ಮೂರು ವರ್ಷಗಳ ವಯೋಮಿತಿ ಸಡಿಲಿಕೆಯೊಂದಿಗೆ ರಾಜ್ಯದ ಸರ್ಕಾರಿ ಸಂಸ್ಥೆಗಳ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 708 ಹುದ್ದೆಗಳ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಅಧಿಸೂಚನೆ ಹೊರಡಿಸಿದೆ.
ರಾಜ್ಯ ಸರ್ಕಾರದ ವಿವಿಧ ಇಲಾಖೆಯಲ್ಲಿ ಒಟ್ಟು 708 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, 387 ಸಾಮಾನ್ಯ ಹುದ್ದೆಗಳಾಗಿದ್ದು, 321 ಹೈದರಾಬಾದ್ ಕರ್ನಾಟಕ ಮೀಸಲು ಹುದ್ದೆಗಳಾಗಿವೆ.
ವಿದ್ಯಾರ್ಹತೆ: ಅಭ್ಯರ್ಥಿಗಳು ಹುದ್ದೆಗೆ ಅನುಸಾರವಾಗಿ ಪಿಯುಸಿ, ಪದವಿ, ಬಿಕಾಂ, ಬಿಇ, ಬಿಟೆಕ್ ಪದವಿ ಹೊಂದಿರಬೇಕು.
ವಯೋಮಿತಿ:
ಅಭ್ಯರ್ಥಿಯ ಕನಿಷ್ಠ ವಯೋಮಿತಿ 18, ಗರಿಷ್ಠ ವಯೋಮಿತಿ 38 ವರ್ಷ ಆಗಿದೆ, 2ಎ, 2ಬಿ, 3ಎ, 3ಬಿ ಮತ್ತು 2ಬಿ ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 41 ವರ್ಷ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ 1 ಅಭ್ಯರ್ಥಿಗಳ ಗರಿಷ್ಠ ವಯೋಮಿತಿ 43 ವರ್ಷವಾಗಿದೆ.
ಅರ್ಜಿ ಸಲ್ಲಿಕೆ
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ. 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 750 ರೂ. ಹಾಗೂ ಪ.ಜಾ ಮತ್ತು ಪ.ಪಂ ಅಭ್ಯರ್ಥಿಗಳಿಗೆ 500 ರೂ. ಹಾಗೂ ವಿಕಲಚೇತನ ಅಭ್ಯರ್ಥಿಗಳಿಗೆ 500ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.
ಆಯ್ಕೆ ಪ್ರಕ್ರಿಯೆ
ಅಭ್ಯರ್ಥಿಗಳು ಲಿಖಿತ ಪರೀಕ್ಷೆ ಮತ್ತು ದಾಖಲಾತಿ ಪರಿಶೀಲನೆ ಹಾಗೂ ಸಂದರ್ಶನಕ್ಕೆ ಹಾಜರಾಗಬೇಕು.
ಅಕ್ಟೋಬರ್ 9ರಿಂದ ಅರ್ಜಿ ಸಲ್ಲಿಕೆ ಮಾಡಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಅಂತಿಮ ದಿನಾಂಕ ನವೆಂಬರ್ 1 ಆಗಿದೆ. ಹೈದರಾಬಾದ್ ಕರ್ನಾಟಕ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಕೆಗೆ ಕಡೆಯ ದಿನಾಂಕ ನವೆಂಬರ್ 10 ಆಗಿದೆ. ಅರ್ಜಿ ಶುಲ್ಕ ಭರಿಸಲು ಅಂತಿಮ ದಿನಾಂಕ ನವೆಂಬರ್ 11 ಆಗಿದೆ.
ಈ ಹುದ್ದೆಗಳ ಕುರಿತು ಅಧಿಕೃತ ಸೂಚನೆ ಮತ್ತು ಅರ್ಜಿ ಸಲ್ಲಿಕೆಗೆ ಅಭ್ಯರ್ಥಿಗಳು cetonline.karnataka.gov.in ಈ ಜಾಲತಾಣಕ್ಕೆ ಭೇಟಿ ನೀಡಬಹುದು.


