Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ರಾಜ್ಯ

ಗೃಹಲಕ್ಷ್ಮೀ ಸೊಸೈಟಿಯಿಂದ 3 ಲಕ್ಷ ರೂ.ವರೆಗೆ ಕಡಿಮೆ ಬಡ್ಡಿ ಸಾಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 28 ವೀಕ್ಷಣೆಗಳು
laxmi hebbalkar

ರಾಜ್ಯದ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಕಡಿಮೆ ಬಡ್ಡಿ ದರದಲ್ಲಿ ಗರಿಷ್ಠ 3 ಲಕ್ಷ ರೂ.ವರೆಗೆ ಸಾಲ ನೀಡುವ ವಿವಿಧೋದ್ದೇಶ ಸಹಕಾರ ಸಂಘ ಆರಂಭಿಸಲಾಗಿದ್ದು, ಜಿಲ್ಲಾ ಮತ್ತು ತಾಲೂಕು ಮಟ್ಟಕ್ಕೂ ವಿಸ್ತರಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್​ ಹೇಳಿದ್ದಾರೆ.

ಬೆಂಗಳೂರಿನಲ್ಲಿ ನ.19ರಂದು ನಡೆಯಲಿರುವ ಐಸಿಡಿಎಸ್ ಯೋಜನೆಯ ಅಂಗನವಾಡಿ ಸುವರ್ಣ ಮಹೋತ್ಸವ, ಅಕ್ಕ ಪಡೆ ಲೋಕಾರ್ಪಣೆ, ಗೃಹಲಕ್ಷ್ಮಿ ಬ್ಯಾಂಕ್ ಉದ್ಘಾಟನೆ ಕುರಿತು ಬುಧವಾರ ನಡೆದ ರಾಜ್ಯಮಟ್ಟದ ಪೂರ್ವಭಾವಿ ಸಭೆಯಲ್ಲಿ ಸಚಿವೆ ಮಾತನಾಡಿದರು.

ವಿಶ್ವದಲ್ಲೇ ದೊಡ್ಡದಾದ ಗೃಹ ಲಕ್ಷ್ಮಿ ಯೋಜನೆಯನ್ನು ಯಶಸ್ವಿಯಾಗಿ ಜಾರಿಗೊಳಿಸಲಾಗಿದೆ. ಗೃಹಲಕ್ಷ್ಮಿ ಯೋಜನೆಯ ಮಾದರಿಯಲ್ಲೇ ಗೃಹಲಕ್ಷ್ಮಿ ಬ್ಯಾಂಕ್ ಕೂಡ ಜನಮನ್ನಣೆ ಗಳಿಸಲು ಅಧಿಕಾರಿಗಳು ಶ್ರಮ ಹಾಕಬೇಕು. ಮೂರು ತಿಂಗಳಲ್ಲಿ ಜಿಲ್ಲಾ ಮಟ್ಟಕ್ಕೂ ಗೃಹಲಕ್ಷ್ಮಿ ಸೊಸೈಟಿಯನ್ನು ವಿಸ್ತರಿಸಲಾಗುವುದು ಎಂದು ಅವರು ಹೇಳಿದರು.

ಗೃಹಲಕ್ಷ್ಮಿ ಸೊಸೈಟಿ ಮೂಲಕ 3 ಲಕ್ಷ ವರೆಗೆ ಸಾಲ

ಗೃಹಲಕ್ಷ್ಮಿ ಸೊಸೈಟಿ ಮೂಲಕ 3 ಲಕ್ಷದವರೆಗೆ ಕಡಿಮೆ ಬಡ್ಡಿ ದರದಲ್ಲಿ ಫಲಾನುಭವಿಗಳಿಗೆ ಸಾಲ ನೀಡಲಾಗುವುದು. ಸೊಸೈಟಿ ಯಶಸ್ಸಿಗೆ ಎಲ್ಲರ ಸಹಕಾರ, ಜವಾಬ್ದಾರಿ ಇರಬೇಕು. ನಾವು ಯಾರಿಂದಲೂ ಹಣ ಪಡೆಯುವುದಿಲ್ಲ, ಫಲಾನುಭವಿಗಳಿಂದ ಫೋನ್ ಪೇ ಮೂಲಕ ಹಣ ಸಂಗ್ರಹಿಸಲಾಗುವುದು. ಗೃಹಲಕ್ಷ್ಮಿ ಯಶಸ್ಸಿಗೆ ಯಾವ ರೀತಿ ಎಲ್ಲರೂ ಶ್ರಮ ವಹಿಸಿದ್ದೀರೋ ಹಾಗೆಯೇ ಗೃಹಲಕ್ಷ್ಮಿ ಸೊಸೈಟಿಯ ಯಶಸ್ಸಿಗೂ ಹೆಚ್ಚಿನ ನಿಗಾ ವಹಿಸಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ ತಿಳಿಸಿದರು.‌

ಕರ್ನಾಟಕದ ಮಹಿಳೆಯರಿಗೆ ಶಕ್ತಿ ತುಂಬುವುದೇ ನನ್ನ ಇಲಾಖೆಯ ಗುರಿ. ಮುಂದಿನ ದಿನಗಳಲ್ಲಿ ಇಲಾಖೆಯನ್ನು ನಂಬರ್ ಒನ್ ಮಾಡುವುದೇ ನನ್ನ ಕನಸಾಗಿದೆ ಎಂದು ಸಚಿವರು ಹೇಳಿದರು.

ಧೈರ್ಯ ತುಂಬಲಿದೆ ಅಕ್ಕ ಪಡೆ

ಮಹಿಳೆಯರಿಗೆ ಹೆಚ್ಚು ಸುರಕ್ಷತೆ ನೀಡುವ ಸಲುವಾಗಿ ಅಕ್ಕ ಪಡೆಯನ್ನು ರಾಜ್ಯಾದ್ಯಂತ ಆರಂಭಿಸಲಾಗುತ್ತಿದೆ. ಇದಕ್ಕೆ ಇಲಾಖೆಯ ಅಧಿಕಾರಿಗಳು ಪೊಲೀಸ್ ಇಲಾಖೆಯೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಅಕ್ಕ ಪಡೆ ಮನೆ ಮಾತಾಗುವಂತೆ ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಹೋಮ್ ಗಾರ್ಡ್ಸ್, ಎನ್​​ಸಿಸಿ ವಿದ್ಯಾರ್ಥಿಗಳು ಅಕ್ಕ ಪಡೆಯಲ್ಲಿ ಕಾರ್ಯನಿರ್ವಹಿಸಲಿದೆ. ಬೆಳಗ್ಗೆ 8 ರಿಂದ ರಾತ್ರಿ 8ರ ವರೆಗೆ ಅಕ್ಕ ಪಡೆ ಶಾಲಾ‌ ಕಾಲೇಜು, ಪಾರ್ಕ್, ಶಾಪಿಂಗ್ ಮಾಲ್ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಗಸ್ತು‌ ತಿರುಗಲಿದ್ದು, ಶಾಲಾ‌ ಕಾಲೇಜುಗಳಿಗೆ ಭೇಟಿ ನೀಡಿ ಸಹಾಯ ಮಾಡಲಿದೆ ಎಂದರು.‌

ಡೀಪ್ ಫೇಕ್ ಹಾವಳಿ ಜಾಸ್ತಿ ಆಗುತ್ತಿದ್ದು, ಇದಕ್ಕೆ ಹೆಣ್ಣುಮಕ್ಕಳು, ಮಹಿಳೆಯರೇ ಟಾರ್ಗೆಟ್ ಆಗುತ್ತಿದ್ದಾರೆ. ಇದನ್ನು ತಡೆಯಲು ಅಕ್ಕ ಪಡೆ ಕೆಲಸ ಮಾಡಲಿದೆ. ಜೊತೆಗೆ ಆರಂಭಗೊಂಡ ಮೂರು ತಿಂಗಳಲ್ಲಿ ಮನೆ ಮನೆಗೆ ತೆರಳಲಿದೆ, ಜನರಿಗೆ ಜಾಗೃತಿ ಮೂಡಿಸಲಿದೆ ಎಂದು ಹೇಳಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment