Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ರಾಜ್ಯ

ಪಡಿತರದಲ್ಲಿ ಅಕ್ಕಿ ಜೊತೆ ಬೇಳೆ, ಎಣ್ಣೆ ಕೊಡಲು ಚಿಂತನೆ: ಸಚಿವ ಕೆಎಚ್ ಮುನಿಯಪ್ಪ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 40 ವೀಕ್ಷಣೆಗಳು
kh muniyappa
kh muniyappa

ಮುಂದಿನ ದಿನಗಳಲ್ಲಿ ಪಡಿತರ ಚೀಟಿಯಲ್ಲಿ ಬೇಳೆ ಮತ್ತು ಎಣ್ಣೆಯನ್ನು ಕೂಡ ಪೂರೈಕೆ ಮಾಡುವ ಚಿಂತನೆ ರಾಜ್ಯ ಸರ್ಕಾರಕ್ಕೆ ಇದೆ ಎಂದು ಆಹಾರ ಸಚಿವ ಕೆಎಚ್ ಮುನಿಯಪ್ಪ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಈಗಾಗಲೇ 10 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಬೇಳೆ ಮತ್ತು ಎಣ್ಣೆಯನ್ನು ಕೂಡ ಪಡಿತರದಲ್ಲಿ ನೀಡುವ ಚಿಂತನೆ ಇದೆ ಎಂದರು.

ರಾಜ್ಯದಲ್ಲಿ ಪ್ರಸ್ತುತ 17 ಲಕ್ಷಕ್ಕೂ ಅಧಿಕ ಜನರಿಗೆ ಹೆಚ್ಚುವರಿ ಪಡಿತರ ವಿತರಣೆ ಮಾಡಲಾಗುತ್ತಿದೆ. ಕೇಂದ್ರ ಸರ್ಕಾರ ಪಡಿತರ ವಿತರಣೆಗೆ ಮಿತಿ ಹೇರಿದೆ. ಈ ಬಗ್ಗೆ ಕೇಂದ್ರದ ಗಮನಕ್ಕೆ ತರಲು ಪ್ರಯತ್ನ ನಡೆದಿದೆ ಎಂದು ಅವರು ಹೇಳಿದರು.

ಉತ್ತರ ಕರ್ನಾಟಕ ಭಾಗದಲ್ಲಿ ಜೋಳ ವಿತರಿಸಲಾಗುತ್ತಿದೆ. ಜೋಳ ಖರೀದಿಸಿದ ಮೂರು ತಿಂಗಳೊಳಗೆ ವಿತರಣೆ ಮಾಡದೇ ಇದ್ದರೆ ಹಾಳಾಗುವ ಸಾಧ್ಯತೆ ಇದೆ. ಹಾಗಾಗಿ ಜೋಳ ಖರೀದಿಸಿದ ತಕ್ಷಣ ಪಡಿತರ ವಿತರಣೆ ಮಾಡಲು ಸೂಚಿಸಲಾಗಿದೆ ಎಂದು ಅವರು ಹೇಳಿದರು.

ಕಾಳಸಂತೆಯಲ್ಲಿ ಅನ್ನಭಾಗ್ಯ ಯೋಜನೆಯ ಅಕ್ಕಿ ಮಾರಾಟದ ಬಗ್ಗೆ ಸಾಕಷ್ಟು ದೂರುಗಳು ಕೇಳಿ ಬಂದಿವೆ. ಈ ಬಗ್ಗೆ ಕ್ರಮ ಕೈಗೊಳ್ಳಲು ಮುಂದಾಗಿದ್ದೇವೆ ಎಂದು ಅವರು ಹೇಳಿದರು.

ರಾಜ್ಯದಲ್ಲಿ ಯಾವುದೇ ಕ್ರಾಂತಿ ನಡೆಯುವುದಿಲ್ಲ ಎಂದು ಸ್ಪಷ್ಟಪಡಿಸಿದ ಅವರು ಸಿದ್ದರಾಮಯ್ಯ ನಾಲ್ವಡಿ ಕೃಷ್ಣರಾಜ ಒಡೆಯರ್ ಗಿಂತ ಹೆಚ್ಚು ಮೈಸೂರು ಅಭಿವೃದ್ಧಿ ಮಾಡಿದ್ದಾರೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು. ಸಿದ್ದರಾಮಯ್ಯ 5 ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿದ್ದಾರೆ ಎಂದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment