ಸಾಂಸ್ಕೃತಿಕ ನಗರಿ ಮೈಸೂರು ಅರಮನೆ ಮುಂಭಾಗ ಬೆಲೂನ್ ತುಂಬುವ ವೇಳೆ ನೈಟ್ರೋಜನ್ ಸ್ಫೋಟಗೊಂಡು ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ಗುರುವಾರ ಸಂಜೆ ಸಂಭವಿಸಿದೆ.
ಅರಮನೆಯ ಜಯ ಮಾರ್ತಾಂಡ ಗೇಟ್ ಬಳಿ ಘಟನೆ ಸಂಭವಿಸಿದ್ದು, ಬಲೂನ್ಗೆ ಗ್ಯಾಸ್ ತುಂಬುವ ವೇಳೆ ಬ್ಲಾಸ್ಟ್ ಆಗಿದ್ದರಿಂದ ದೇಹ ಛಿದ್ರ ಛಿದ್ರಗೊಂಡು ವ್ಯಕ್ತಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಮೂವರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಗಾಯಗೊಂಡವರ ಸ್ಥಿತಿ ಮೂವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತಪಟ್ಟ ವ್ಯಕ್ತಿಯ ವಿವರ ಸಂಗ್ರಹಿಸಲಾಗುತ್ತಿದೆ. ಘಟನೆಗೆ ಸಂಬಂಧಿಸಿದಂತೆ ಅರಮನೆ ಆವರಣದಲ್ಲಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.


