ಜನವರಿ ೫ರಿಂದ ರಾಜ್ಯಾದ್ಯಂತ ಬಸ್ ಪ್ರಯಾಣ ದರ ಏರಿಕೆ ಜಾರಿ ಮಾಡಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಶೇ.15ರಷ್ಟು ಬಸ್ ಪ್ರಯಾಣ ದರ ಏರಿಕೆಗೆ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ ಎಂದರು.
ಪೆಟ್ರೋಲ್, ಡೀಸೆಲ್ ದರ ಏರಿಕೆಯಾಗಿದ್ದರೂ ಕೆಲವು ವರ್ಷಗಳಿಂದ ಟಿಕೆಟ್ ದರ ಏರಿಕೆ ಮಾಡಿರಲಿಲ್ಲ. ಆಡಳಿತ ವೆಚ್ಚ ಕೂಡ ಶೇ.18ರಷ್ಟು ಹೆಚ್ಚಾಗಿದೆ ಎಂದು ಅವರು ಸಮರ್ಥಿಸಿಕೊಂಡರು.
ಶಕ್ತಿ ಯೋಜನೆಯಿಂದ ಸಾರಿಗೆ ಸಂಸ್ಥೆಗೆ ಒಳ್ಳೆಯದೇ ಆಗಿದೆ. ಮಹಿಳೆಯರಿಗೆ ಉಚಿತ ಪ್ರಯಾಣ ನೀಡಿದ ಟಿಕೆಟ್ ಮೊತ್ತವನ್ನು ಸರ್ಕಾರ ಭರಿಸುತ್ತಿದೆ. ಆದರೆ ಇದರ ನಡುವೆಯೂ ಸಾರಿಗೆ ನಿಗಮಗಳು ನಷ್ಟದಲ್ಲಿವೆ ಎಂದು ಅವರು ಹೇಳಿದರು.