ದೇಶದ ಭಯೋತ್ಪಾದಕರನ್ನು ದಮನ ಮಾಡಲು ಆಪರೇಷನ್ ಸಿಂಧೂರ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ನಡೆಸಿದ ಭಾರತೀಯ ಯೋಧರ ಶ್ರೇಯಸ್ಸಿಗಾಗಿ ಮಸೀದಿಗಳಲ್ಲಿ ಪ್ರಾರ್ಥಿಸುವಂತೆ ಅಲ್ಪಸಂಖ್ಯಾತ ಇಲಾಖೆ ಸಚಿವ ಜಮೀರ್ ಅಹ್ಮದ್ ಸೂಚನೆ ನೀಡಿದ್ದಾರೆ.
ಗುರುವಾರ ಸುತ್ತೋಲೆ ಹೊರಡಿಸಿರುವ ಅವರು, ಆಪರೇಷನ್ ಸಿಂಧೂರ ಕಾರ್ಯಾಚರಣೆ ಮಾಡಿದ ನಮ್ಮ ದೇಶದ ಹೆಮ್ಮೆಯ ಯೋಧರ ಶ್ರೇಯಸ್ಸಿಗಾಗಿ ವಕ್ಫ್ ಗೆ ಸೇರಿ ಮಸೀದಿ ಹಾಗೂ ಇತರೆ ಮಸೀದಿಗಳಲ್ಲೂ ಪ್ರಾರ್ಥನೆ ಮಾಡುವಂತೆ ಸೂಚನೆ ನೀಡಿದ್ದಾರೆ.

ಇತ್ತೀಚೆಗೆ ಪಾಕಿಸ್ತಾನಕ್ಕೆ ಬಾಂಬ್ ಕಟ್ಟಿಕೊಂಡು ಹೋಗಿ ದಾಳಿ ಮಾಡುತ್ತೇನೆ ಎಂದು ಹೇಳಿಕೆ ನೀಡಿದ್ದ ಜಮೀರ್ ಅಹ್ಮದ್ ತಮ್ಮ ನಿಲುವು ಸಮರ್ಥಿಸಿಕೊಂಡಿದ್ದು, ನಮ್ಮ ದೇಶದ ವಿರುದ್ಧ ಯಾರೇ ಬಂದರೂ ಅವರ ವಿರುದ್ಧ ಹೋರಾಟ ನಡೆಸಲು ಸಿದ್ಧ ಎಂದು ಹೇಳಿದ್ದರು.


