Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ರಾಜ್ಯ

ಕೇಂದ್ರ ಅನುಮತಿ ನೀಡಿದರೆ ನಾಳೆಯೇ ಮಹದಾಯಿ, ಮೇಕೆದಾಟು ಯೋಜನೆ ಜಾರಿ: ಸಿಎಂ ಸಿದ್ದರಾಮಯ್ಯ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 22 ವೀಕ್ಷಣೆಗಳು
siddamiah

ಬೆಳಗಾವಿ: ರೈತರು, ಶಿಕ್ಷಕರು, ಸೈನಿಕರು ದೇಶದ ರಕ್ಷಕರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದರು.

ಕೃಷಿ ಇಲಾಖೆ ಸಹಾಯಧನದ ಅಡಿಯಲ್ಲಿ ಸುಮಾರು 400 ಕೋಟಿ ವೆಚ್ಚದ ಕೃಷಿ ಯಂತ್ರ ಮತ್ತು ಸಲಕರಣೆಗಳನ್ನು ರೈತರಿಗೆ ವಿತರಿಸಿ ಮಾತನಾಡಿದರು.

ಕೃಷಿಕರಿಗೆ ಶೇ.40ರಷ್ಟು ಪರಿಶಿಷ್ಠ ಸಮಾಜದ ಕೃಷಿಕರಿಗೆ ಶೇ50 ರಷ್ಟು ರಿಯಾಯ್ತಿಯಲ್ಲಿ ಕೃಷಿ ಯಂತ್ರೋಪಕರಣಗಳನ್ನು ವಿತರಣೆ ಮಾಡಿದ್ದೇವೆ. ಕೃಷಿ ಕಾರ್ಮಿಕರ ಕೊರತೆಯಿಂದಾಗಿ ಕೃಷಿ ಯಂತ್ರಗಳ ಮೇಲಿನ ಅವಲಂಭನೆ ಹೆಚ್ಚಾಗಿದೆ. ಹೀಗಾಗಿ ರಿಯಾಯ್ತಿ ಬೆಲೆಯಲ್ಲಿ ಕೃಷಿಯಂತ್ರಗಳ ವಿತರಣೆ ಸರ್ಕಾರ ಮಾಡುತ್ತಿದೆ ಎಂದರು.

ಕೃಷಿಭಾಗ್ಯವನ್ನು ಒಣಕೃಷಿ ಬೆಳೆಗಾರರಿಗೆ ಜಾರಿಗೆ ತಂದಿದ್ದೇವೆ. ಕಳೆದ ವರ್ಷ 25 ಸಾವಿರಕ್ಕೂ ಹೆಚ್ಚು ಕೃಷಿ ಹೊಂಡ ಮಾಡಿಸಿದ್ದೇವೆ. ಈ ವರ್ಷ ಇದು ಇನ್ನೂ ಹೆಚ್ಚಾಗುತ್ತದೆ. ಕೃಷಿಹೊಂಡ ಬಹಳ ಉಪಯುಕ್ತ ಯೋಜನೆಯಾಗಿದೆ ಎಂದು ತಜ್ಞರು ವರದಿ ನೀಡಿದ್ದಾರೆ ಎಂದರು.

ಈಗ ಆಹಾರ ಉತ್ಪಾದನೆಯಲ್ಲಿ ಸ್ವಾವಲಂಭಿಯಾಗಿದ್ದೇವೆ. ನಮ್ಮ ಸರ್ಕಾರ ಬಂದ ಮೇಲೆ ಆಹಾರ ಉತ್ಪಾದಕರಾದ ನಿಮ್ಮ ಕಾರಣದಿಂದ 10 ಕೆಜಿ ಅಕ್ಕಿ ಕೊಡುವ ಅನ್ನಭಾಗ್ಯ ಯೋಜನೆಯನ್ನು ಕೊಡಲು ಶುರು ಮಾಡಿದೆವು ಎಂದರು.

ನೀರಾವರಿ ಯೋಜನೆಗಳಿಗೆ ನಮ್ಮ ಸರ್ಕಾರ 23 ಸಾವಿರ ಕೋಟಿ ಖರ್ಚು ಮಾಡುತ್ತಿದೆ. ಭದ್ರಾ ಮೇಲ್ದಂಡೆ ಯೋಜನೆಗೆ ಇವತ್ತಿನವರೆಗೂ ಒಂದು ಪೈಸೆಯನ್ನೂ ಕೇಂದ್ರ ಸರ್ಕಾರ ಕೊಟ್ಟಿಲ್ಲ. ಮಹದಾಯಿ, ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ಒಪ್ಪಿಗೆಯನ್ನೇ ಕೊಡುತ್ತಿಲ್ಲ. ಕೇಂದ್ರ ಸರ್ಕಾರ ಒಪ್ಪಿಗೆ ಕೊಟ್ಟರೆ ತಕ್ಷಣ ಈ ಎಲ್ಲಾ ನೀರಾವರಿ ಯೋಜನೆಗಳನ್ನು ಆರಂಭಿಸಲು ಸರ್ಕಾರ ಸಿದ್ಧವಿದೆ ಎಂದು ಘೋಷಿಸಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment