Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ರಾಜ್ಯ

ಹೊಸ ವರ್ಷ ಗ್ರಾಹಕರಿಗೆ ಕರೆಂಟ್ ಶಾಕ್: ಯೂನಿಟ್ ಗೆ 10 ಪೈಸೆ ವಿದ್ಯುತ್ ದರ ಏರಿಕೆಗೆ ಸಿದ್ಧತೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 18 ವೀಕ್ಷಣೆಗಳು
Electricity Bill

ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ (KERC) ರಾಜ್ಯದಲ್ಲಿ ವಿದ್ಯುತ್ ದರ ಹೆಚ್ಚಿಸಲಿದೆ. ಈ ಮೂಲಕ ಹೊಸ ವರ್ಷಕ್ಕೆ ಗ್ರಾಹಕರಿಗೆ ಬಿಗ್ ಶಾಕ್ ನೀಡಲು ಮುಂದಾಗಿದೆ.

ಮುಂದಿನ ಹಣಕಾಸು ವರ್ಷದಲ್ಲಿ ರಾಜ್ಯದ ವಿದ್ಯುತ್ ಗ್ರಾಹಕರು ಬಳಸುವ ವಿದ್ಯುತ್‌ ನ ಪ್ರತಿ ಯೂನಿಟ್ ಗೆ 10 ಪೈಸೆ ಹೆಚ್ಚಳವಾಗುವ ಸಾಧ್ಯತೆ ಇದೆ. ಗ್ರಾಹಕರು ಹೆಚ್ಚಿನ ಶುಲ್ಕ ಪಾವತಿಸಬೇಕಾಗುದೆ. ಆದರೆ ಇದನ್ನು ವಿದ್ಯುತ್ ದರ ಏರಿಕೆ ಅಥವಾ ಪರಿಷ್ಕರಣೆ ಎಂದು ಕರೆಯದೆ “ಟಾಪ್-ಅಪ್” ಅಥವಾ “ಟ್ರೂ-ಅಪ್” ಎನ್ನಬಹುದು ಎಂದು ಆಯೋಗ ಹೇಳಿದೆ.

ಪ್ರತೀ ವರ್ಷ ಏರಿಕೆಗೆ ನಿಯಮದಲ್ಲಿ ತಿದ್ದುಪಡಿ

ಮಾರ್ಚ್ 2025 ರಲ್ಲಿ KERC ವಿದ್ಯುತ್ ದರ ಪರಿಷ್ಕರಣೆಯನ್ನು ಘೋಷಿಸಿದಾಗ, ಮೂರು ವರ್ಷಗಳ ಕಾಲ ಸುಂಕಗಳನ್ನು ಸ್ಥಗಿತಗೊಳಿಸಲು ತೀರ್ಮಾನಿಸಿತ್ತು. ಆದರೆ ಮಾರುಕಟ್ಟೆಯ ಏರಿಳಿತಗಳು ಮತ್ತು ವಿದ್ಯುತ್ ಸರಬರಾಜು ಕಂಪನಿಗಳಲ್ಲಿರುವ (ಎಸ್ಕಾಮ್‌ಗಳು) ಬಾಕಿಗಳನ್ನು ಆಧರಿಸಿ ವಾರ್ಷಿಕವಾಗಿ ಸಣ್ಣ ಪ್ರಮಾಣದ ಏರಿಕೆ ಮಾಡಲು ನಿಯಮದಲ್ಲಿ ತಿದ್ದುಪಡಿ ಮಾಡಲಾಗುತ್ತಿದೆ. ಇದನ್ನೇ ಟಾಪ್-ಅಪ್ ಎಂದು ಕರೆಯಲಾಗುತ್ತದೆ ಎಂದು ಕೆಇಆರ್‌ಸಿ ಅಧ್ಯಕ್ಷ ಪಿ. ರವಿ ಕುಮಾರ್ ತಿಳಿಸಿದ್ದಾರೆ.

ಹೊಸ ಮಾದರಿಯಲ್ಲಿ ಮೂರು ವರ್ಷಕ್ಕೊಮ್ಮೆ ಮಾತ್ರ ದರ ಪರಿಷ್ಕರಣೆ ನಡೆಯಲಿದೆ. ಟಾಪ್-ಅಪ್ ಎಲ್ಲಾ ಎಸ್ಕಾಂಗಳಿಗೆ ಸಮಾನವಾಗಿ ಅನ್ವಯವಾಗಲಿದ್ದು, ಪ್ರತಿ ಯೂನಿಟ್‌ಗೆ ಗರಿಷ್ಠ 8–10 ಪೈಸೆ ಮಾತ್ರ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಕೃಷಿ ಸಬ್ಸಿಡಿಯಲ್ಲಿ ಕಡಿತಕ್ಕೆ ಸಲಹೆ

ಆರ್ಥಿಕ ಹೊರೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ, ರಾಜ್ಯದಲ್ಲಿ ಕೃಷಿ ವಿದ್ಯುತ್ ಸಬ್ಸಿಡಿ ಕಡಿತ ಮಾಡಲು ಸರ್ಕಾರಕ್ಕೆ ಸಲಹೆ ನೀಡಲಾಗಿದೆ.  ಎಸ್ಕಾಂಗಳು ತಮ್ಮ ಲೆಕ್ಕಾಚಾರವನ್ನು ಪರಿಷ್ಕರಿಸಿ, ಪ್ರತಿ ಯೂನಿಟ್‌ಗೆ 8.3 ರೂ.ಇದ್ದ ಕೃಷಿ ಸಬ್ಸಿಡಿಯನ್ನು 7.7 ಕ್ಕೆ ಇಳಿಸಿ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗಕ್ಕೆ (ಕೆಇಆರ್‌ಸಿ) ಪ್ರಸ್ತಾವನೆ ಸಲ್ಲಿಸಿವೆ.

2025–26 ಹಣಕಾಸು ವರ್ಷದಲ್ಲಿ ಕಲ್ಲಿದ್ದಲು ಬೆಲೆ ಸ್ಥಿರವಾಗಿದ್ದು, ಉಷ್ಣ ವಿದ್ಯುತ್ ಸ್ಥಾವರಗಳಿಗೆ ನಿರಂತರ ಕಲ್ಲಿದ್ದಲು ಪೂರೈಕೆ ಲಭ್ಯವಿದ್ದ ಕಾರಣ ಆಮದು ಕಲ್ಲಿದ್ದಲಿನ ಅವಶ್ಯಕತೆ ಕಡಿಮೆಯಾಗಿದೆ. ಜೊತೆಗೆ ನವೀಕರಿಸಬಹುದಾದ ಇಂಧನಕ್ಕೆ ಹೆಚ್ಚಿನ ಒತ್ತು ನೀಡಲಾಗಿದ್ದು, ಉತ್ಪಾದನೆ ಮತ್ತು ಸರಬರಾಜು ವೆಚ್ಚಗಳು ವಿಭಿನ್ನವಾಗಿವೆ.

ವಿದ್ಯುತ್ ಉತ್ಪಾದನಾ ವೆಚ್ಚದಲ್ಲಿ ಇಳಿಕೆ ಕಂಡುಬರುತ್ತದೆ. ಆದರೆ ಗೃಹ ಜ್ಯೋತಿ ಯೋಜನೆಯಡಿ 200 ಯೂನಿಟ್‌ವರೆಗೆ ಉಚಿತ ವಿದ್ಯುತ್ ನೀಡಬೇಕಿರುವುದರಿಂದ ದರದಲ್ಲಿ ಕಡಿತ ಸಾಧ್ಯವಿಲ್ಲ. ಬದಲಾಗಿ ಈ ವರ್ಷವೂ ವಿದ್ಯುತ್ ದರದಲ್ಲಿ ಏರಿಕೆ ಮಾಡಬೇಕಿದೆ ಎಂದು ಅವರು ಹೇಳಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment