Tuesday, 17 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ರಾಜ್ಯ

ಗ್ಯಾರಂಟಿಗಳಿಂದ ರಾಜ್ಯದ ತಲಾ ಆದಾಯ ದೇಶದಲ್ಲೇ ನಂಬರ್ ಒನ್ : ಸಿಎಂ ಸಿದ್ದರಾಮಯ್ಯ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 25 ವೀಕ್ಷಣೆಗಳು
karnataka cm

ಅರಸೀಕೆರೆ: ನಾವು ಜಾರಿಗೆ ತಂದ ಐದು ಗ್ಯಾರಂಟಿಗಳ ಕಾರಣದಿಂದ ಕರ್ನಾಟಕ ರಾಜ್ಯ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ ಆಗಿದೆ. ಬಿಜೆಪಿಯವರಿಗೆ ಆರ್ಥಿಕತೆ ಅರ್ಥವಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.

ಅರಸೀಕೆರೆ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ಫಲಾನುಭವಿಗಳ ಸಮಾವೇಶ ಉದ್ಘಾಟಿಸಿ ಮಾತನಾಡಿದರು.

ಕ್ಷೇತ್ರದ ಜನಪರ ಅಭಿವೃದ್ಧಿ ಕೆಲಸ ಮಾಡುವುದರಲ್ಲೇ ಇರಲಿ, ವಿಧಾನಸಭೆಯಲ್ಲಿ ಪಕ್ಷ ಮತ್ತು ಸರ್ಕಾರದ ಜನಪರ ಕಾರ್ಯಗಳನ್ನು ಸಮರ್ಥವಾಗಿ ಮಂಡಿಸುವುದರಲ್ಲೂ ಮುಂದಿದ್ದಾರೆ. ನಾಲ್ಕು ಬಾರಿ ಶಾಸಕರಾಗಿರುವ ಶಿವಲಿಂಗೇಗೌಡರು ಮುಂದಿನ ಚುನಾವಣೆಯಲ್ಲೂ ಗೆಲ್ಲುವುದು ಶತಸಿದ್ಧ ಎಂದು ಭರವಸೆ ವ್ಯಕ್ತಪಡಿಸಿದರು.

148 ಕೋಟಿ ವೆಚ್ಚದಲ್ಲಿ 10 ಕೆರೆಗಳನ್ನು ತುಂಬಿಸುವ, ಕುಡಿಯುವ ನೀರು ಕೊಡುವ ಪುಣ್ಯದ ಕೆಲಸವನ್ನು ಶಿವಲಿಂಗೇಗೌಡರು ಮಾಡಿದ್ದಾರೆ ಎಂದು ವಿವರಿಸಿದರು.

ಕರ್ನಾಟಕ ರಾಜ್ಯ ತಲಾ ಆದಾಯದಲ್ಲಿ ಇಡಿ ದೇಶದಲ್ಲಿ ನಂಬರ್ ಒನ್ ಆಗಿದೆ. ಇದಕ್ಕೆ ಪ್ರಮುಖ ಕಾರಣ ಜನರ ಕೊಳ್ಳುವ ಶಕ್ತಿ ಹೆಚ್ಚಾಗಿರುವುದು. ಕೊಳ್ಳುವ ಶಕ್ತಿ ಹೆಚ್ಚಾಗಲು ನಮ್ಮ ಗ್ಯಾರಂಟಿ ಯೋಜನೆಗಳು ಪ್ರಮುಖ ಕಾರಣ. ಬಿಜೆಪಿಯವರಿಗೆ ಆರ್ಥಿಕತೆ ಅರ್ಥ ಆಗೋದಿಲ್ಲ. ಅದಕ್ಕೇ ರಾಜ್ಯ ಸರ್ಕಾರದ ಬಳಿ ಅಭಿವೃದ್ಧಿಗೆ ಹಣ ಇಲ್ಲ ಎಂದು ಸುಳ್ಳು, ಅಪಪ್ರಚಾರ ಮಾಡುತ್ತಿದ್ದಾರೆ. ರಾಜಕೀಯ ಪ್ರೇರಿತ ಸುಳ್ಳುಗಳನ್ನು ಹೇಳಿ ರಾಜ್ಯದ ಜನರ ದಾರಿ ತಪ್ಪಿಸುವ ಯತ್ನ ಮಾಡಿದರೂ ರಾಜ್ಯದ ಜನತೆ ಯಾಮಾರುವುದಿಲ್ಲ ಎಂದರು.

ಸರ್ಕಾರದ ಸಾಧನಾ ಸಮಾವೇಶದಲ್ಲಿ ಲಕ್ಷ ಲಕ್ಷ ಜನ ಫಲಾನುಭವಿಗಳು ಸೇರಿ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸುತ್ತಿದ್ದಾರೆ. ಇದು ನುಡಿದಂತೆ ನಡೆದ ನಮ್ಮ ಸರ್ಕಾರದ ಸಾಧನೆ ಎಂದರು.

ನಾವು ಅಭಿವೃದ್ಧಿ ಯೋಜನೆಗಳಿಗೆ 1.20 ಲಕ್ಷ ಕೋಟಿ ಖರ್ಚು ಮಾಡುವುದರ ಜೊತೆಗೆ ಗ್ಯಾರಂಟಿ ಯೋಜನೆಗಳಿಗೆ 56 ಸಾವಿರ ಕೋಟಿ ಖರ್ಚು ಮಾಡಿ ಜನರ ಮನೆ ಬಾಗಿಲಿಗೆ ಅಭಿವೃದ್ಧಿ ಕಾರ್ಯಗಳನ್ನು ತಲುಪಿಸಿದ್ದೇವೆ ಎಂದು ವಿವರಿಸಿದರು.

ಶಿವಲಿಂಗೇಗೌಡ ಮಂತ್ರಿಯಾಗುವ ಎಲ್ಲಾ ಅರ್ಹತೆ ಹೊಂದಿದ್ದಾರೆ: ಸಿಎಂ

ಶಿವಲಿಂಗೇಗೌಡರಿಗೆ ರಾಜಕೀಯ ಭವಿಷ್ಯವಿದೆ. ಮಂತ್ರಿಯಾಗುವ ಎಲ್ಲಾ ಅರ್ಹತೆ ಹೊಂದಿದ್ದಾರೆ. ಜೊತೆಗೆ ಕ್ಷೇತ್ರದ ಜನರ ಆಶೀರ್ವಾದವೂ ಗಟ್ಟಿಯಾಗಿದೆ. ಈ ಕಾರಣಕ್ಕೇ ನಾಲ್ಕು ಬಾರಿ ಗೆದ್ದಿರುವ ಶಿವಲಿಂಗೇಗೌಡರು ಮುಂದಿನ ಬಾರಿಯೂ ಗೆದ್ದು ಬರುತ್ತಾರೆ. ಆದರೆ ಕೆಲವೊಂದು ರಾಜಕೀಯ ಸಂಗತಿಗಳನ್ನು ಬಹಿರಂಗವಾಗಿ ಚರ್ಚಿಸಲು ಸಾಧ್ಯವಿಲ್ಲ ಎಂದರು.

ರಾಹುಲ್ ಗಾಂಧಿಯವರಿಗೆ ಒಬಿಸಿ ಸಮುದಾಯಗಳು ಅರ್ಥವಾಗಿದ್ದಾರೆದೆಹಲಿಯಲ್ಲಿ ನಡೆದ ಹಿಂದುಳಿದ ಸಮುದಾಯಗಳ ಸಮ್ಮೇಳನದಲ್ಲಿ ರಾಹುಲ್ ಗಾಂಧಿಯವರು “ಹಿಂದುಳಿದ ಸಮುದಾಯಗಳ ಬಗ್ಗೆ ತಮ್ಮ ಗ್ರಹಿಕೆಯನ್ನು ಸ್ಪಷ್ಟಪಡಿಸಿದ್ದಾರೆ”. ಹಿಂದುಳಿದ ವರ್ಗಗಳು, ಮಹಿಳೆಯರು, ದಲಿತರು, ಶೋಷಿತರು, ಎಲ್ಲಾ ಜಾತಿಯ ಬಡವರ ಬದುಕಿಗೆ ಬೇಕಾದ ಕಾರ್ಯಕ್ರಮಗಳನ್ನು ನಮ್ಮ ಸರ್ಕಾರ ರೂಪಿಸಿದೆ ಎಂದು ವಿವರಿಸಿದರು.

ಕಾಂಗ್ರೆಸ್ ಸಾಮಾಜಿಕ ನ್ಯಾಯ ಮತ್ತು ಬಡವರ ಪ್ರಗತಿಗಾಗಿ , ಸಂವಿಧಾನದ ಮೌಲ್ಯಗಳ ಈಡೇರಿಕೆಗಾಗಿ ಕಾರ್ಯಕ್ರಮ ರೂಪಿಸಿ ಜಾರಿ ಮಾಡುವ ಏಕೈಕ ಪಕ್ಷ. ದೇಶದಲ್ಲಿ, ರಾಜ್ಯದಲ್ಲಿ ಸಾಮಾಜಿಕ ನ್ಯಾಯದ ಕಾರ್ಯಗಳನ್ನು ಜಾರಿ ಮಾಡಿರುವುದು ಕಾಂಗ್ರೆಸ್ ಮಾತ್ರ. ಚರಿತ್ರೆ ನೋಡಿ ಎಂದು ಬಿಜೆಪಿಗೆ ಸವಾಲು ಹಾಕಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment