Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ರಾಜ್ಯ

15.12 ಲಕ್ಷ ಅನರ್ಹ ಬಿಬಿಎಲ್​​ ಕಾರ್ಡ್​​ ಪತ್ತೆ ಹಚ್ಚಿದ ರಾಜ್ಯ ಸರ್ಕಾರ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 31 ವೀಕ್ಷಣೆಗಳು
bpl car

ಬೆಂಗಳೂರು: ರಾಜ್ಯ ಸರ್ಕಾರವು ಕಳೆದ 5 ತಿಂಗಳಲ್ಲಿ 15.12 ಲಕ್ಷ ಮಂದಿ ಅನರ್ಹ ಬಿಬಿಎಲ್​​ ಕಾರ್ಡ್​​ ಹೊಂದಿರುವವರನ್ನು ಪತ್ತೆ ಮಾಡಿದೆ.

ಅನರ್ಹರನ್ನು ಗುರುತಿಸಿರುವ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಈ ಪೈಕಿ ಸುಮಾರು ಐದೂವರೆ ಸಾವಿರ ಬಿಪಿಎಲ್​​ ಕಾರ್ಡ್​​ಗಳನ್ನು ಶಾಶ್ವತವಾಗಿ ರದ್ದು ಮಾಡಿದೆ. 4 ಲಕ್ಷಕ್ಕೂ ಹೆಚ್ಚು ಕಾರ್ಡ್​​ಗಳನ್ನು ಬಿಪಿಎಲ್​​ನಿಂದ ಎಪಿಎಲ್​​ ಆಗಿ ಬದಲಾವಣೆ ಮಾಡಿ 23 ಸಾವಿರಕ್ಕೂ ಹೆಚ್ಚು ಪಡಿತರ ಚೀಟಿಗಳು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ.

ಮತ್ತೊಂದೆಡೆ ಅರ್ಹರಿಗೆ ಬಿಪಿಎಲ್ ಕಾರ್ಡ್ ಸಿಗುತ್ತಿಲ್ಲ. ಬದಲಾಗಿ ಅವು ಅನರ್ಹರ ಪಾಲಾಗುತ್ತಿದೆ ಎಂದು ಜನ ಸಾಮಾನ್ಯರಿಂದಲೂ ಆಕ್ರೋಶ ಕೇಳಿಬಂದಿದೆ. ಕಾರು, ಬಂಗಲೆ, ಜಮೀನು ಇರುವ ಮಂದಿಯೇ ಬಿಪಿಎಲ್ ಕಾರ್ಡ್ ಹೊಂದಿದ್ದಾರೆ. ಹೀಗಾಗಿ ಅನರ್ಹರನ್ನು ಗುರುತಿಸಿ ಅವರ ಕಾರ್ಡ್ ರದ್ದು ಮಾಡುವ ಕಾರ್ಯ ತೀವ್ರಗೊಳಿಸಬೇಕು. ಕಡು ಬಡವರು, ದುಡಿದು ತಿನ್ನುವ ಮಂದಿಗೆ ಬಿಪಿಎಲ್ ಕಾರ್ಡ್ ಸಿಗಬೇಕು. ಕಾರ್ಯಾಚರಣೆ ಹೆಸರಲ್ಲಿ ಬಡವರ ಕಾರ್ಡ್ ಕಿತ್ತುಕೊಳ್ಳದೆ, ಶ್ರೀಮಂತರಿಗೆ ಬಿಸಿ ಮುಟ್ಟಿಸಬೇಕು ಎಂದು ಆಹಾರ ಇಲಾಖೆಯನ್ನು ಸಾರ್ವಜನಿಕರು ಆಗ್ರಹಿಸಿದ್ದಾರೆ.

ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ ಪಡೆಯಲು ಇರುವ ಆದಾಯ ಮಿತಿ ಪರಿಷ್ಕರಣೆಗೆ ಚಿಂತನೆ ನಡೆದಿದೆ ಎಂದು ಈ ಹಿಂದೆ ಆಹಾರ ಸಚಿವ ಕೆ. ಹೆಚ್. ಮುನಿಯಪ್ಪ ತಿಳಿಸಿದ್ದ ಕಾರಣ ಬಿಪಿಎಲ್​​ ಕಾರ್ಡ್​​ ಹೊಂದಿರುವ ಅನೇಕ ಫಲಾನುಭವಿಗಳು ನಿಟ್ಟುಸಿರು ಬಿಟ್ಟಿದ್ದರು.

ಕೇಂದ್ರ ಸರ್ಕಾರ ಬಿಪಿಎಲ್ ಕಾರ್ಡ್​​ದಾರರ ಆದಾಯವನ್ನು 1.20ಲಕ್ಷ ರೂ.ಗೆ ಮಿತಿಗೊಳಿಸಿದೆ. ಆದರೆ ಕೂಲಿ ಕೆಲಸಗಾರರಿಗೂ ಪ್ರತಿದಿನ 500 ರೂ. ದೊರೆಯುತ್ತದೆ. ಇದರ ಆಧಾರದಲ್ಲಿ ಅವರ ಆದಾಯವೂ ವರ್ಷಕ್ಕೆ 1.80 ಲಕ್ಷ ರೂ. ಗಿಂತ ಅಧಿಕವಾಗುತ್ತಿದೆ. ಹೀಗಾಗಿ ಈ ಬಗ್ಗೆ ಪರಿಷ್ಕರಣೆ ಕುರಿತು ಚಿಂತನೆ ನಡೆದಿದೆ ಎಂದು ಸಚಿವರು ಹೇಳಿದ್ದ ಹಿನ್ನೆಲೆ ಮಿತಿಗಿಂತ ಅಧಿಕ ಆದಾಯ ಹೊಂದಿದ್ದು, ಬಿಪಿಎಲ್​​ ಕಾರ್ಡ್​​ ಪಡೆದುಕೊಂಡಿದ್ದವರಲ್ಲಿ ಹೊಸ ಆಶಾಭಾವನೆ ಮೂಡಿತ್ತು.

ಕಳೆದ 5 ತಿಂಗಳ ಕಾರ್ಯಾಚರಣೆ

ಬಿಪಿಎಲ್​​ನಿಂದ ಎಪಿಎಲ್​​ಗೆ ಪರಿವರ್ತನೆಗೊಂಡ ಕಾರ್ಡ್​​ಗಳು – 4.09 ಲಕ್ಷ (14,68,540 ಭಾದಿತರು)
ರದ್ದಾಗಿರುವ ಬಿಪಿಎಲ್ ಕಾರ್ಡ್​​ಗಳು – 5,632 (9,826 ಭಾದಿತರು)

ತಾತ್ಕಾಲಿಕವಾಗಿ ಅಮಾನತ್ತಾದ ಬಿಪಿಎಲ್ ಕಾರ್ಡ್​​ಗಳು- 23,068 (34,617 ಭಾದಿತರು)

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment