Tuesday, 17 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ರಾಜ್ಯ

ಕರ್ನಾಟಕ ಸಾಬೂನು ಮತ್ತು ಮಾರ್ಜಕ ಸಂಸ್ಥೆಗೆ 416 ಕೋಟಿ ರೂ. ದಾಖಲೆಯ ಲಾಭ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
3 ನಿಮಿಷ ಓದು 29 ವೀಕ್ಷಣೆಗಳು
ksdl

ಬೆಂಗಳೂರು: ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತವು (ಕೆಎಸ್ಡಿಎಲ್) 2024-25ನೇ ಸಾಲಿನಲ್ಲಿ 1,787 ಕೋಟಿ ರೂಪಾಯಿ ದಾಖಲೆ ವಹಿವಾಟು ನಡೆಸಿ, ₹416 ಕೋಟಿ ನಿವ್ವಳ ಲಾಭ ಗಳಿಸಿದೆ. ಇದು ಸಾಲಿಗಿಂತ ₹54 ಕೋಟಿ ಹೆಚ್ಚಾಗಿದೆ.

ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ‌.ಬಿ ಪಾಟೀಲ್ ಮತ್ತು ಕೆಎಸ್ ಡಿಎಲ್ ಅಧ್ಯಕ್ಷರೂ ಆದ ಶಾಸಕ ಅಪ್ಪಾಜಿ ಸಿ.ಎಸ್.ನಾಡಗೌಡ ಬುಧವಾರ ಜಂಟಿ ಹೇಳಿಕೆಯಲ್ಲಿ ಈ ವಿಷಯ ತಿಳಿಸಿದರು.

ಕಳೆದ ಹಣಕಾಸು ವರ್ಷದಲ್ಲಿ ಸಂಸ್ಥೆಯು 43,144 ಮೆಟ್ರಿಕ್ ಟನ್ ಸಾಬೂನು ಮತ್ತು ಮಾರ್ಜಕಗಳನ್ನು ಮಾರಾಟ ಮಾಡಿ, ದಾಖಲೆಯ ಲಾಭ ಗಳಿಸಿದೆ. ಲಾಭದಲ್ಲಿ ನಿಯಮಾನುಸಾರ ಶೇ.30ರಷ್ಟನ್ನು, ಅಂದರೆ ₹123 ಕೋಟಿಯನ್ನು ಸರಕಾರಕ್ಕೆ ಹಸ್ತಾಂತರಿಸಲಾಗುವುದು ಎಂದರು.

ಸಂಸ್ಥೆಯು 2023-24ರಲ್ಲಿ 37,916 ಟನ್ ಉತ್ಪನ್ನ ಮಾರಾಟ ಮಾಡಿ, 1,570 ಕೋಟಿ ರೂಪಾಯಿ ವಹಿವಾಟು ನಡೆಸುವ ಮೂಲಕ 362 ಕೋಟಿ ರೂಪಾಯಿ ನಿವ್ವಳ ಲಾಭ ಗಳಿಸಿತ್ತು. ಆ ಪೈಕಿ 108 ಕೋಟಿ ರೂ.ಗಳನ್ನು ಸರಕಾರಕ್ಕೆ ಕೊಡಲಾಗಿತ್ತು. ಹಿಂದೆ ಸಂಸ್ಥೆಯು ಲಾಭಾಂಶ ಕೊಡುವ ಸರಕಾರಿ ಉದ್ದಿಮೆಗಳ ಪೈಕಿ 21ನೇ ಸ್ಥಾನದಲ್ಲಿತ್ತು. ಈಗ 3ನೇ ಸ್ಥಾನದಲ್ಲಿದೆ ಎಂದು ಅವರು ಸಂತಸ ವ್ಯಕ್ತಪಡಿಸಿದ್ದಾರೆ.

2024-25ರಲ್ಲಿ ಸಂಸ್ಥೆಯು ಉತ್ಪಾದನೆ, ಮಾರಾಟ ಮತ್ತು ಲಾಭ ಮೂರರಲ್ಲೂ ಸಾರ್ವಕಾಲಿಕ ದಾಖಲೆ ಬರೆದಿದೆ.‌ ಕಳೆದ ಸಾಲಿನಲ್ಲಿ ರಫ್ತು ವಹಿವಾಟಿನ ಮೂಲಕವೂ ಕೆಎಸ್ಡಿಎಲ್ 23.2 ಕೋಟಿ ರೂಪಾಯಿ ಮೊತ್ತದ ವಹಿವಾಟು ನಡೆಸಿದೆ ಎಂದು ಸಚಿವ ಪಾಟೀಲ ವಿವರಿಸಿದ್ದಾರೆ.

ಸಂಸ್ಥೆಯು ಗ್ರಾಹಕರ ನಿರೀಕ್ಷೆಗೆ ತಕ್ಕಂತೆ 19 ಉತ್ಪನ್ನಗಳನ್ನು ಒಳಗೊಂಡಿದೆ. ಇದರಲ್ಲಿ ಮೈಸೋಪು, ಹ್ಯಾಂಡ್ ವಾಶ್, ಶವರ್ ಜೆಲ್, ಕುಡಿಯುವ ನೀರು, ಅಗರಬತ್ತಿ ಮುಂತಾದ ಉತ್ಕೃಷ್ಟ ಉತ್ಪನ್ನಗಳನ್ನು ಹೊಂದಿದೆ. ಮಾರುಕಟ್ಟೆ ವಿಸ್ತರಣೆ ಮತ್ತು ದಕ್ಷ ಉತ್ಪಾದನಾ ವಿಧಾನದ ಮೂಲಕ ಲಾಭವನ್ನು ಮತ್ತಷ್ಟು ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.

ಸಂಸ್ಥೆಯು ಈಗ ಇ-ಕಾಮರ್ಸ್ ಮತ್ತು ಆಧುನಿಕ ವ್ಯಾಪಾರ ಮಾದರಿಗಳನ್ನು ಅಳವಡಿಸಿಕೊಂಡಿದೆ. ಸಂಸ್ಥೆಯ ಚೆನ್ನೈ, ಹೈದರಾಬಾದ್, ಮುಂಬೈ, ಅಹಮದಾಬಾದ್, ದೆಹಲಿ, ಛತ್ತೀಸಗಢ ಮತ್ತು ಕೋಲ್ಕತಾ ಹಾಗೂ ಒಡಿಶಾ ಶಾಖೆಗಳಲ್ಲಿ ಕೂಡ ವಹಿವಾಟು ಹೆಚ್ಚಳ ಕಂಡಿದೆ ಎಂದು ಅವರು ನುಡಿದಿದ್ದಾರೆ.

ಸಂಸ್ಥೆಯಲ್ಲಿ ಈಗ ಮೂರು ಪಾಳಿಗಳ ಕೆಲಸದ ವ್ಯವಸ್ಥೆ ಇದೆ. ವಿಜಯಪುರದಲ್ಲಿ 250 ಕೋಟಿ ರೂಪಾಯಿ ವೆಚ್ಚದಲ್ಲಿ ಸಂಸ್ಥೆಯ ಘಟಕವನ್ನು ತೆರೆಯಲಾಗುವುದು.‌ ಇದಕ್ಕೆ 50 ಎಕರೆ ಜಾಗವನ್ನು ಕೆಐಎಡಿಬಿ ಹಂಚಿಕೆ ಮಾಡಿದೆ. 2025-26ರಲ್ಲಿ ಸಂಸ್ಥೆಯು 1,819 ಕೋಟಿ ರೂಪಾಯಿ ಮೊತ್ತದ ವಹಿವಾಟು ನಡೆಸುವ ಗುರಿ ಹೊಂದಿದೆ ಎಂದು ಪಾಟೀಲ ಹೇಳಿದ್ದಾರೆ.

ಕೆಎಸ್ ಡಿಎಲ್ ವ್ಯವಸ್ಥಾಪಕ ನಿರ್ದೇಶಕ ಪಿ.ಕೆ.ಎಂ.ಪ್ರಶಾಂತ ಮಾತನಾಡಿ, ಕಳೆದ ಎರಡು ವರ್ಷಗಳಿಂದ ಸಂಸ್ಥೆಯ ಲಾಭದ ಪ್ರಮಾಣ ಏರುಮುಖವಾಗಿದೆ. ಪಾರದರ್ಶಕತೆ, ದಕ್ಷತೆ, ಮಾರುಕಟ್ಟೆ ವಿಸ್ತರಣೆ ಮತ್ತು ಗುಣಮಟ್ಟ ಈ‌ ‌ನಾಲ್ಕು ಅಂಶಗಳಿಗೆ ಆದ್ಯತೆ ನೀಡಿರುವುದೇ ಇದಕ್ಕೆ ಮುಖ್ಯ ಕಾರಣವಾಗಿದೆ ಎಂದರು.

ಸಂಸ್ಥೆಯ ಸಾಬೂನು ಘಟಕವು ಕಳೆದ ಸಾಲಿನಲ್ಲಿ 36,268 ಟನ್, ಡಿಟರ್ಜೆಂಟ್ ಘಟಕವು 5,788 ಟನ್ ಮತ್ತು ಸೌಂದರ್ಯ ವರ್ಧಕಗಳ ಘಟಕವು 1,087 ಟನ್ ಉತ್ಪನ್ನಗಳನ್ನು ತಯಾರಿಸಿದೆ ಎಂದು ಅವರು ಹೇಳಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment