Thursday, December 25, 2025
Google search engine
Homeರಾಜ್ಯಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿ ಕನ್ನಡ ಬಳಕೆ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ

ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿ ಕನ್ನಡ ಬಳಕೆ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಎಲ್ಲಾ ಇಲಾಖೆಗಳು ಪೂರ್ಣ ಪ್ರಮಾಣದಲ್ಲಿ ಕನ್ನಡ ಬಳಕೆ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಬುಧವಾರ ಹೊರಡಿಸಿದ ಆದೇಶದಲ್ಲಿ ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆಯಾಗಿ ಇರಬೇಕೆಂದು ಕರ್ನಾಟಕ ರಾಜ್ಯ ಭಾಷಾ ಅಧಿನಿಯಮ 1963ರಲ್ಲಿ ತಿಳಿಸಲಾಗಿದೆ. ಕನ್ನಡದಲ್ಲಿ ಬರುವ ಅರ್ಜಿ ಮತ್ತು ಪತ್ರಗಳಿಗೆ ಕಡ್ಡಾಯವಾಗಿ ಕನ್ನಡದಲ್ಲಿಯೇ ಉತ್ತರಿಸಬೇಕು. ಸರ್ಕಾರಿ ಕಚೇರಿಗಳ ನಾಮಫಲಕಗಳನ್ನು ಕನ್ನಡದಲ್ಲಿಯೇ ಪ್ರದರ್ಶಿಸಬೇಕು ಎಂದು ಸೂಚಿಸಿದ್ದಾರೆ.

ವಿಧಾನ ಮಂಡಲದ ಕಾರ್ಯಕಲಾಪಗಳು, ಪತ್ರ ವ್ಯವಹಾರ, ಗಮನಸೆಳೆಯುವ ಸೂಚನೆ ಇತ್ಯಾದಿಗಳು ಕಡ್ಡಾಯವಾಗಿ ಕನ್ನಡದಲ್ಲಿಯೇ ಸಲ್ಲಿಸಬೇಕು. ನೇಮಕಾತಿ, ವರ್ಗಾವಣೆ ಮತ್ತು ರಜೆ ಮಂಜೂರಾತಿ ಇತರ ಎಲ್ಲಾ ಸರ್ಕಾರದ ಆದೇಶಗಳನ್ನು ಕನ್ನಡದಲ್ಲಿ ಹೊರಡಿಸಲು ಸ್ಪಷ್ಟ ಸೂಚನೆ ನೀಡಿದ್ದಾರೆ.

ಕಚೇರಿಗಳಿಗೆ ಒದಗಿಸಿರುವ ಆಂಗ್ಲ ಭಾಷಾ ನಮೂನೆ, ದಾಖಲೆ ಪುಸ್ತಕ ಮುಂತಾದವುಗಳನ್ನು ಕನ್ನಡದಲ್ಲಿ ಭರ್ತಿ ಮಾಡಬೇಕು. ಆಂತರಿಕ ಪತ್ರ ವ್ಯವಹಾರ, ಕಡತದ ಟಿಪ್ಪಣಿ ಕನ್ನಡದಲ್ಲಿಯೇ ಇರಬೇಕು. ಸಭಾ ಸೂಚನೆ, ಕಾರ್ಯಸೂಚಿ, ಸಂಕ್ಷಿಪ್ತ ಟಿಪ್ಪಣಿ ಹಾಗೂ ನಡಾವಳಿಗಳನ್ನು ಕನ್ನಡದಲ್ಲಿ ತಯಾರಿಸಿರಬೇಕು. ಈ ಮೂಲಕ ಸರ್ಕಾರದ ಭಾಷಾ ನೀತಿಯನ್ನು ಯಶಸ್ವಿಯಾಗಿ ಕಾರ್ಯರೂಪಕ್ಕೆ ತರಬೇಕು ಎಂದು ನಿರ್ದೇಶನ ನೀಡಿದ್ದಾರೆ.

ಕೇಂದ್ರ ಸರ್ಕಾರ, ಹೊರ ರಾಜ್ಯಗಳು ಮತ್ತು ನ್ಯಾಯಾಲಯಗಳ ಪತ್ರ ವ್ಯವಹಾರಗಳನ್ನು ಹೊರತುಪಡಿಸಿ, ಉಳಿದೆಲ್ಲಾ ಪತ್ರ ವ್ಯವಹಾರಗಳು ಕಡ್ಡಾಯವಾಗಿ ಕನ್ನಡದಲ್ಲಿಯೇ ಇರುವಂತೆ ತಾಕೀತು ಮಾಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments