Monday, 16 November 2026 — Kannadavahini
BREAKING NEWS
ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ
ರಾಜ್ಯ

ಸೌದೆ ಒಲೆಯಲ್ಲಿ ಅಡುಗೆ ಮಾಡಿ: ಸಚಿವ ಕೆಎಚ್ ಮುನಿಯಪ್ಪ ಸಲಹೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
3 ನಿಮಿಷ ಓದು 17 ವೀಕ್ಷಣೆಗಳು
KH Muniyappa

ಬೆಂಗಳೂರು: ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿನ ಯುದ್ಧದಿಂದ ಸಿಲಿಂಡರ್​ ಅಭಾವ ಇರುವುದರಿಂದ ಸೌದೆ ಒಲೆ ಬಳಸುವಂತೆ ಆಹಾರ ಸಚಿವ ಕೆ.ಹೆಚ್​.ಮುನಿಯಪ್ಪ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ನಗರದಲ್ಲಿ ಭಾನುವಾರ ತಮ್ಮ ಖಾಸಗಿ ನಿವಾಸದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಕೆ.ಹೆಚ್ ಮುನಿಯಪ್ಪ, ಸಿಲಿಂಡರ್​ ಅಭಾವ ಇರುವುದರಿಂದ ಹಳ್ಳಿ ಭಾಗದ ಜನರು ಸೌದೆ ಒಲೆಗಳನ್ನು ಬಳಸಿ. ಬೆಂಗಳೂರು ಬಿಟ್ಟು 40 ಕಿಲೋಮೀಟರ್ ಹೋದರೆ ಸೌದೆ ಸಿಗುತ್ತೆ. ಅರಣ್ಯ ಪ್ರದೇಶದ ಹಸಿ ಮರ ಬಿಟ್ಟು ಒಣ ಕಟ್ಟಿಗೆ ಬಳಸುವಂತೆ ಅವರು ಮನವಿ ಮಾಡಿದ್ದಾರೆ.

ರಾಜ್ಯದಲ್ಲಿ ಸಿಲಿಂಡರ್​ ಕೊರತೆಗೆ ಕೇಂದ್ರ ಸರ್ಕಾರವೇ ಕಾರಣ. ಡಿಸ್ಟ್ರಿಬ್ಯೂಟರ್​ಗಳ ಮೇಲೆ ದೂರು ಬರುತ್ತಿವೆ. ಡೊಮೆಸ್ಟಿಕ್ ಸಿಲಿಂಡರ್ ಈ ಹಿಂದಿನಂತೆ ಮುಂದುವರಿಯುತ್ತೆ. ಆಯಿಲ್ ಕಂಪನಿಗಳಿಗೆ ಸರ್ಕಾರ ಈಗಾಗಲೇ ಸೂಚನೆ ನೀಡಿದೆ. ಸಕಾಲಕ್ಕೆ ಗ್ರಾಹಕರ ಮನೆ ಬಾಗಿಲಿಗೆ ಸಿಲಿಂಡರ್ ತಲುಪಿಸಬೇಕು. ಸಿಲಿಂಡರ್​ಗಾಗಿ ಯಾರು ಕೂಡ ಕ್ಯೂ ನಿಲ್ಲಬಾರದು. ನೀವು ಬುಕ್ಕಿಂಗ್ ಮಾಡಿದ್ದರೆ ನಿಮ್ಮ ಮನೆಗೆ ಸಿಲಿಂಡರ್ ಬರುತ್ತೆ. ಕೇಂದ್ರ ಸರ್ಕಾರ ಗ್ಯಾಸ್​ ಪೂರೈಸಲು ಪ್ರಯತ್ನ ಮಾಡುತ್ತಿದೆ. ಈಗ 40% ಸಿಲಿಂಡರ್ ಪೂರೈಕೆ ಆಗುತ್ತಿದೆ ಎಂದು ಹೇಳಿದ್ದಾರೆ.

ರಾಜ್ಯಕ್ಕೆ ವಾಣಿಜ್ಯ ಎಲ್​​ಪಿಜಿ ಸಿಲಿಂಡರ್ ಪೂರೈಕೆಯನ್ನು ಶೇ. 68 ಗೆ ಹೆಚ್ಚಿಸಲಾಗಿದೆ. ರಾಜ್ಯ ಸರ್ಕಾರವು ಇಂದಿನಿಂದಲೇ ಹೆಚ್ಚುವರಿ ವಾಣಿಜ್ಯ ಎಲ್​​ಪಿಜಿ ಸಿಲಿಂಡರ್‌ಗಳನ್ನು ವಿತರಿಸಲಾಗುತ್ತಿದೆ. ಶಿಕ್ಷಣ ಸಂಸ್ಥೆಗಳು, ವಸತಿ ನಿಲಯಗಳು, ಆಸ್ಪತ್ರೆ ಮತ್ತು ಇತರೆ ಅವಶ್ಯಕ ಸಂಸ್ಥೆಗಳಿಗೆ 4200 ಸಿಲಿಂಡರ್ ಹಂಚಿಕೆ ಮಾಡಲಾಗಿದೆ. ಸರ್ಕಾರಿ, ಪಿಎಸ್​​ಯು ಸಂಸ್ಥೆಗಳು, ವಿಮಾನ ನಿಲ್ದಾಣ, ರೈಲು, ಬಸ್ ನಿಲ್ದಾಣಗಳ ಕ್ಯಾಂಟೀನ್‌ಗಳಿಗೆ 1200 ಸಿಲಿಂಡರ್ ಹಂಚಲಾಗಿದೆ ಎಂದರು.

ಹೋಟೆಲ್, ಡಾಬಾ, ರೆಸ್ಟೋರೆಂಟ್, ಕ್ಯಾಂಟೀನ್, ಕೇಫೆ, ಬೇಕರಿ, ಸಮುದಾಯ ಅಡುಗೆ ಕೇಂದ್ರಗಳು, ಪಿ.ಜಿ, ಫುಡ್ ವಸ್ತು ನಿಲಯಗಳಿಗೆ 17500 ಸಿಲಿಂಡರ್, ಬೀಜ ಸಂಸ್ಕರಣೆ, ಕೃಷಿ ಮತ್ತು ಸಂಬಂಧಿತ ಕ್ಷೇತ್ರಗಳು, ಜೈವೋದ್ಯಮ, ಮೀನುಗಾರಿಕೆ, ಕೋಳಿ ಸಾಕಣೆ, ರೇಷ್ಮೆ ಹುಳು ಸಾಕಣೆ ಕೇಂದ್ರಗಳಿಗೆ 6000, ಇತರ ಅವಶ್ಯಕತೆ ಆಧಾರದ ಮೇಲೆ 563 ಸಿಲಿಂಡರ್‌ ಸೇರಿದಂತೆ ಒಟ್ಟು 29463 ಕಮರ್ಷಿಯಲ್ ಸಿಲಿಂಡರ್ ನಿತ್ಯ ವಿತರಿಸಲಾಗುತ್ತಿದೆ. ಹೆಚ್ಚಿನ ಬೆಲೆಗೆ ಸಿಲಿಂಡರ್ ಮಾರಾಟ ಮಾಡಿದರೆ ಪರವಾನಗಿ ರದ್ದು ಮಾಡಲಾಗುವುದು ಎಂದ ಸಚಿವ ಮುನಿಯಪ್ಪ ಎಚ್ಚರಿಕೆ ನೀಡಿದರು.

ಕೆಲವು ಅನಿಲ ವಿತರಕರು ನಿಗದಿತ ದರಕ್ಕಿಂತ ಹೆಚ್ಚಿನ ಬೆಲೆಗೆ ಸಿಲಿಂಡರ್ ಮಾರಾಟ ಮಾಡುತ್ತಿದ್ದಾರೆ. ಈ ಬಗ್ಗೆ ನಮಗೆ ದೂರುಗಳು ಬಂದಿವೆ. ಎಲ್ಲಾ ಎಲ್ ಪಿಜಿ ವಿತರಕರು ಕಡ್ಡಾಯವಾಗಿ ಸರ್ಕಾರ ನಿಗದಿಪಡಿಸಿದ ದರದಲ್ಲೇ ಸಿಲಿಂಡರ್ ವಿತರಿಸಬೇಕು. ಹೆಚ್ಚುವರಿ ದರ ವಸೂಲಿ ಮಾಡಿದರೆ ಕಾನೂನು ಕ್ರಮಕೈಗೊಳ್ಳುವುದರ ಮೂಲಕ ಪರವಾನಗಿ ರದ್ದು ಮಾಡಲಾಗುವುದು. ಎಲ್ ಪಿಜಿ ಸಿಲಿಂಡರ್ ಅಕ್ರಮ ದಾಸ್ತಾನು ಸಂಬಂಧ 1169 ಕೇಸ್ ದಾಖಲಾಗಿವೆ. ವಾಣಿಜ್ಯ ಉದ್ದೇಶಕ್ಕೆ ಬಳಸ್ತಿದ್ದ 1603 ಸಿಲಿಂಡರ್ ವಶಪಡಿಸಿಕೊಳ್ಳಲಾಗಿದೆ ಎಂದು ಸಚಿವ ಮುನಿಯಪ್ಪ ಹೇಳಿದ್ದಾರೆ.

ಕಾಳಸಂತೆಯಲ್ಲಿ ಮಾರಿದರೆ ಪರವಾನಗಿ ರದ್ದು

ಖಾಸಗಿ ಅನಿಲ ವಿತರಕರು ಸರ್ಕಾರ ನಿಗದಿಪಡಿಸಿದ ದರಕ್ಕಿಂತ ಹೆಚ್ಚಿಗೆ ಸಿಲಿಂಡ‌ರ್ ಮಾರಾಟ ಮಾಡುತ್ತಿರುವ ಬಗ್ಗೆ ದೂರುಗಳು ಬಂದಿದೆ. ಎಲ್ಲಾ ಎಲ್​ಪಿಜಿ ವಿತರಕರು ಕಡ್ಡಾಯವಾಗಿ ಸರ್ಕಾರ ನಿಗದಿಪಡಿಸಿದ ದರದಲ್ಲೇ ಸಿಲಿಂಡರ್ ವಿತರಿಸಬೇಕು ಎಂದು ಸಚಿವ ಕೆಎಚ್ ಮುನಿಯಪ್ಪ ಸೂಚಿಸಿದ್ದಾರೆ.

ಹೆಚ್ಚು ದರ ವಸೂಲಿ ಮಾಡಿ ಕಾಳಸಂತೆಯಲ್ಲಿ ಗೃಹ ಬಳಕೆ, ವಾಣಿಜ್ಯ ಬಳಕೆ, ಆಟೋ ಎಲ್​ಪಿಜಿಗಳನ್ನು ಮಾರಾಟ ಮಾಡುವುದು ಕಂಡುಬಂದಲ್ಲಿ ಕಾನೂನು ಕ್ರಮ, ಪರವಾನಗಿ ರದ್ದುಗೊಳಿಸುವ ಕಠಿಣ ಕ್ರಮ ಕೈಗೊಳ್ಳಲಾಗುವುದು. ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಮೇಲ್ವಿಚಾರಣಾ ಸಮಿತಿ ರಚಿಸಲಾಗಿದ್ದು, ಎಲ್ ಪಿಜಿ ಪೂರೈಕೆ, ವಿತರಣೆ, ದರ ನಿಯಂತ್ರಣ ಮತ್ತು ದುರುಪಯೋಗ ತಡೆ ಕುರಿತು ನಿರಂತರ ಮೇಲ್ವಿಚಾರಣೆ ನಡೆಸಲಾಗುತ್ತಿದೆ. ಕಾಳಸಂತೆ ಮಾರಾಟ ತಡೆಗಟ್ಟಲು ದಾಳಿ ಮತ್ತು ಪರಿಶೀಲನೆಗಳನ್ನು ಹೆಚ್ಚಿಸಲಾಗಿದೆ. ಭಾರತ ಸರ್ಕಾರದಿಂದ ಹೆಚ್ಚುವರಿ ಸಿಲಿಂಡರ್ ಪೂರೈಕೆ ದೊರೆತಿರುವುದರಿಂದ ರಾಜ್ಯದಲ್ಲಿ ಎಲ್.ಪಿ.ಜಿ ಪೂರೈಕೆ ಪರಿಸ್ಥಿತಿ ಮುಂದಿನ ದಿನಗಳಲ್ಲಿ ಗಮನಾರ್ಹವಾಗಿ ಸುಧಾರಿಸುವ ನಿರೀಕ್ಷೆ ಇದೆ ಎಂದಿದ್ದಾರೆ.

ಆಟೋ ಎಲ್ ಪಿಜಿ ಕೊರತೆ ಇಲ್ಲ

ಆಟೋ‌ ಎಲ್​ಪಿಜಿಗೆ ಯಾವುದೇ ರೀತಿಯ ‌ಕೊರತೆ ಇಲ್ಲ.ಆಟೋ ಎಲ್‌ಪಿಜಿ ಪೂರೈಕೆಯನ್ನು ರಾಜ್ಯ ಸರ್ಕಾರವು ನಿಕಟವಾಗಿ ಗಮನಿಸುತ್ತಿದೆ ಎಂದು ಸಚಿವರು ತಿಳಿಸಿದರು.

ಪ್ರಸ್ತುತ ಈ ಸಂಸ್ಥೆಗಳು ಪ್ರತಿ ಲೀಟರ್‌ಗೆ ರೂ. 77.74 ರ ದರದಲ್ಲಿ ಆಟೋ ಎಲ್‌ಪಿಜಿ ಪೂರೈಸುತ್ತಿವೆ. ಕಳೆದ ವಾರದಲ್ಲಿ ದಿನಕ್ಕೆ ಸರಾಸರಿ 64.9 ಮೆಟ್ರಿಕ್ ಟನ್ ಆಟೋ ಎಲ್‌ಪಿಜಿಯನ್ನು ವಿತರಿಸಲಾಗಿದೆ. ಸಂಘರ್ಷದ ಮೊದಲು ಈ ಪ್ರಮಾಣವು ದಿನಕ್ಕೆ 57.6 ಮೆಟ್ರಿಕ್ ಟನ್ ಇತ್ತು. ಇದು ಪೂರೈಕೆಯಲ್ಲಿನ ಗಮನಾರ್ಹ ಹೆಚ್ಚಳವನ್ನು ತೋರಿಸುತ್ತದೆ ಎಂದು ಅವರು ವಿವರಿಸಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8418 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment