Tuesday, 17 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ರಾಜ್ಯ

ಅಮೆರಿಕ ಕನ್ನಡ ಸಂಘಟನೆಗಳ ಕೂಟ ‘ಅಕ್ಕ’ ಅಧ್ಯಕ್ಷರಾಗಿ ಮಂಡ್ಯದ ಮಧು ರಂಗಯ್ಯ ಆಯ್ಕೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 16 ವೀಕ್ಷಣೆಗಳು
akka president

ಬೆಂಗಳೂರು: ಅಮೆರಿಕದ ಕನ್ನಡ ಸಂಘಟನೆಗಳ ಕೂಟದ (ಅಕ್ಕ) ಅಧ್ಯಕ್ಷರಾಗಿ ಮಧು ರಂಗಯ್ಯ ಆಯ್ಕೆಯಾಗಿದ್ದಾರೆ.
ಮುಂದಿನ ಎರಡು ವರ್ಷಗಳ ಅವಧಿಗೆ ಮಧು ರಂಗಯ್ಯ ಅಕ್ಕವನ್ನು ಮುನ್ನಡೆಸಲಿದ್ದಾರೆ.

ಮುಂಬರುವ ಅಕ್ಕ ಸಮ್ಮೇಳನ ಹಾಗೂ ಅಕ್ಕದ ವಿವಿಧ ಕಾರ್ಯಕ್ರಮಗಳು ನೂತನ ಪದಾದಿಕಾರಿಗಳ ತಂಡದ ನೇತೃತ್ವದಲ್ಲಿ ಜರುಗಲಿದೆ.

ನೂತನ ಪದಾದಿಕಾರಿಗಳ ತಂಡ ಹೀಗಿದೆ:
ಅಧ್ಯಕ್ಷರಾಗಿ ಮಧುರಂಗಯ್ಯ, ಕಾರ್ಯದರ್ಶಿಯಾಗಿ ಡಾ ನವೀನ್ ಕೃಷ್ಣ, ಖಜಾಂಚಿಯಾಗಿ ಚಂದ್ರು ಆರಾಧ್ಯ ಉಪಾಧ್ಯಕ್ಷರಾಗಿ ರೂಪಶ್ರೀ ಮೇಲುಕೋಟೆ,ರಘು ಶಿವರಾಮ್,ವಿನೋದ್ಕುಮಾರ್ ಜಂಟಿ ಕಾರ್ಯದರ್ಶಿಯಾಗಿ ಮನು ಗೋರೂರು,ಡಾ ಲಾವಣ್ಯ ಸಹ ಕಾರ್ಯದರ್ಶಿಯಾಗಿ ವತ್ಸಾ ರಾಮನಾಥನ್, ಡಾ ಮೋಹನ್ ಕುಮಾರ್ ಸೇರಿದಂತೆ ಗೌರವ ಸದಸ್ಸರಾಗಿ ಹಿರಿಯ ಅಕ್ಕ ಸಂಘಟರಾದ ಅಮರನಾಥಗೌಡ ಅವರು ಸೇರಿದಂತೆ ಅಮೇರಿಕದ ವಿವಿಧ ರಾಜ್ಯಗಳ ಕನ್ನಡ ಸಂಘದ 20 ಜನರ ತಂಡ ಕಾರ್ಯನಿರ್ವಹಿಸಲಿದೆ.

ಮೂಲತ: ಮಂಡ್ಯದವರಾದ ಮಧು ರಂಗಯ್ಯ ಎಂಜಿನಿಯರಿಂಗ್ ಪದವಿಧರರು. ವ್ಯಾಸಂಗ ಮುಗಿಸಿ ಅಮೆರಿಕದ ಖಾಸಗಿ ಕಂಪನಿಯಲ್ಲಿ ಎಂಜಿನಿಯರ್ ಆಗಿ ಕೆಲಸ ಆರಂಭಿಸಿದರು.

ಕಳೆದ ಮೂರು ದಶಕಗಳಿಂದ ಅಮೆರಿಕದಲ್ಲಿ ನೆಲೆಸಿದ್ದಾರೆ. ತಾಯ್ನಾಡಿನಿಂದ ದೂರವಾಗಿದ್ದರೂ ತನ್ನ ನಾಡನ್ನು ಮರೆಯದೆ ನಿರಂತರವಾಗಿ ಕನ್ನಡ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಅಮೆರಿಕದ ವಿವಿಧ ಕನ್ನಡ ಸಂಘಟನೆಗಳೊಂದಿಗೆ ಸಕ್ರಿಯವಾಗಿ ಕೆಲಸ ಮಾಡುತ್ತಾ ಕನ್ನಡ ನಾಡು, ನುಡಿ, ಸಂಸ್ಕೃತಿಯನ್ನು ಉಳಿಸಿ, ಬೆಳೆಸಿ, ಎಲ್ಲೆಡೆ ಪಸರಿಸುವ ಕೆಲಸವನ್ನು ಮುಂದುವರೆಸಿಕೊಂಡು ಬಂದಿದ್ದಾರೆ. ಕನ್ನಡ ಬಗೆಗಿನ ಇವರ ಕಾಳಜಿಗೆ ಅಕ್ಕ ಸಂಘಟನೆಯ ಜವಾಬ್ದಾರಿ ಒಲಿದಿದೆ.

ಈ ಕುರಿತು ಸಂತಸ ಹಂಚಿಕೊಂಡಿರುವ ಮಧು ರಂಗಯ್ಯ ಅವರು, ಅಕ್ಕ ಸಂಘಟನೆಗೆ 25 ವರ್ಷಗಳ ತುಂಬಿರುವ ಬೆಳ್ಳಿ ಹಬ್ಬ ಸಂದರ್ಭದಲ್ಲಿ ಸಂಘಟನೆಯ ಜವಾಬ್ದಾರಿ ಸಿಕ್ಕಿರುವುದು ಖುಷಿ ಉಂಟು ಮಾಡಿದೆ. ಅಮೆರಿಕದಲ್ಲಿನ ಕನ್ನಡಿಗರನ್ನು ಮತ್ತಷ್ಟು ಒಂದುಗೂಡಿಸಿ ಕನ್ನಡ ಭಾಷೆ, ಪರಂಪರೆ, ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಕೆಲಸ ಮಾಡುತ್ತೇನೆ ಎಂದರು.

ಹೊಸ ತಲೆಮಾರಿನ ಅನೇಕರು ಅಮೆರಿಕಕ್ಕೆ ಬರುತ್ತಿದ್ದಾರೆ. ಅವರನ್ನು ಸಂಘಟಿಸಿ ಕನ್ನಡದ ಕುರಿತಾದ ಅಭಿಮಾನ, ಆಲೋಚನೆ, ಸಾಹಿತ್ಯ, ಸಂಸ್ಕೃತಿ, ಪರಂಪರೆಯನ್ನು ಉಳಿಸಿ ಬೆಳೆಸಿಕೊಂಡು ಹೋಗಲು ಸಾಧ್ಯವಾದಷ್ಟು ಮಾರ್ಗದರ್ಶನ ಮಾಡುತ್ತೇನೆ. ಸಪ್ತ ಸಾಗರದಾಚೆಗೂ ಕನ್ನಡದ ಕಂಪು ಹಬ್ಬುತ್ತಲೇ ಇರುತ್ತದೆ ಎಂದು ಹೇಳಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment