Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ರಾಜ್ಯ

120ಕ್ಕೂ ಹೆಚ್ಚು ನಕಲಿ ವೈದ್ಯರು ಪತ್ತೆ, ಕ್ಲಿನಿಕ್ ಗೆ ತಲಾ 50,000 ರೂ. ದಂಡ ವಸೂಲು!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 20 ವೀಕ್ಷಣೆಗಳು
fake clinic in raichur

ರಾಯಚೂರು ನಗರ ಸೇರಿ ಜಿಲ್ಲೆಯಾದ್ಯಂತ ನಡೆಸಲಾಗುತ್ತಿದ್ದ 120ಕ್ಕೂ ಹೆಚ್ಚು ನಕಲಿ ವೈದ್ಯರ ಕ್ಲಿನಿಕ್ ಗಳನ್ನು ಪತ್ತೆ ಹಚ್ಚಿ ಅವುಗಳನ್ನು ಬಂದ್ ಮಾಡಲಾಗಿದೆ.

ಕೆಪಿಎಂಇ ರಿಜಿಸ್ಟ್ರೇಷನ್ ಇಲ್ಲದೆ ಅಲೋಪತಿ ಚಿಕಿತ್ಸೆ ನೀಡುತ್ತಿರುವ ಆಯುಷ್ ವೈದ್ಯರು ಸೇರಿದಂತೆ ನಕಲಿ ವೈದ್ಯರು ನಡೆಸುತ್ತಿದ್ದ ಕ್ಲಿನಿಕ್ ಗಳ ವಿರುದ್ಧ ಕಾರ್ಯಾಚರಣೆ ನಡೆಸಲಾಗಿದ್ದು, ಅಂತಹ 120ಕ್ಕೂ ಹೆಚ್ಚು ಕ್ಲಿನಿಕ್ ಗಳನ್ನು ಮುಚ್ಚಲಾಗಿದೆ. ಅಲ್ಲದೇ ನಿಯಮ ಉಲ್ಲಂಘಿಸಿದ್ದ 17 ಜನರಿಗೆ 25 ರಿಂದ 50 ಸಾವಿರ ರೂ. ದಂಡ ವಿಧಿಸಲಾಗಿದೆ. ನಕಲಿ ವೈದ್ಯರಿಗೆ ಕಾನೂನು ಕ್ರಮ ಜರುಗಿಸುವುದಾಗಿ ಆರೋಗ್ಯ ಇಲಾಖೆ ಡಿಎಚ್​​ಒ ಡಾ.ಸುರೇಂದ್ರಬಾಬು ಹೇಳಿದ್ದಾರೆ.

ಕೆಡಿಪಿ ಸಭೆಯಲ್ಲಿ ನಕಲಿ ವೈದ್ಯರ ವಿರುದ್ಧ ಆಕ್ರೋಶ

ಇತ್ತೀಚೆಗೆ ನಡೆದ ಕೆಡಿಪಿ ಸಭೆಯಲ್ಲಿ ಆರ್​​ಎಂಪಿ ವೈದ್ಯರ ವಿರುದ್ಧ ಎಂಎಲ್​ಸಿ ಶರಣಗೌಡ ಬಯ್ಯಾಪುರ ಆಕ್ರೋಶ ವ್ಯಕ್ತಪಡಿಸಿ ಜಿಲ್ಲೆಯಲ್ಲಿ ವ್ಯಾಪಕವಾಗಿರುವ ನಕಲಿ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹಿಸಿದ್ದರು.

ಚಿಕಿತ್ಸೆ ಆರಂಭದಲ್ಲೇ ಆರ್​ಎಂಪಿ ನಕಲಿ ವೈದ್ಯರು ಹೈಡೋಸ್ ಚಿಕಿತ್ಸೆ ಕೊಡುತ್ತಾರೆ. ಹೀಗಾಗಿ ನಕಲಿ ವೈದ್ಯರ ಬಳಿ ಬರುವವರು ಅತೀ ಕಡಿಮೆ ಅವಧಿಯಲ್ಲೇ ಗುಣ ಮುಖರಾಗುತ್ತಾರೆ. ಆದರೆ ಅವರ ದೀರ್ಘಕಾಲದ ಸ್ಥಿತಿಗತಿಯನ್ನ ಆರ್​​ಎಂಪಿ ವೈದ್ಯರು ತಲೆಕಡೆಸಿಕೊಳ್ಳಲ್ಲ. ಅಸಲಿ ವೈದ್ಯರು ಹಂತಹಂತವಾಗಿ ಚಿಕಿತ್ಸೆ ನೀಡುತ್ತಾರೆ. ಹೀಗಾಗಿ ಜನರು ಹೈಡೋಸ್ ಕೊಡುವ ನಕಲಿ ವೈದ್ಯರ ಬಳಿಯೇ ಹೋಗುತ್ತಾರೆ ಅಂತ ಎಂಎಲ್​​ಸಿ ಶರಣೇಗೌಡ ಬಯ್ಯಾಪುರ ಕಿಡಿಕಾರಿದ್ದರು.

ಜಿಲ್ಲೆಯಾದ್ಯಂತ ಈ ವಿಷಯ ಭಾರೀ ಸದ್ದು ಮಾಡಿತ್ತು. ಬಳಿಕ ಜಿಲ್ಲೆಯಲ್ಲಿ ಕಾರ್ಯಚರಿಸುತ್ತಿರುವ  ನಕಲಿ ವೈದ್ಯರ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ನಿತೀಶ್.ಕೆ ಆದೇಶದನ್ವಯ ಆರೋಗ್ಯ ಇಲಾಖೆ ಜಿಲ್ಲೆಯಲ್ಲಿ ನಕಲಿ ವೈದ್ಯರ ವಿರುದ್ಧ ಕಾರ್ಯಾಚರಣೆ ನಡೆಸಿತ್ತು.

ಅಸಲಿ ವೈದ್ಯರು ಹಂತ ಹಂತವಾಗಿ ಚಿಕಿತ್ಸೆ ನೀಡುತ್ತಾರೆ. ಹೀಗಾಗಿ ಜನರು ಹೈಡೋಸ್ ಕೊಡುವ ನಕಲಿ ವೈದ್ಯರ ಬಳಿಯೇ ಹೋಗುತ್ತಾರೆ ಎಂದು ಎಂಎಲ್​​ಸಿ ಶರಣೇಗೌಡ ಬಯ್ಯಾಪುರ ಆತಂಕ ವ್ಯಕ್ತಪಡಿಸಿದ್ದರು. ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ನಕಲಿ ವೈದ್ಯರ ವೀಡಿಯೊಗಳು ಕೂಡ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು. ಇದೇ ಕಾರಣಕ್ಕೆ ಜಿಲ್ಲಾಧಿಕಾರಿ ನಿತೀಶ್.ಕೆ ಅವರ ಆದೇಶದನ್ವಯ ಆರೋಗ್ಯ ಇಲಾಖೆ ಜಿಲ್ಲೆಯಲ್ಲಿ ನಕಲಿ ವೈದ್ಯರ ವಿರುದ್ಧ ಬಿಗ್ ಆಪರೇಶನ್ ಮಾಡಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment