Home ರಾಜ್ಯ ಕೊಡಗು-ಹಾಸನ ಬಳಿ ಆನೆಗಳ ವಿಹಾರಧಾಮ ಸ್ಥಾಪನೆ: ಸಚಿವ ಈಶ್ವರ್ ಖಂಡ್ರೆ ಘೋಷಣೆ

ಕೊಡಗು-ಹಾಸನ ಬಳಿ ಆನೆಗಳ ವಿಹಾರಧಾಮ ಸ್ಥಾಪನೆ: ಸಚಿವ ಈಶ್ವರ್ ಖಂಡ್ರೆ ಘೋಷಣೆ

ಬೆಳಗಾವಿ:  ಕೊಡಗು ಮತ್ತು ಹಾಸನದಲ್ಲಿ ಕಾಡಾನೆಗಳ ಕಾಟ ನಿಯಂತ್ರಿಸಲು ಕೊಡಗು ಮತ್ತು ಹಾಸನ ಬಳಿ 2 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಆನೆಗಳ ವಿಹಾರಧಾಮ (ಎಲಿಫೆಂಟ್ ಸಾಫ್ಟ್ ರಿಲೀಸ್ ಸೆಂಟರ್) ಮಾಡುವ ಪ್ರಯತ್ನ ನಡೆಯುತ್ತಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ವಿಧಾನಸಭೆಗೆ ತಿಳಿಸಿದ್ದಾರೆ.

by Editor
0 comments
eshwar khandre

ಬೆಳಗಾವಿ:  ಕೊಡಗು ಮತ್ತು ಹಾಸನದಲ್ಲಿ ಕಾಡಾನೆಗಳ ಕಾಟ ನಿಯಂತ್ರಿಸಲು ಕೊಡಗು ಮತ್ತು ಹಾಸನ ಬಳಿ 2 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಆನೆಗಳ ವಿಹಾರಧಾಮ (ಎಲಿಫೆಂಟ್ ಸಾಫ್ಟ್ ರಿಲೀಸ್ ಸೆಂಟರ್) ಮಾಡುವ ಪ್ರಯತ್ನ ನಡೆಯುತ್ತಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ವಿಧಾನಸಭೆಗೆ ತಿಳಿಸಿದ್ದಾರೆ.

ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿಂದು ಬೇಲೂರು ಶಾಸಕ ಎಚ್.ಕೆ. ಸುರೇಶ್ ಅವರ ಪ್ರಶ್ನೆಗೆ ಉತ್ತರ ನೀಡಿದ ಅವರು, ಬೇಲೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಾಡಾನೆಗಳ ದಾಳಿಯಿಂದ ಹಾನಿಗೊಳಗಾದ ಮಾನವ ಪ್ರಾಣಹಾನಿ ಮತ್ತು ಮಾನವ ಗಾಯ ಪ್ರಕರಣಗಳಿಗೆ ದಯಾತ್ಮಕ ಪರಿಹಾರ ಧನ ನೀಡಲಾಗುತ್ತಿದೆ ಎಂದರು.

ಹಾಸನ ಜಿಲ್ಲಾ ವ್ಯಾಪ್ತಿಯ ಬೇಲೂರು ತಾಲ್ಲೂಕಿನ ಬಿಕ್ಕೋಡು ಹೋಬಳಿ ಗ್ರಾಮಗಳಲ್ಲಿ ಕಳೆದ 03 ತಿಂಗಳಿನಿಂದ ಕಾಡಾನೆಗಳು ಹಿಂಡು ಹಿಂಡಾಗಿ ಬಂದು ರೈತರ ಬೆಳೆಗಳನ್ನು ನಾಶ ಮಾಡುತ್ತಿವೆ, ಈ ಕಾಡಾನೆಗಳನ್ನು ಅರಣ್ಯ ಪ್ರದೇಶಗಳ ಕಡೆಗೆ ಹಿಮ್ಮೆಟಿಸಲು ಇಲಾಖಾ ವತಿಯಿಂದ ಕ್ರಮ ಕೈಗೊಳ್ಳಲಾಗುತ್ತಿರುತ್ತದೆ ಎಂದು ತಿಳಿಸಿದರು.

ಪ್ರತಿನಿತ್ಯ ಕಾಡಾನೆಗಳಿರುವ ಪ್ರದೇಶಗಳಿಗೆ ಭೇಟಿ ನೀಡಿ ಸ್ಥಳೀಯ ಸಾರ್ವಜನಿಕರುನ್ನು ಸಂಪರ್ಕಿಸಿ ಆನೆಗಳ ಚಲನ-ವಲನಗಳ ಮಾಹಿತಿಯನ್ನು ನೀಡಿ ಎಚ್ಚರಿಕೆಯಿಂದ ಇರುವಂತೆ ಧ್ವನಿವರ್ಧಕದ ಮೂಲಕ ತಿಳಿಸಲಾಗುತ್ತಿದೆ. ಆನೆ ಕಾರ್ಯ ಪಡೆ(ETF), ಕ್ಷಿಪ್ರ ಸ್ಪಂದನ ತಂಡ(RRT) ಮತ್ತು ಹಿಮ್ಮೆಟ್ಟಿಸುವ ಶಿಬಿರ ತಂಡದ (ADC) ಸಿಬ್ಬಂದಿಗಳೊಂದಿಗೆ ರಾತ್ರಿ ಗಸ್ತು ಕಾರ್ಯ ಕೈಗೊಂಡು ಸ್ಥಳೀಯ ಸಾರ್ವಜನಿಕರನ್ನು ಎಚ್ಚರಿಸುವ ಕ್ರಮ ಕೈಗೊಂಡಿವೆ ಎಂದರು.

banner

ಕಾಡಾನೆಗಳು ಸಂಚರಿಸುವ ಪ್ರದೇಶಗಳಲ್ಲಿ ಡಿಜಿಟಲ್ ಸೂಚನಾ ಫಲಕಗಳನ್ನು ಅಳವಡಿಸಿ ಸಾರ್ವಜನಿಕರಿಗೆ ಮಾಹಿತಿಯನ್ನು ರವಾನಿಸಲಾಗುತ್ತಿರುತ್ತದೆ. ಆಕಾಶವಾಣಿ ಮುಖಾಂತರ ಹಾಗೂ ವಾಟ್ಸಾಪ್ ಗ್ರೂಪ್ ಗಳ ಮುಖಾಂತರ ಕಾಡಾನೆಗಳ ಚಲನ-ಚಲನ ಸಂದೇಶಗಳನ್ನು ರವಾನಿಸಲಾಗುತ್ತಿರುತ್ತದೆ, ಇಲಾಖಾ ವಾಹನಗಳಲ್ಲಿ ಪ್ರತಿನಿತ್ಯ ಕಾಡಾನೆಗಳಿರುವ ಸ್ಥಳಗಳಲ್ಲಿ ಗಸ್ತು ಮಾಡಿ ಧ್ವನಿವರ್ಧಕಗಳ ಮುಖಾಂತರ ಸಾರ್ವಜನಿಕರಿಗೆ ಹಾಗೂ ಗ್ರಾಮಸ್ಥರಿಗೆ ಮಾಹಿತಿಯನ್ನು ನೀಡಲಾಗುತ್ತಿದೆ ಎಂದೂ ವಿವರಿಸಿದರು.

ವನ್ಯಪ್ರಾಣಿಗಳ ದಾಳಿಯಿಂದ ಮೃತಪಟ್ಟ ಕುಟುಂಬದ ಹತ್ತಿರದ ಬಂಧುಗಳಿಗೆ ಈ ಹಿಂದೆ ರೂ.7.50 ಲಕ್ಷ ರೂ. ಪರಿಹಾರ ನೀಡಲಾಗುತ್ತಿತ್ತು. ಈಗ ರೂ.15.00 ಲಕ್ಷ ರೂ. ದಯಾತ್ಮಕ ಪರಿಹಾರ ನೀಡಲಾಗುತ್ತಿದೆ. ಜೊತೆಗೆ ಮಾಹೆಯಾನ ರೂ.4000.00 ರಂತೆ 05 ವರ್ಷಗಳ ಅವಧಿಗೆ ಮಾಸಾಶನ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ ಎಂದೂ ತಿಳಿಸಿದರು.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ಮೈಸೂರು ಚಾಮುಂಡೇಶ್ವರಿ ಉಡುಗೊರೆ ಕಾಳಸಂತೆಯಲ್ಲಿ ಮಾರಾಟ: ಸ್ನೇಹಮಯಿ ಕೃಷ್ಣ ಗಂಭೀರ ಆರೋಪ ಕೊಡಗು-ಹಾಸನ ಬಳಿ ಆನೆಗಳ ವಿಹಾರಧಾಮ ಸ್ಥಾಪನೆ: ಸಚಿವ ಈಶ್ವರ್ ಖಂಡ್ರೆ ಘೋಷಣೆ World news 1500 ಕ್ರಿಮಿನಲ್ ಗಳಿಗೆ ಕ್ಷಮಾದಾನ ಘೋಷಿಸಿದ ಜೋ ಬಿಡೈನ್! 22,000 ಕೋಟಿ ವೆಚ್ಚದಲ್ಲಿ Su-30 ಫೈಟರ್ ಜೆಟ್ಸ್, ಕೆ-9 ಹೌಥಿಜೆರ್ಸ್ ಖರೀದಿಗೆ ಕೇಂದ್ರ ಸಂಪುಟ ಅಸ್ತು! Cricket ರಹಾನೆ-ಶಾ ಮಿಂಚಿನಾಟ: ವಿಶ್ವದಾಖಲೆ ಬರೆದ ಮುಂಬೈ! 18 ವರ್ಷದ ಭಾರತದ ಗುಕೇಶ್ ವಿಶ್ವ ಚೆಸ್ ಚಾಂಪಿಯನ್! ಪತ್ನಿ ಹಾರಿದ ಬಾವಿಗೆ ಹಾರಿ ಪತಿ ಆತ್ಮಹತ್ಯೆ: ಸಾವಿನಲ್ಲೂ ಒಂದಾದ ದಂಪತಿ! ಬಿಜೆಪಿ ಮುಖಂಡ ಯತ್ನಾಳ್, ತೇಜಸ್ವಿ ಸೂರ್ಯ ಎಫ್ ಐಆರ್ ರದ್ದು! ಸತೀಶ್ ಜಾರಕಿಹೊಳಿಗೆ ಬಿಗ್ ರಿಲೀಫ್: ‘ಹಿಂದೂ ಪದ ಅಶ್ಲೀಲ’ ಹೇಳಿಕೆಯ ಕೇಸು ರದ್ದುಗೊಳಿಸಿದ ಹೈಕೋರ್ಟ್ BREAKING ಸಚಿವ ಈಶ್ವರ್ ಖಂಡ್ರೆ ಕಚೇರಿ ಮುಂದೆ ವಿಷ ಸೇವಿಸಿ ರೈತರಿಂದ ಆತ್ಮಹತ್ಯೆಗೆ ಯತ್ನ!