Wednesday, 25 November 2026 — Kannadavahini
BREAKING NEWS
ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ ರಾಜ್ಯ ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ ವಿದೇಶ ಭಾರತದ ಮೇಲೆ ಅಮೆರಿಕದಿಂದ ಹೆಚ್ಚುವರಿ ಸುಂಕ ಹೇರಿಕೆ? ದೇಶ ಅಕ್ರಮ ಆಸ್ತಿ ಪ್ರಕರಣದಲ್ಲಿ ರಾಹುಲ್ ಗಾಂಧಿಗೆ ಕ್ಲೀನ್ ಚಿಟ್ ಅಪರಾಧ ಕೆಪಿಎಸ್ ಸಿ ಹಗರಣ: 15 ಅಭ್ಯರ್ಥಿಗಳ ಜೊತೆ ಡೀಲ್! ಕಾನೂನು ಬಸವ ಮಂಟಪ ಲೇಖಕ ರವಿ ಹಂಜ್‌ಗೆ ನಿರೀಕ್ಷಣಾ ಜಾಮೀನು ಕಾನೂನು ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೊಬ್ಬ ಸಾಕ್ಷಿ ಉಲ್ಟಾ  ಪ್ರಾಸಿಕ್ಯೂಷನ್‌ಗೆ ಹಿನ್ನಡೆ ರಾಜ್ಯ ಮೀಸಲು ಅಧಿಸೂಚನೆ ಪ್ರಕಟ: ಜನವರಿಯಲ್ಲಿ ತಾಪಂ, ಜಿಪಂ ಚುನಾವಣೆ? ರಾಜ್ಯ ಮಾನವ-ಆನೆ ಸಂಘರ್ಷಕ್ಕೆ `ಆನೆಧಾಮ’ ಪರಿಹಾರ: ಸಚಿವ ಈಶ್ವರ ಖಂಡ್ರೆ
ರಾಜ್ಯ

ಮೈಸೂರಿನಲ್ಲಿ ನಾಳೆ ಬೃಹತ್ ಸಂವಿಧಾನ ಸಮಾವೇಶ: ಲಕ್ಷಕ್ಕೂ ಅಧಿಕ ಜನರು ಭಾಗಿ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 5 ವೀಕ್ಷಣೆಗಳು
mysore news

ಮೈಸೂರು: ರಾಜ್ಯ ಸರ್ಕಾರದಿಂದ ಸಂವಿಧಾನದ ಮೌಲ್ಯಗಳು, ಮೂಲಭೂತ ಹಕ್ಕುಗಳು ಮತ್ತು ಕರ್ತವ್ಯಗಳ ಬಗ್ಗೆ ನಾಗರಿಕರಿಗೆ ಅರಿವು ಮೂಡಿಸಲು ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಂವಿಧಾನ ದಿನದ ರಾಜ್ಯಮಟ್ಟದ ಬೃಹತ್ ಸಮಾವೇಶ ಗುರುವಾರ ನಡೆಯಲಿದ್ದು, ಒಂದು ಲಕ್ಷಕ್ಕೂ ಅಧಿಕ ಜನರು ಪಾಲ್ಗೊಳ್ಳಲಿದ್ದಾರೆ.

ಬೃಹತ್ ಸಮಾರಂಭಕ್ಕೆ ಮಹಾರಾಜ ಕಾಲೇಜು ಸಜ್ಜಾಗಿದೆ. ಒಂದೇ ದಿನ ಎರಡು ಸಮಾವೇಶಗಳು ಆಯೋಜನೆಗೊಂಡಿದ್ದು, ಗುರುವಾರ ಬೆಳಗ್ಗೆ ೧೧ ಗಂಟೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕಾರ್ಯಕ್ರಮ ಉದ್ಘಾಟಿಸಲಿದ್ದು, ಎಐಸಿಸಿ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಪ್ರಧಾನ ಭಾಷಣ ಮಾಡಲಿದ್ದಾರೆ. ಡಿಸಿಎಂ ಡಾ.ಜಿ. ಪರಮೇಶ್ವರ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ಕೆ.ಎಚ್. ಮುನಿಯಪ್ಪ, ಪಿ.ಎಂ. ನರೇಂದ್ರಸ್ವಾಮಿ, ಯತೀಂದ್ರ ಸಿದ್ದರಾಮಯ್ಯ ಭಾಗವಹಿಸಲಿದ್ದಾರೆ.

ಸಂವಿಧಾನ ನಡಿಗೆ: ಸಂವಿಧಾನದ ಹೆಜ್ಜೆ- ಸಮಾನತೆಯಡೆಗೆ ಸಂವಿಧಾನ ನಡಿಗೆ ಹಮ್ಮಿಕೊಳ್ಳಲಾಗಿದೆ. ಗನ್‌ಹೌಸ್ ವೃತ್ತದಿಂದ ಚಾಮರಾಜ ಜೋಡಿ ರಸ್ತೆಯ ಮುಖಾಂತರ ಮಹಾರಾಜ ಕಾಲೇಜು ಮೈದಾನದವರೆಗೆ ನಡಿಗೆ ನಡೆಯಲಿದೆ. ಅಂಬೇಡ್ಕರ್, ಸಂವಿಧಾನದ ಅರಿವು ಮೂಡಿಸುವ ಸ್ತಬ್ಧಚಿತ್ರಗಳು, ಕಲಾತಂಡಗಳು ಭಾಗವಹಿಸಲಿವೆ.

8 ಜಿಲ್ಲೆಗಳಿಂದ 1 ಲಕ್ಷ ಜನ ಭಾಗಿ:

ರಾಜ್ಯ ಮಟ್ಟದ ಸಂವಿಧಾನ ದಿನದ ಕಾರ್ಯಕ್ರಮದಲ್ಲಿ ಮೈಸೂರು ವಿಭಾಗ ವ್ಯಾಪ್ತಿಯ ಜಿಲ್ಲೆಗಳಿಂದ 1 ಲಕ್ಷಕ್ಕೂ ಅಧಿಕ ಜನರು ಪಾಲ್ಗೊಳ್ಳಲಿದ್ದು, ಮೈಸೂರು, ಮಂಡ್ಯ, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಹಾಸನ, ರಾಮನಗರ ಜಿಲ್ಲೆಗಳಿಗೆ ಕೆಎಸ್‌ಆರ್‌ಟಿಸಿ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಸರ್ಕಾರದ ಸಂವಿಧಾನದ ದಿನದ ಬೃಹತ್ ಸಮಾವೇಶಕ್ಕೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಅಂದಾಜು ೨೬ ಕೋಟಿ ರೂ.ಗಳನ್ನು ಖರ್ಚು ಮಾಡಲಾಗುತ್ತಿದೆ ಎಂದು ತಿಳಿದುಬಂದಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8446 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment