Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ರಾಜ್ಯ

ಬೆಂಬಲ ಬೆಲೆಗೆ ಉದ್ದು, ಹೆಸರುಕಾಳು, ಸೂರ್ಯಕಾಂತಿ ಖರೀದಿಗೆ ರಾಜ್ಯ ಸರ್ಕಾರ ಸೂಚನೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 31 ವೀಕ್ಷಣೆಗಳು
MSP

ಬೆಂಗಳೂರು: ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆ ಅಡಿಯಲ್ಲಿ ಮುಂಗಾರು ಹಂಗಾಮಿನ ಉದ್ದಿನಕಾಳು, ಹೆಸರುಕಾಳು ಹಾಗೂ ಸೂರ್ಯಕಾಂತಿ ಖರೀದಿ ಪ್ರಕ್ರಿಯೆ ಆರಂಭಿಸಬೇಕು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಜಿಲ್ಲಾ ಟಾಸ್ಕ್‌ಪೋರ್ಸ್‌ ಸಮಿತಿಗಳಿಗೆ ಆದೇಶ ಮಾಡಿದ್ದಾರೆ.

ಖರೀದಿ ಏಜನ್ಸಿಗಳೊಂದಿಗೆ ಚರ್ಚೆ ಮಾಡಿ ತ್ವರಿತವಾಗಿ ನೋಂದಣಿ ಹಾಗೂ ಖರೀದಿ ಪ್ರಕ್ರಿಯೆ ಆರಂಭ ಮಾಡಿ ಎಂದು ನಿರ್ದೇಶನ ನೀಡಿದ್ದಾರೆ.

ಬೆಂಬಲ ಬೆಲೆ ಯೋಜನೆಯನ್ನು ದುರ್ಬಳಕೆ ಮಾಡಿಕೊಳ್ಳಲು ವರ್ತಕರಿಗೆ ಅವಕಾಶ ನೀಡಬಾರದು. ರೈತರ ಹೆಸರಿನಲ್ಲಿ ಮಾರಾಟ ಮಾಡಲು ಬರುವ ವರ್ತಕರ ಬಗ್ಗೆ ಎಚ್ಚರಿಕೆ ವಹಿಸಬೇಕು ಹಾಗೂ ಅವರಿಂದ ಖರೀದಿ ಮಾಡಬಾರದು ಎಂದು ತಿಳಿಸಿದ್ದಾರೆ.

ಗದಗ, ಧಾರವಾಡ, ಹಾವೇರಿ, ಬೆಳಗಾವಿ, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಕಲಬುರಗಿ, ಯಾದಗಿರಿ, ಬೀದರ್‌, ತುಮಕೂರು, ಹಾಸನ, ಮೈಸೂರು ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಹೆಸರುಕಾಳು, ಕಲಬುರಗಿ, ಬೀದರ್‌, ಯಾದಗಿರಿ, ಗದಗ, ಧಾರವಾಡ, ವಿಜಯಪುರ ಬಾಗಲಕೋಟ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಉದ್ದಿನಕಾಳು ಹಾಗೂ ಬಾಗಲಕೋಟೆ, ಬಳ್ಳಾರಿ, ಚಾಮರಾಜ ನಗರ, ಚಿತ್ರದುರ್ಗ, ಗದಗ, ಕಲಬುರಗಿ, ರಾಯಚೂರು, ವಿಜಯಪುರ, ವಿಜಯನಗರ, ಯಾದಗಿರಿ, ಮೈಸೂರು, ಚಿಕ್ಕಮಗಳೂರು, ಬೆಳಗಾವಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಸೂರ್ಯಕಾಂತಿ ಖರೀದಿ ಮಾಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ, ಕರ್ನಾಟಕ ರಾಜ್ಯ ದ್ವಿದಳ ಧಾನ್ಯಗಳ ಅಭಿವೃದ್ಧಿ ಮಂಡಳಿ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಗಳನ್ನು ಖರೀದಿ ಏಜನ್ಸಿಗಳನ್ನಾಗಿ ನೇಮಕ ಮಾಡಲಾಗಿದೆ.

ನೋಂದಣಿ ಕಾಲಾವಧಿಯನ್ನು 80 ದಿನ ಹಾಗೂ ಖರೀದಿ ಅವಧಿಯನ್ನು 90ದಿನ ನಿಗದಿಪಡಿಸಲಾಗಿದ್ದು, ನೋಂದಣಿ ಮತ್ತು ಖರೀದಿ ಪ್ರಕ್ರಿಯೆಯನ್ನು ಏಕಕಾಲಕ್ಕೆ ಆರಂಭಿಸಬೇಕು. ಖರೀದಿ ಸಂಸ್ಥೆಗಳು ರೈತರಿಗೆ ಅನುಕೂಲವಾಗುವಂತೆ ನಾಫೆಡ್‌ ಹಾಗೂ ಎನ್‌ಸಿಸಿಎಫ್‌ ಮಾರ್ಗಸೂಚಿ ಅನ್ವಯ ಹಾಗೂ ತಾಂತ್ರಿಕ ಮತ್ತು ವೈಜ್ಞಾನಿಕ ಸೌಲಭ್ಯದಿಂದ ಕೂಡಿರುವ ಗೋದಾಮುಗಳನ್ನು ಹೊಂದಿರುವ ಸಂಸ್ಥೆಗಳ ಮೂಲಕ ಒಡಂಬಡಿಕೆ ಮಾಡಿಕೊಂಡು ಖರೀದಿ ಕೇಂದ್ರ ತೆರೆಯಬೇಕು ಎಂದು ಸೂಚನೆ ನೀಡಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment