ಕೃಷ್ಣ ಮೇಲ್ದಂಡೆ ಯೋಜನೆಗೆ ಭೂಸ್ವಾಧೀನ ಪರಿಹಾರ ಮೊತ್ತ ನಿಗದಿಪಡಿಸಿ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಬುಧವಾರ ನಡೆದ ಸಭೆಯಲ್ಲಿ ಕೃಷ್ಣ ಮೇಲ್ದಂಡೆ ಯೋಜನೆಗಾಗ ಭೂಸ್ವಾಧೀನಕ್ಕಾಗಿ ಕೃಷಿ ಭೂಮಿಗೆ ಎಕರೆಗೆ 40 ಲಕ್ಷ ರೂ. ಹಾಗೂ ಒಣಭೂಮಿಗೆ 30 ಲಕ್ಷ ರೂ. ಪರಿಹಾರ ಮೊತ್ತ ನಿಗದಿಪಡಿಸಲಾಗಿದೆ.
ಸಚಿವ ಸಂಪುಟ ಸಭೆಯ ನಂತರ ನಡೆದ ಸುದ್ದಿಗೋಷ್ಠಿಯಲ್ಲ ಸಚಿವ ಎಚ್.ಕೆ. ಪಾಟೀಲ್ ಈ ವಿಷಯವನ್ನು ತಿಳಿಸಿದ್ದು, ಉತ್ತರ ಕರ್ನಾಟಕದ ಭಾಗದ ಜನರ ಕೃಷಿಗೆ ಒತ್ತು ನೀಡಲು ನೀರಾವರಿ ಯೋಜನೆಗೆ ಒತ್ತು ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಸ್ಥಳೀಯ ರೈತರ ಬೇಡಿಕೆ ಗಮನಿಸಿ ಭೂಸ್ವಾಧೀನ ಪರಿಹಾರ ಮೊತ್ತ ಹೆಚ್ಚಿಸಲಾಗಿದೆ ಎಂದರು.
ನಂತರ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ರಾಜ್ಯ ಸರ್ಕಾರ ಕೃಷ್ಣ ಮೇಲ್ದಂಡೆ ಯೋಜನೆಗೆ ಬದ್ಧವಾಗಿದ್ದು, ರಾಜ್ಯದ ಪಾಲಿನ ನೀರು ಸಮುದ್ರಕ್ಕೆ ಸೇರಿ ವ್ಯರ್ಥವಾಗುತ್ತಿದೆ. ಇದನ್ನು ತಡೆಯಲು ಕೃಷ್ಣ ಮೇಲ್ದಂಡೆ ಯೋಜನೆ ಜಾರಿಗೆ ತರಲಾಗುವುದು ಎಂದರು.
ಕೃಷ್ಣ ಮೇಲ್ದಂಡೆ ಯೋಜನೆಯ ವಿಷಯದಲ್ಲಿ ರಾಜ್ಯ ಸರ್ಕಾರ ನಿಗದಿಪಡಿಸಿರುವ ಭೂಸ್ವಾಧೀನ ಪರಿಹಾರ ಮೊತ್ತ ಐತಿಹಾಸಿಕ ನಿರ್ಧಾರವಾಗಿದೆ ಎಂದು ಅವರು ಹೇಳಿದರು.


