Friday, 20 November 2026 — Kannadavahini
BREAKING NEWS
ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ!
ರಾಜ್ಯ

ಅಬಕಾರಿ ಇಲಾಖೆಯಲ್ಲಿ ವರ್ಗಾವಣೆಗೆ ಹೊಸ ನಿಯಮ: ಸಚಿವ ಆರ್ ಬಿ ತಿಮ್ಮಾಪೂರ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 23 ವೀಕ್ಷಣೆಗಳು
rb timmapura
rb timmapura

ಅಬಕಾರಿ ಇಲಾಖೆಯಲ್ಲಿ ಸುಧಾರಣೆ ಹಾಗೂ ಪಾರದರ್ಶಕತೆ ತರುವ ಹಿನ್ನೆಲೆಯಲ್ಲಿ ಹಲವು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಇಲಾಖೆಯಲ್ಲಿನ ವರ್ಗಾವಣೆಗೆ ಹೊಸ ನಿಯಮಗಳನ್ನು ರೂಪಿಸಲಾಗಿದೆ ಎಂದು ಅಬಕಾರಿ ಸಚಿವ ಆರ್ ಬಿ ತಿಮ್ಮಾಪೂರ ತಿಳಿಸಿದ್ದಾರೆ.

ಅಬಕಾರಿ ಇಲಾಖೆಯ ವರ್ಗಾವಣೆ ನಿಯಮಗಳನ್ನು ಮಾರ್ಪಾಡು ಮಾಡುವ ಮೂಲಕ ಪಾರದರ್ಶಕ ಮತ್ತು ನಿಯಮಾಧಾರಿತ ವರ್ಗಾವಣೆ ಪದ್ದತಿಯನ್ನು ಜಾರಿಗೊಳಿಸುವುದರಿಂದ ಇತರೆ ಪ್ರಭಾವಗಳಿಗೆ ಒಳಗಾಗುವುದನ್ನು ತಡೆಗಟ್ಟಲು ಸಾಧ್ಯವಾಗಲಿದೆ ಎಂದು ಸಚಿವ ತಿಮ್ಮಾಪೂರ ತಿಳಿಸಿದ್ದಾರೆ.

transfer
transfer

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನೆದ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕ ನಾಗರೀಕ ಸೇವೆಗಳು (ಅಬಕಾರಿ ಇಲಾಖೆಯ ವರ್ಗಾವಣೆ) ನಿಯಮಗಳು, 2025 ಅನುಮೋದನೆ ನೀಡಲಾಗಿದ್ದು, ಅನುಬಂಧದಲ್ಲಿ ನೀಡಲಾದ ಕರಡನ್ನು ಹೊರಡಿಸಿ, ಸಂಬಂಧಪಟ್ಟವರಿಂದ ಆಕ್ಷೇಪಣೆ ಅಥವಾ ಸಲಹೆಗಳನ್ನು ಆಹ್ವಾನಿಸುವುದು. ಹಾಗೂ ಸ್ವೀಕೃತವಾಗಬಹುದಾದ ಆಕ್ಷೇಪಣೆ ಅಥವಾ ಸಲಹೆಗಳನ್ನು ಪರಿಗಣಿಸಿದ ನಂತರ ಕರ್ನಾಟಕ ನಾಗರೀಕ ಸೇವೆಗಳು (ಅಬಕಾರಿ ಇಲಾಖೆಯ ವರ್ಗಾವಣೆ) ನಿಯಮಗಳು, 2025 ನ್ನು ಅಂತಿಮಗೊಳಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಸಚಿವ ತಿಮ್ಮಾಪೂರ ಅವರು ತಿಳಿಸಿದ್ದಾರೆ.

ಅಬಕಾರಿ ಇಲಾಖೆಯಲ್ಲಿನ ಹುದ್ದೆಗಳನ್ನು ಕಾರ್ಯ ನಿರ್ವಾಹಕ ಮತ್ತು ಕಾರ್ಯನಿರ್ವಾಹಕೇತರ ಎಂದು ವಿಂಗಡಿಸಿ, ಅಬಕಾರಿ ನಿರೀಕ್ಷಕರು, ಅಬಕಾರಿ ಉಪ ನಿರೀಕ್ಷಕರು, ಅಬಕಾರಿ ಮುಖ್ಯ ಪೇದೆ ಮತ್ತು ಅಬಕಾರಿ ಪೇದೆಗಳ ವರ್ಗಾವಣೆಯನ್ನು ಕೌನ್ಸಿಲಿಂಗ್ ಮುಖಾಂತರ ಮಾಡಲು ನಿರ್ಧರಿಸಲಾಗಿದೆ. ಜೊತೆಗೆ ಒಬ್ಬ ಅಧಿಕಾರಿ/ಸಿಬ್ಬಂದಿಯನ್ನು ಸತತವಾಗಿ ಎರಡಕ್ಕಿಂತ ಹೆಚ್ಚು ಅವಧಿಗೆ ಕಾರ್ಯನಿರ್ವಾಹಕ ಹುದ್ದೆಗೆ ವರ್ಗಾಯಿಸುವಂತಿಲ್ಲ ಹಾಗೂ ಅಬಕಾರಿ ಅಧಿಕಾರಿಗಳ ಕಡ್ಡಾಯ ವರ್ಗಾವಣೆಗೆ ಹೊಸ ನಿಯಮದಲ್ಲಿ ಪ್ರಸ್ತಾಪಿಸಲಾಗಿದೆ ಎಂದು ಸಚಿವ ತಿಮ್ಮಾಪೂರ ತಿಳಿಸಿದ್ದಾರೆ.

ಕಳೆದ 5 ವರ್ಷಗಳಲ್ಲಿ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿನ ಕಾರ್ಯನಿರ್ವಾಹಕ ಹುದ್ದೆಯಲ್ಲಿ ಕಾರ್ಯ ನಿರ್ವಹಿಸಿದ ಅಬಕಾರಿ ಜಂಟಿ ಆಯುಕ್ತರು, ಉಪ ಆಯುಕ್ತರು, ಅಧೀಕ್ಷಕರು, ನಿರೀಕ್ಷಕರು ಮತ್ತು ಉಪ ನಿರೀಕ್ಷಕರುಗಳನ್ನು ಸದರಿ ಜಿಲ್ಲೆಗಳನ್ನು ಹೊರತುಪಡಿಸಿ ಇತರೆ ಜಿಲ್ಲೆಗಳಿಗೆ ವರ್ಗಾಯಿಸಲು ಹೊಸ ನಿಯಮದಲ್ಲಿ ಉಲ್ಲೇಖಿಸಲಾಗಿದೆ.

ಅಬಕಾರಿ ಇಲಾಖೆಯು ಸಮವಸ್ತ್ರಾಧಾರಿತ ಮತ್ತು ನಿಯಂತ್ರಕ ಇಲಾಖೆ ಆಗಿರುವುದರಿಂದ ಹೊಸ ವರ್ಗಾವಣೆ ನಿಯಮ ಇಲಾಖೆಯಲ್ಲಿ ಜಾರಿ ಮತ್ತು ತನಿಖೆ ಕಾರ್ಯವನ್ನು ಪರಿಣಾಮಕಾರಿ ಕೈಗೊಳ್ಳಲು ಅನುಕೂಲವಾಗಲಿದೆ. ಜೊತೆಗೆ ಇಲಾಖೆಯಲ್ಲಿ ಪಾರದರ್ಶಕತೆ ವ್ಯವಸ್ಥೆ ಜಾರಿಯಾಗುವುದಿದ ಭ್ರಷ್ಟಾಚಾರಕ್ಕೆ ಆಸ್ಪದ ಸಿಗುವುದಿಲ್ಲ ಮತ್ತು ಸರ್ಕಾರಕ್ಕೆ ಆದಾಯ ಕೂಡ ಹೆಚ್ಚಾಗಲಿದೆ ಎಂದು ಅಬಕಾರಿ ಸಚಿವ ಆರ್ ಬಿ ತಿಮ್ಮಾಪೂರ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8429 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment