ಬೆಂಗಳೂರು:ಇತ್ತೀಚಿಗೆ ಆರು ಮಂದಿ ಭೂಗತ ನಕ್ಸಲರು ನಕ್ಸಲ್ ಶರಣಾಗತಿ ಮತ್ತು ಪುನರ್ವಸತಿ ಯೋಜನೆ ಸಮಿತಿಯ ಮುಂದೆ ಶರಣಾಗತಿ ರಾಜ್ಯವು ನಕ್ಸಲ್ ಮುಕ್ತವಾಗಿದ್ದು, ನಕ್ಸಲ್ ನಿಗ್ರಹ ಪಡೆಯನ್ನು ವಿಸರ್ಜಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಪ್ರಸಕ್ತ ಸಾಲಿನ ಬಜೆಟ್ ಮಂಡಿಸಿದ ಅವರು, ಶರಣಾಗಿರುವ ನಕ್ಸಲರನ್ನು ಸಮಾಜದ ಮುಖ್ಯ ವಾಹಿನಿಗೆ ಸೇರ್ಪಡೆಗೊಳಿಸಲು ಹಾಗೂ ನಕ್ಸಲ್ ಪೀಡಿತ ಪ್ರದೇಶಗಳಲ್ಲಿ ಮೂಲಸೌಕರ್ಯ ಒದಗಿಸಲು 10 ಕೋಟಿ ರೂ. ವಿಶೇಷ ಪ್ಯಾಕೇಜ್ ರೂಪಿಸಲಾಗುವುದು ಎಂದು ತಿಳಿಸಿದರು.
ಹೆಚ್ಚುತ್ತಿರುವ ಸೈಬರ್ ಅಪರಾಧ ಮತ್ತು ಮಾದಕ ದ್ರವ್ಯ ಬಳಕೆ ಮತ್ತು ವ್ಯಾಪಾರದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಬದ್ಧವಾಗಿದ್ದು, ಈ ನಿಟ್ಟಿನಲ್ಲಿ ಮಾದಕ ದ್ರವ್ಯ ಮತ್ತು ಸೈಬರ್ ಅಪರಾಧ ವಿಭಾಗವನ್ನು ಬಲಗೊಳಿಸಲು 5 ಕೋಟಿ ರೂ. ಒದಗಿಸಲಾಗುವುದು ಎಂದರು.
80 ಕೋಟಿ ಅನುದಾನ
ನಂದಿ ಬೆಟ್ಟದ ಬಳಿ ಕೂಡುಗುರ್ಕಿ ಮತ್ತು ಕೆಜಿಎಫ್ ಬಳಿ ಎರಡು ಭಾರತೀಯ ಮೀಸಲು ಪೊಲೀಸ್ ಪಡೆಗಳನ್ನು ಸ್ಥಾಪಿಸಲು 80 ಕೋಟಿ ರೂ. ಅನುದಾನವನ್ನು ಒದಗಿಸಲಾಗುವುದು.
ಟ ಪೊಲೀಸ್ ಗೃಹ-2025 ಯೋಜನೆಯಡಿ ಇದುವರೆಗೆ 2,016 ವಸತಿ ಗೃಹಗಳ ನಿರ್ಮಾಣ ಕಾರ್ಯ ಪೂರ್ಣವಾಗಿದ್ದು, 2,068 ವಸತಿ ಗೃಹಗಳ ನಿರ್ಮಾಣ ಕಾರ್ಯ ಪ್ರಗತಿಯಲ್ಲಿರುತ್ತದೆ. 2025-26ನೇ ಸಾಲಿನಲ್ಲಿ 300 ಕೋಟಿ ರೂ. ಮೊತ್ತದ ವಸತಿ ಗೃಹಗಳ ನಿರ್ಮಾಣ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ಹೇಳಿದರು.