Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ರಾಜ್ಯ

ತುಂಬಿ ಹರಿಯುತ್ತಿರುವ ಕಾಳಿ ನದಿ: ಸೂಪಾ ಅಣೆಕಟ್ಟೆ ಕೆಳಭಾಗದಲ್ಲಿ ಪ್ರವಾಹದ ಮುನ್ನೆಚ್ಚರಿಕೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 27 ವೀಕ್ಷಣೆಗಳು
supa dam

ಬೆಂಗಳೂರು,: ಕಾಳಿ ನದಿ ಯೋಜನೆ 1ನೇ ಹಂತದ ಸೂಪಾ ಅಣೆಕಟ್ಟೆಯ ಕೆಳದಂಡೆ ಮತ್ತು ನದಿ ಪಾತ್ರದುದ್ದಕ್ಕೂ ಕರ್ನಾಟಕ ವಿದ್ಯುತ್ ನಿಗಮ (ಕೆಪಿಸಿಎಲ್) ವತಿಯಿಂದ ಪ್ರವಾಹದ ಮುನ್ನೆಚ್ಚರಿಕೆ ನೀಡಲಾಗಿದೆ.

ಈ ಕುರಿತು ಪ್ರಕಟಣೆ ಹೊರಡಿಸಿರುವ ಕೆಪಿಸಿಎಲ್, ಸೂಪಾ ಅಣೆಕಟ್ಟೆಯ ಜಲಾನಯನ ಪ್ರದೇಶಗಳಲ್ಲಿ ಸತತ ಮಳೆಯಾಗುತ್ತಿದ್ದು, ಜಲಾಶಯಕ್ಕೆ ಹೇರಳ ನೀರು ಹರಿದು ಜಲಾಶಯದ ನೀರಿನ ಮಟ್ಟ ಏರಿಕೆಯಾಗುತ್ತಿದೆ. ಆದ್ದರಿಂದ ಸೂಪಾ ಅಣೆಕಟ್ಟೆಯ ಕೆಳದಂಡೆ ಮತ್ತು ನದಿಯ ಪಾತ್ರದುದ್ದಕ್ಕೂ ವಾಸಿಸುತ್ತಿರುವ ಸಾರ್ವಜನಿಕರು ತಮ್ಮ ಸರಂಜಾಮುಗಳು, ಜಾನುವಾರುಗಳೊಂದಿಗೆ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಗೊಳ್ಳುವಂತೆ ಮನವಿ ಮಾಡಿದೆ.

ಸೂಪಾ ಅಣೆಕಟ್ಟೆಯ ಕೆಳಭಾಗದ ನದಿ ಪಾತ್ರದಲ್ಲಿ ದೋಣಿ ಸಂಚಾರ, ಮೀನುಗಾರಿಕೆ ಮತ್ತು ಇತರೆ ಚಟುವಟಿಕೆಗಳನ್ನು ಮಳೆಗಾಲ ಮುಗಿಯುವವರೆಗೂ ನಡೆಸದಂತೆ ಮನವಿ ಮಾಡಿದೆ.

ಸೂಪಾ ಜಲಾಶಯದ ಗರಿಷ್ಠ ಮಟ್ಟವು 564 ಮೀಟರ್ ಆಗಿದ್ದು, 147.55 ಟಿಎಂಸಿ ನೀರು ಸಂಗ್ರಹಣಾ ಸಾಮರ್ಥ್ಯ ಹೊಂದಿದೆ. ಪ್ರಸ್ತುತ ಜಲಾಶಯದ ನೀರಿನ ಮಟ್ಟವು 550.75ರಷ್ಟಿದ್ದು, 96.245 ಟಿಎಂಸಿ ನೀರು ಸಂಗ್ರಹವಾಗಿ ಜಲಾಶಯದ ನೀರಿನ ಸಾಮರ್ಥ್ಯ ಶೇ. 65.23ಕ್ಕೆ ಏರಿಕೆಯಾಗಿದೆ.

ಪ್ರಸ್ತುತ ನೀರಿನ ಒಳಹರಿವು 13,481 ಕ್ಯೂಸೆಕ್ ಇದ್ದು, ಇದೇ ರೀತಿ ನೀರು ಹರಿದುಬಂದರೆ ಗರಿಷ್ಠ ಮಟ್ಟ ತಲುಪುವ ಸಾಧ್ಯತೆ ಇದೆ. ಆದ್ದರಿಂದ ಜಲಾಶಯದ ಸುರಕ್ಷತಾ ದೃಷ್ಟಿಯಿಂದ ಹೆಚ್ಚುವರಿ ನೀರನ್ನು ಹೊರಬಿಡಲಾಗುತ್ತದೆ. ಹೀಗಾಗಿ ಕೆಪಿಸಿಎಲ್ ನದಿ ಕೆಳಭಾಗದ ಜನರಿಗೆ ಪ್ರವಾಹದ ಮುನ್ನೆಚ್ಚರಿಕೆ ನೀಡಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment