Thursday, December 25, 2025
Google search engine
Homeರಾಜ್ಯಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಆಗಸ್ಟ್‌ 30ರವರೆಗೆ ರಾಜ್ಯದ ಹಲವೆಡೆ ಭಾರೀ ಮಳೆ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಆಗಸ್ಟ್‌ 30ರವರೆಗೆ ರಾಜ್ಯದ ಹಲವೆಡೆ ಭಾರೀ ಮಳೆ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿವುದರಿಂದ ಆಗಸ್ಟ್‌ 30ರವರೆಗೆ ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ 30ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಒಳನಾಡು ಜಿಲ್ಲೆಗಳಲ್ಲಿ ಆ.28ರವರೆಗೆ ಗುಡುಗು, ಗಾಳಿ ಸಹಿತ ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

ಕಳೆದ ಕೆಲವು ದಿನಗಳಿಂದ ಜಿಲ್ಲೆಯಲ್ಲಿ ವರುಣ ಅಬ್ಬರಿಸುತ್ತಿದ್ದಾನೆ. ಇಂದು ಕೂಡು ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುತ್ತಿದೆ. ಇನ್ನೂ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ಬೀದರ್, ಔರಾದ್, ಭಾಲ್ಕಿ, ಹುಮ್ನಾಬಾದ್, ಬಸವಕಲ್ಯಾಣ ಸೇರಿದಂತೆ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಅಬ್ಬರದ ಮಳೆಗೆ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ. ಸತತ ಮಳೆಯಿಂದಾಗಿ ಜಮೀನುಗಳು ಜಲಾವೃತಗೊಂಡು, ರಾಶಿಗೆ ಬಂದಿದ್ದ ಬೆಳೆ ಹಾಳಾಗುವ ಭೀತಿಯಲ್ಲಿ ಅನ್ನದಾತರು ಪರದಾಡುವಂತಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments