ರ ಅಕ್ಟೋಬರ್ 12, 2022ರ ಫೆಬ್ರವರಿ 4, 2023ರ ಜೂನ್ 5 ಹಾಗೂ 2025ರ ಏಪ್ರಿಲ್ 3ರಂದು ಪ್ರಸ್ತಾವನೆಗಳನ್ನು ಸಲ್ಲಿಸಲಾಗಿತ್ತು.
ಆದರೆ, ಭಾರತದ ರಿಜಿಸ್ಟ್ರಾರ್ ಜನರಲ್ ಕಚೇರಿ (ಒಆರ್ ಜಿಐ) ವಿವಿಧ ಹಂತಗಳಲ್ಲಿ ಆಕ್ಷೇಪಣೆ ವ್ಯಕ್ತಪಡಿಸಿ ಶಿಫಾರಸು ಮಾಡಲು ನಿರಾಕರಿಸಿತ್ತು. ಹಿಂದಿನ ಪ್ರಸ್ತಾವನೆಗಳಲ್ಲಿ ಹೊಸ ಮಾಹಿತಿ ಹಾಗೂ ಹೆಚ್ಚುವರಿ ಸಾಕ್ಷ್ಯಾಧಾರಗಳ ಕೊರತೆಯಿದೆ ಎಂಬುದು ಕೇಂದ್ರದ ಪ್ರಮುಖ ಆಕ್ಷೇಪಣೆಯಾಗಿತ್ತು.

2026ರ ಜುಲೈ 22ರಂದು ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವಾಲಯವು ರಾಜ್ಯದ ಪ್ರಸ್ತಾವನೆಯನ್ನು ಅಧಿಕೃತವಾಗಿ ತಿರಸ್ಕರಿಸಿತ್ತು. ಕೇಂದ್ರದ ಪರಿಷ್ಕೃತ ಮಾರ್ಗಸೂಚಿಗಳ ಪ್ರಕಾರ, ಎಸ್‌ಟಿ ಪಟ್ಟಿಗೆ ಹೊಸ ಸಮುದಾಯವನ್ನು ಸೇರ್ಪಡೆಗೊಳಿಸುವ ಪ್ರಕ್ರಿಯೆಗೆ ಭಾರತದ ರಿಜಿಸ್ಟ್ರಾರ್ ಜನರಲ್ ಒಪ್ಪಿಗೆ ಅಗತ್ಯವಾಗಿದೆ.

ಹೊಸ ವರದಿಗೆ ಸೋಮಣ್ಣ ಸಲಹೆ:

ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ ಅವರು ಅಕ್ಟೋಬರ್ 7 ಮತ್ತು 30ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದು ಹೊಸ ಅಧ್ಯಯನ ನಡೆಸುವಂತೆ ಸಲಹೆ ನೀಡಿದ್ದರು.

ಹಿಂದಿನ ಪ್ರಸ್ತಾವನೆಗಳಲ್ಲಿನ ಮಾಹಿತಿಯನ್ನೇ ಪುನರಾವರ್ತಿಸಿ ಸಲ್ಲಿಸುತ್ತಿರುವುದರಿಂದ ಕೇಂದ್ರದ ಅನುಮೋದನೆ ದೊರೆಯುತ್ತಿಲ್ಲ. ಹೀಗಾಗಿ ತಜ್ಞರ ಸಮಿತಿ ರಚಿಸಿ, ಕೇಂದ್ರದ ಪರಿಷ್ಕೃತ ಮಾನದಂಡಗಳಿಗೆ ಅನುಗುಣವಾಗಿ ಹೊಸ ಹಾಗೂ ಸಮಗ್ರ ವರದಿ ಸಿದ್ಧಪಡಿಸಬೇಕು ಎಂದು ಅವರು ಮನವಿ ಮಾಡಿದ್ದರು.

6 ಲಕ್ಷಕ್ಕೂ ಅಧಿಕ ಜನರು:

ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮದ ಅಧ್ಯಕ್ಷ ಮಹೇಶ್ ಎಂ. ಅವರು ಅಕ್ಟೋಬರ್ 31ರಂದು ಮುಖ್ಯಮಂತ್ರಿಗೆ ಮನವಿ ಸಲ್ಲಿಸಿ ಸಮುದಾಯದ ಸ್ಥಿತಿಗತಿ ಹಾಗೂ ಎಸ್‌ಟಿ ಸೇರ್ಪಡೆಯ ಬೇಡಿಕೆಯನ್ನು ಸರ್ಕಾರದ ಗಮನಕ್ಕೆ ತಂದಿದ್ದರು.
ರಾಜ್ಯದ 12 ಜಿಲ್ಲೆಗಳ 40 ತಾಲೂಕುಗಳ ವ್ಯಾಪ್ತಿಯ 1,273 ಹಟ್ಟಿಗಳಲ್ಲಿ ಆರು ಲಕ್ಷಕ್ಕೂ ಅಧಿಕ ಕಾಡುಗೊಲ್ಲರು ವಾಸಿಸುತ್ತಿದ್ದಾರೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ.

ಸಮುದಾಯದ ಅನೇಕ ಕುಟುಂಬಗಳು ಮುಖ್ಯ ಜನವಸತಿ ಪ್ರದೇಶಗಳಿಂದ ಸುಮಾರು 3ರಿಂದ 4 ಕಿಲೋಮೀಟರ್ ದೂರದಲ್ಲಿರುವ ಅರಣ್ಯದಂಚಿನ ಪ್ರದೇಶಗಳಲ್ಲಿ ನೆಲೆಸಿದ್ದು, ರಸ್ತೆ, ಕುಡಿಯುವ ನೀರು ಸೇರಿದಂತೆ ಮೂಲಸೌಕರ್ಯಗಳ ಕೊರತೆಯನ್ನು ಎದುರಿಸುತ್ತಿವೆ ಎಂದು ವಿವರಿಸಲಾಗಿದೆ.

ಕೇಂದ್ರಕ್ಕೆ ಮರುಶಿಫಾರಸು:

ಕೇಂದ್ರ ಸರ್ಕಾರ ಈ ಹಿಂದೆ ವ್ಯಕ್ತಪಡಿಸಿದ್ದ ಆಕ್ಷೇಪಣೆಗಳನ್ನು ಗಮನದಲ್ಲಿಟ್ಟುಕೊಂಡು, ಈ ಬಾರಿ ಸಮುದಾಯದ ಸಾಮಾಜಿಕ ಮತ್ತು ಸಾಂಸ್ಕೃತಿಕ ಹಿನ್ನೆಲೆಯ ಕುರಿತು ವೈಜ್ಞಾನಿಕ ಹಾಗೂ ಸಮಗ್ರ ಅಧ್ಯಯನ ನಡೆಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಸಿಎಂಡಿಆರ್ ಸಂಸ್ಥೆಯ ತಜ್ಞರ ನೆರವಿನಿಂದ ಮೂರು ತಿಂಗಳೊಳಗೆ ವರದಿ ಸಿದ್ಧಪಡಿಸಿ, ಅಗತ್ಯ ದಾಖಲೆಗಳು ಮತ್ತು ಹೊಸ ಸಾಕ್ಷ್ಯಾಧಾರಗಳೊಂದಿಗೆ ಕೇಂದ್ರ ಸರ್ಕಾರಕ್ಕೆ ಮತ್ತೊಮ್ಮೆ ಶಿಫಾರಸು ಸಲ್ಲಿಸುವುದು ಸರ್ಕಾರದ ಮುಂದಿನ ಉದ್ದೇಶವಾಗಿದೆ. ಈ ಹೊಸ ಅಧ್ಯಯನದ ವರದಿಯ ಆಧಾರದ ಮೇಲೆ ಕಾಡುಗೊಲ್ಲರ ಎಸ್‌ಟಿ ಸೇರ್ಪಡೆ ಬೇಡಿಕೆಗೆ ಮತ್ತೊಮ್ಮೆ ಬಲ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8432 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment