Sunday, December 7, 2025
Google search engine
Homeರಾಜ್ಯಭಾರೀ ಮಳೆಯಿಂದ ಉತ್ತರ ಕನ್ನಡದಲ್ಲಿ ಭೂಕುಸಿತ; 3 ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌

ಭಾರೀ ಮಳೆಯಿಂದ ಉತ್ತರ ಕನ್ನಡದಲ್ಲಿ ಭೂಕುಸಿತ; 3 ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌

ರಾಜ್ಯಾದ್ಯಂತ ಮುಂಗಾರು ಮಳೆಯ ಅಬ್ಬರ ಮುಂದುವರಿದಿದ್ದು, ಭೂಕುಸಿತ, ವಾಹನ ಸಂಚಾರ ಅಸ್ತವ್ಯಸ್ತ ಸೇರಿದಂತೆ ಮಳೆ ಅವಾಂತರದಿಂದ ಜನರು ತತ್ತರಿಸಿದ್ದಾರೆ.

ಭಾರೀ ಮಳೆ ಹಿನ್ನೆಲೆಯಲ್ಲಿ ರಾಜ್ಯದ ಉತ್ತರ ಕನ್ನಡ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ (IMD) ತಿಳಿಸಿದೆ. ಉಳಿದ ಕರಾವಳಿ ಮತ್ತು ಮಲೆನಾಡಿನ ಎಲ್ಲಾ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಗಾಳಿಯ ವೇಗ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬೀಸಲಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಮಳೆಯ ಜತೆ ಗಾಳಿ ಮಳೆಯ ಅಬ್ಬರವೂ ಇರುವುದರಿಂದ ಅವಾಂತರ ಹೆಚ್ಚಾಗಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯಬ್ಬರ ಮುಂದುವರಿದಿದ್ದು, ಪಶ್ಚಿಮ ಘಟ್ಟ ಭಾಗದ ಹೆದ್ದಾರಿ ಭಾಗದಲ್ಲಿ ಭೂಕುಸಿತ ಉಂಟಾಗಿದೆ. ರಾಷ್ಟ್ರೀಯ ಹೆದ್ದಾರಿ 766ನಲ್ಲಿ (ಇ) ಗುಡ್ಡ ಕುಸಿತದಿಂದ ರಸ್ತೆಗೆ ಹಾನಿಯಾಗಿದ್ದು, ರಸ್ತೆಪಕ್ಕದಲ್ಲೇ 150 ಅಡಿಗೂ ಹೆಚ್ಚು ಗುಡ್ಡ ಕುಸಿದಿದೆ. ಸದ್ಯ ಜಿಲ್ಲಾಡಳಿತ ಹೆದ್ದಾರಿಯಲ್ಲಿ ಲಘು ವಾಹನಗಳಿಗೆ ಮಾತ್ರ ಅವಕಾಶ ಮಾಡಿಕೊಟ್ಟಿದೆ.

ಕಾಫಿನಾಡ ಮಲೆನಾಡಲ್ಲಿ ರಣ ಗಾಳಿ-ಮಳೆ ಮುಂದುವರಿದಿದ್ದು, ನಿರಂತರ ಧಾರಾಕಾರ ಮಳೆಗೆ ಶೃಂಗೇರಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಶೃಂಗೇರಿ ಜನಸಾಮಾನ್ಯರ ಜೊತೆ ಶಾರದಾಂಬೆ ಭಕ್ತರು ಕೂಡ ಕಂಗಾಲಾಗಿದ್ದಾರೆ.

ತುಂಗಾ ನದಿಯ ಅಬ್ಬರಕ್ಕೆ ಪ್ರವಾಸಿಗರ ಕಾರುಗಳು ಮುಳುಗಡೆಯಾಗಿದೆ. ಗಾಂಧಿ ಮೈದಾನದಲ್ಲಿ ನಿಂತಿದ್ದ ಪ್ರವಾಸಿ ಕಾರುಗಳು ಜಲಾವೃತಗೊಂಡಿದೆ. ಶನಿವಾರ ಬೆಳಗ್ಗೆಯಿಂದಲೂ ಶೃಂಗೇರಿಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ತುಂಗಾ-ಭದ್ರಾ ನದಿಯ ನೀರಿನ ಮಟ್ಟ ಕ್ಷಣ-ಕ್ಷಣಕ್ಕೂ ಏರಿಕೆಯಾಗುತ್ತಿದೆ. ತುಂಗಾ-ಭದ್ರಾ ನದಿಯ ಇಕ್ಕೆಲಗಳ ತೋಟಗಳು ಬಹುತೇಕ ಜಲಾವೃತಗೊಂಡಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments