Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ರಾಜ್ಯ

ಎಸಿ-ಡಿಸಿ ಕಚೇರಿಗಳಲ್ಲಿ ಭೂ ದಾಖಲೆ ಡಿಜಿಟಲೀಕರಿಸುವ ಭೂ ಸುರಕ್ಷಾ ಯೋಜನೆಗೆ ಸಚಿವ ಕೃಷ್ಣ ಬೈರೇಗೌಡರಿಂದ ಚಾಲನೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
3 ನಿಮಿಷ ಓದು 33 ವೀಕ್ಷಣೆಗಳು
krishna bhiraegowda
krishna bhiraegowda

ಬೆಂಗಳೂರು: ರಾಜ್ಯದಲ್ಲಿ ಭೂ ದಾಖಲೆಗಳನ್ನು ಸಂಪೂರ್ಣ ಡಿಜಿಟಲೀಕರಣ ಮಾಡಲಾಗುತ್ತಿದೆ. ಕಳೆದ ವರ್ಷ ಜನವರಿಯಲ್ಲಿ ಎಲ್ಲಾ ತಾಲೂಕು ಕಚೇರಿಗಳ ಮೂಲ ಭೂ ದಾಖಲೆಗಳನ್ನೂ ಸ್ಕ್ಯಾನ್ ಮಾಡಿ ಡಿಜಿಟಲೀಕರಿಸಲಾಗಿತ್ತು. ಇದೀಗ ಉಪ ವಿಭಾಗಾಧಿಕಾರಿ ಹಾಗೂ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿರುವ ದಾಖಲೆಗಳ ಸ್ಕ್ಯಾನಿಂಗ್ಗೂ ಇಂದಿನಿಂದ ಚಾಲನೆ ನೀಡಲಾಗಿದೆ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.

ಬೆಂಗಳೂರು ಉತ್ತರ ಮತ್ತು ದಕ್ಷಿಣ ಉಪವಿಭಾಗಾಧಿಕಾರಿಗಳ ಕಚೇರಿಯ ಕಂದಾಯ ದಾಖಲಾತಿಗಳ ಸ್ಕ್ಯಾನಿಂಗ್ ಮತ್ತು ಡಿಜಿಟಲೀಕರಣಗೊಳಿಸುವ ಭೂ ಸುರಕ್ಷಾ ಯೋಜನೆಯನ್ನು ಬೆಂಗಳೂರು ಕಂದಾಯ ಭವನದಲ್ಲಿ ಇಂದು ಉದ್ಘಾಟಿಸಿ ಮಾತನಾಡಿದ ಅವರು, “ಭೂ ದಾಖಲೆಗಳಲ್ಲಿ ನಕಲಿ ಎಂಟ್ರಿಗಳು ಹಾಗೂ ಸುಳ್ಳು ದಾಖಲೆಗಳ ಸೃಷ್ಟಿಯನ್ನು ತಡೆಯುವ ಸಲುವಾಗಿ ಭೂ ದಾಖಲೆಗಳ ಡಿಜಿಟಲೀಕರಣ ಮಹತ್ವದ ಹೆಜ್ಜೆಯಾಗಿದೆ” ಎಂದು ಅಭಿಪ್ರಾಯಪಟ್ಟರು.

ರಾಜ್ಯದಲ್ಲಿ ಕಂದಾಯ ಇಲಾಖೆ ಎಲ್ಲಾ ಮೂಲ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಶಾಶ್ವತವಾಗಿ ಸಂರಕ್ಷಿಸಲಾಗುತ್ತಿದೆ. ಈ ಅಭಿಯಾನಕ್ಕೆ ಕಳೆದ ಜನವರಿಯಲ್ಲಿ ಚಾಲನೆ ನೀಡಲಾಗಿತ್ತು. ಇದೀಗ 240 ತಾಲೂಕುಗಳ ಪೈಕಿ 70 ತಾಲೂಕುಗಳಲ್ಲಿ ಗಣಕೀಕರಣ ಸಂಪೂರ್ಣವಾಗಿ ಮುಗಿಸಲಾಗಿದೆ. ರಾಜ್ಯಾದ್ಯಂತ 100 ಕೋಟಿ ಪುಟಗಳಷ್ಟು ಭೂ ದಾಖಲೆ ಇದ್ದು, 62 ಕೋಟಿ ಪುಟಗಳನ್ನು ಈಗಾಗಲೇ ಸ್ಕ್ಯಾನ್ ಮಾಡಿ ಮುಗಿಸಲಾಗಿದೆ. ಮುಂದಿನ ಮೂರು-ನಾಲ್ಕು ತಿಂಗಳಲ್ಲಿ ಎಲ್ಲಾ ಪುಟಗಳನ್ನೂ ಸಂಪೂರ್ಣ ಸ್ಕ್ಯಾನ್ ಮಾಡಲಾಗುವುದು” ಎಂದರು.

“ತಾಲೂಕು ಕಚೇರಿಗಳ ಮೂಲ ದಾಖಲೆ ಸ್ಕ್ಯಾನಿಂಗ್ ಪ್ರಗತಿಯ ಹಾದಿಯಲ್ಲಿರುವಾಗಲೇ ಭೂ ಸುರಕ್ಷಾ ಯೋಜನೆಯ ಅಡಿಯಲ್ಲಿ ಉಪ ವಿಭಾಗ ಅಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿರುವ ಮೂಲ ಭೂ ದಾಖಲೆಗಳನ್ನೂ ಸ್ಕ್ಯಾನ್ ಮಾಡುವ ಕೆಲಸಕ್ಕೂ ಮುಂದಾಗಿ ಈಗಾಗಲೇ ಕಳೆದ ತಿಂಗಳಿನಿಂದ ಕೆಲಸ ಆರಂಭಿಸಿದ್ದು, ಇಂದು ಎಸಿ ಕಚೇರಿಗಳ ಸ್ಕ್ಯಾನಿಂಗ್ ಗೆ ಸಾಂಕೇತಿಕವಾಗಿ ಚಾಲನೆ ನೀಡುವ ಮೂಲಕ ಇಡೀ ರಾಜ್ಯಾದ್ಯಂತ ಎಸಿ ಡಿಸಿ ಕಚೇರಿಗಳ ಕಂದಾಯ ದಾಖಲೆಗಳ ಗಣಕೀಕರಣಕ್ಕೆ ಸಾಂಕೇತಿಕ ಚಾಲನೆ ನೀಡಲಾಗಿದೆ” ಎಂದು ತಿಳಿಸಿದರು.

“ಈ ಹಿಂದೆ ಹೊರ ಬಂದಿರುವ ನಕಲಿ ದಾಖಲೆಗಳ ಸೃಷ್ಟಿ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಪ್ರತಿಯೊಂದು ಅನುಮಾನಾಸ್ಪದ ಪ್ರಕರಣಗಳನ್ನು ಕುಲಂಕೂಷವಾಗಿ ಪರಿಶೀಲಿಸಿ ಅಗತ್ಯವಿದ್ದಲ್ಲಿ ಫೋರೆನ್ಸಿಕ್ ಲ್ಯಾಬ್ ಗೆ ಕಳಿಸಿ ದಾಖಲೆಗಳ ನೈಜತೆ ಕುರಿತು ವರದಿಯನ್ನು ಪಡೆದು ಸೂಕ್ತ ಕ್ರಮ ವಹಿಸಲಾಗುವುದು” ಎಂದರು.

“ಸ್ಕ್ಯಾನಿಂಗ್ ಮೂಲಕ ದಾಖಲೆಗಳನ್ನು ಡಿಜಿಟಲ್ ಮಾದರಿಯಲ್ಲಿ ರಕ್ಷಿಸುವುದರಿಂದ ಭವಿಷ್ಯದಲ್ಲಿ ನಕಲಿ ದಾಖಲೆಗಳ ಸೃಷ್ಟಿಗೆ ಕಡಿವಾಣ ಹಾಕಿದಂತಾಗುವುದು. ಕಂದಾಯ ದಾಖಲೆಗಳು ಅಥವಾ ಕಡತಗಳು ಕಳುವಾಗುವುದನ್ನು ಹಾಗೂ ಮಧ್ಯವರ್ತಿಗಳ ಹಾವಳಿಯನ್ನು ತಪ್ಪಿಸಿ, ಸಾರ್ವಜನಿಕರ ಕೈಬೆರಳ ತುದಿಯಲ್ಲೇ ಅವರ ಜಮೀನಿನ ದಾಖಲೆ ಸುಲಭವಾಗಿ ಲಭ್ಯವಾಗಿಸುವುದೇ ನಮ್ಮ ಮೂಲ ಉದ್ದೇಶ. ಇಂದು ನಮ್ಮ ಉದ್ದೇಶ ಯಶಸ್ವಿಯಾಗಿದ್ದು, ಸಾರ್ವಜನಿಕರು ಭೂ ಸುರಕ್ಷಾ ವೆಬ್ ಸೈಟ್ ಮೂಲಕ ತಮ್ಮ ಮನೆಯಲ್ಲಿದ್ದೇ ಭೂ ದಾಖಲೆಗಳನ್ನು ಪಡೆಯಬಹುದಾಗಿದೆ. ಈಗಾಗಲೇ ಸ್ಕ್ಯಾನಿಂಗ್ ಆಗಿರುವ ಎಲ್ಲಾ ದಾಖಲೆಗಳು ಆನ್ಲೈನ್ನಲ್ಲಿ ಲಭ್ಯವಿದ್ದು, 36,36,596 ಪುಟಗಳನ್ನು ಸಾರ್ವಜನಿಕರು ಆನ್ಲೈನ್ ಮೂಲಕ ಪಡೆದಿದ್ದಾರೆ” ಎಂದು ಮಾಹಿತಿ ನೀಡಿದರು.

“ಇನ್ನೂ ಮುಂದೆ ದಾಖಲೆಗಳನ್ನು ಸ್ಕ್ಯಾನ್ ಮಾಡುವಾಗ ಅನುಮಾನಾಸ್ಪದವಾದ ದಾಖಲೆಗಳನ್ನು ಫೋರೆನ್ಸಿಕ್ ಮೂಲಕ ತನಿಖೆ ಮಾಡಿಸಿ ಕ್ರಮ ಕೈಗೊಳ್ಳುತ್ತೇವೆ. ರಾಜ್ಯದ ಎಲ್ಲಾ ಎಸಿ, ಡಿಸಿ ಕಚೇರಿಯ ದಾಖಲೆಗಳ ಸ್ಕ್ಯಾನಿಂಗ್ ಪ್ರಕ್ರಿಯೆಯನ್ನು ಮುಂದಿನ ಮೂರು ತಿಂಗಳಲ್ಲಿ ಮುಗಿಸಲಾಗುವುದು. ಸರ್ವೇ ಇಲಾಖೆ ಹಾಗೂ ನೋಂದಣಿ ಇಲಾಖೆಯಲ್ಲೂ ಸ್ಕ್ಯಾನಿಂಗ್ ಕೆಲಸಗಳು ಬಹುತೇಕ ಆರಂಭವಾಗಿದ್ದು, ಈ ಎಲ್ಲಾ ಕೆಲಸಗಳಿಗೆ ರೂ.150 ಕೋಟಿ ಅನುದಾನ ಇದೆ. ಈಗಾಗಲೇ ರೂ.100 ಕೋಟಿ ಖರ್ಚು ಮಾಡಲಾಗಿದೆ” ಎಂದರು

“ಆನೇಕಲ್, ದೇವನಹಳ್ಳಿ ಸೇರಿದಂತೆ ಕೆಲವು ತಾಲೂಕುಗಳಲ್ಲಿ ನಕಲಿ ದಾಖಲೆಗಳನ್ನೂ ಸ್ಕ್ಯಾನ್ ಮಾಡಿರುವ ದೂರು ಇದ್ದು 16 ಜನರ ಮೇಲೆ ಎಫ್ಐಆರ್ ಮಾಡಲಾಗಿದೆ. ಇಂತಹ ಕೆಲಸಕ್ಕೂ ನಿಯಂತ್ರಣ ಹೇರಲಾಗುತ್ತಿದೆ. ಆದರೆ, ಸ್ಕ್ಯಾನಿಂಗ್ ನಂತರ ಯಾವುದೇ ಫ್ರಾಡ್ಗೆ ಅವಕಾಶ ಇಲ್ಲ” ಎಂದು ಅವರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗಳಾದ ರಾಜೇಂದ್ರ ಕುಮಾರ್ ಕಠಾರಿಯಾ, ಬೆಂಗಳೂರು ಜಿಲ್ಲಾಧಿಕಾರಿ ಜಗದೀಶ್ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment