Tuesday, December 9, 2025
Google search engine
Homeರಾಜ್ಯಉಡುಪಿ, ಚಿಕ್ಕಮಗಳೂರಿನಲ್ಲಿ ಗರಿಷ್ಠ ಮಳೆ: ಹೊನ್ನಾವರದಲ್ಲಿ ಭೂಕುಸಿತ!

ಉಡುಪಿ, ಚಿಕ್ಕಮಗಳೂರಿನಲ್ಲಿ ಗರಿಷ್ಠ ಮಳೆ: ಹೊನ್ನಾವರದಲ್ಲಿ ಭೂಕುಸಿತ!

ರಾಜ್ಯದಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಮೇ 28 ಬುಧವಾರ ಉಡುಪಿ ಹಾಗೂ ಚಿಕ್ಕಮಗಳೂರು ಜಿಲ್ಲೆಯಲ್ಲಿ ಗರಿಷ್ಠ ಮಳೆಯಾಗಿದೆ.

ರಾಜ್ಯದಲ್ಲಿ ಮೇ 30ರವರೆಗೆ ಭಾರೀ ಗಾಳಿ ಸಹಿತ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ನದಿ ಪಾತ್ರದ ಜನರು ಹಾಗೂ ಕರಾವಳಿ ಜಿಲ್ಲೆಗಳಲ್ಲಿ  ಜನರು ಹೊರಗೆ ಹೋಗದಂತೆ ಎಚ್ಚರಿಕೆ ನೀಡಲಾಗಿದೆ.

ಮುಂದಿನ 2 ದಿನಗಳ ಕಾಲ ಕೇರಳ, ಕರ್ನಾಟಕ, ತಮಿಳುನಾಡು, ಮಹಾರಾಷ್ಟ್ರ, ಗೋವಾ, ಆಂಧ್ರಪ್ರದೇಶದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಅಲ್ಲದೆ, ಈ ಭಾಗಗಳಲ್ಲಿ ಗಂಟೆಗೆ 40-50 ಕಿಲೋ ಮೀಟರ್‌ ವೇಗದಲ್ಲಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ಉಡುಪಿ, ಮಂಗಳೂರಿನಲ್ಲಿ ಹೆಚ್ಚಿನ ಮಳೆಯಾದರೆ ಶಿವಮೊಗ್ಗ, ಚಿಕ್ಕಮಗಳೂರು ಭಾಗದಲ್ಲೂ ಮಳೆ ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಗೆ ಹೊನ್ನಾವರ ಭಾಗದ ಸರ್ಕಲ್ ನ ರಾಷ್ಟ್ರೀಯ ಹೆದ್ದಾರಿ ಬಳಿ ರಾತ್ರಿ ಅಲ್ಪ ಪ್ರಮಾಣದ ಗುಡ್ಡ ಕುಸಿತವಾಗಿದ್ದು, ಕುಸಿದ ಮಣ್ಣನ್ನು ತೆರವು ಮಾಡಿ ಸುಲಭ ಸಂಚಾರಕ್ಕೆ ವ್ಯವಸ್ಥೆ ಮಾಡಿದ್ದಾರೆ.

ಗುಡ್ಡ ಕುಸಿತದಿಂದ ಯಾವುದೇ ಹಾನಿ ಸಂಭವಿಸದೇ ಇದ್ದರೂ ಮುಂದಿನ ದಿನಗಳಲ್ಲಿ ಈ ಭಾಗದಲ್ಲಿ ಹೆಚ್ಚಿನ ಮಳೆಯಾದರೆ ಮತ್ತೆ ಗುಡ್ಡ ಕುಸಿಯುವ ಸಂಭವವಿದೆ ಎಂದು ತಜ್ಞರು ಎಚ್ಚರಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ 150 ಮಿ.ಮೀ ಮಳೆಯಾಗಿದೆ. ಉಡುಪಿಯಲ್ಲಿ ಗರಿಷ್ಠ 118 ಮಿ.ಮೀ. ಹಾಗೂ ಚಿಕ್ಕಮಗಳೂರಿನಲ್ಲಿ ಗರಿಷ್ಠ 116 ಮಿ.ಮೀ. ಮಳೆಯಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments