Saturday, May 30, 2026
Google search engine
Homeರಾಜ್ಯಮಡಿಕೇರಿಯಲ್ಲಿ ಭೀಕರ ಅಪಘಾತ: ನಾಲ್ವರು ಯುವಕರ ದುರ್ಮರಣ

ಮಡಿಕೇರಿಯಲ್ಲಿ ಭೀಕರ ಅಪಘಾತ: ನಾಲ್ವರು ಯುವಕರ ದುರ್ಮರಣ

ಲಾರಿ ಮತ್ತು ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದರಿಂದ ನಾಲ್ವರು ಯುವಕರು ಮೃತಪಟ್ಟ ದಾರಣ ಘಟನೆ ಮಡಿಕೇರಿಯಲ್ಲಿ ಸಂಭವಿಸಿದೆ.

ಮಡಿಕೇರಿಯಿಂದ 50 ಕಿ.ಮೀ. ದೂರದಲ್ಲಿರುವ ದೇವರಕೊಲ್ಲಿ ಎಂಬಲ್ಲಿ ಅಪಾಯಕಾರಿ ತಿರುವಿನಲ್ಲಿ ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಶುಕ್ರವಾರ ಮಧ್ಯಾಹ್ನ 1.30ರ ಸುಮಾರಿಗೆ ಭೀಕರ ಅಪಘಾತ ಸಂಭವಿಸಿದ್ದು, ಕಾರು ನಜ್ಜುಗುಜ್ಜಾಗಿದೆ.

madikeri accident

ದುರಂತದಲ್ಲಿ ಪೊನ್ನಂಪೇಟೆಯ ಗೋಣಿಕೊಪ್ಪ ನಿವಾಸಿಗಳಾದ ರಿಜ್ವಾನ್, ನಹೀದ್, ರಾಕಿಬ್  ಮತ್ತು ನಿಹಾದ್ ಮೃತಪಟ್ಟಿದ್ದಾರೆ. ಅಪಘಾತದ ಸಂಭವಿಸಿದ ಭೀಕರತೆಗೆ ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಇನ್ನಿಬ್ಬರು ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆದಲ್ಲಿ ಅಸುನೀಗಿದ್ದಾರೆ.

ನಾಲ್ವರು ಯುವಕರು ಕಾರಿನಲ್ಲಿ ಮಡಿಕೇರಿಯಿಂದ ಸುಳ್ಯ ಕಡೆಗೆ ಪ್ರಯಾಣಿಸುತ್ತಿದ್ದರೆ, ಸುಳ್ಯ ಮಾರ್ಗವಾಗಿ ಮಡಿಕೇರಿಗೆ ಬರುತ್ತಿದ್ದ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ.

ಘಟನಾ ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಪೊಲೀಸರು ದೌಡಾಯಿಸಿದ್ದು, ಸ್ಥಳೀಯರ ನೆರವಿನಿಂದೊಂದಿಗೆ ರಕ್ಷಣಾ ಕಾರ್ಯ ನಡೆಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments