Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ರಾಜ್ಯ

ಒಂದು ದಿನ ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ ಚರ್ಚೆಗೆ ಮೀಸಲು: ಸಭಾಪತಿ ಬಸವರಾಜ ಹೊರಟ್ಟಿ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 27 ವೀಕ್ಷಣೆಗಳು
basavaraj horatti

ಬೆಳಗಾವಿ ಸುವರ್ಣ ವಿಧಾನಸೌಧ: 157ನೇ ಅಧಿವೇಶನದಲ್ಲಿ ಬುಧವಾರದಂದು ಪ್ರಶ್ನೋತ್ತರ ಮುಗಿದ ನಂತರ ಇಡೀ ದಿನದ ಕಲಾಪವನ್ನು ಕಿತ್ತೂರು ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕ ಭಾಗದ ಜ್ವಲಂತ ಸಮಸ್ಯೆಗಳ ಚರ್ಚೆಗೆ ಮೀಸಲಿಡಲಾಗುವುದು ಎಂದು ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಹೇಳಿದರು.

ಸುವರ್ಣಸೌಧದ ಎರಡನೇ ಮಹಡಿಯ ಕೊಠಡಿ ಸಂಖ್ಯೆ 238ರಲ್ಲಿ ಡಿಸೆಂಬರ್ 8ರಂದು  ಪತ್ರಿಕಾಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು.

ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕ ಭಾಗದ ಜ್ವಲಂತ ಸಮಸ್ಯೆಗಳ ಬಗ್ಗೆ 145ನೇ ಅಧಿವೇಶನದಲ್ಲಿ 6 ಗಂಟೆ 35 ನಿಮಿಷ ಚರ್ಚೆಯಾಗಿದ್ದು, 19 ಜನ ಪರಿಷತ್ ಶಾಸಕರು ಮಾತನಾಡಿದ್ದಾರೆ. 151ನೇ ಅಧಿವೇಶನದಲ್ಲಿ 1 ಗಂಟೆ 40 ನಿಮಿಷ ಚರ್ಚೆಯಾಗಿದ್ದು 6 ಜನ ಪರಿಷತ್ ಶಾಸಕರು ಮಾತನಾಡಿದ್ದಾರೆ. 154ನೇ ಅಧಿವೇಶನದಲ್ಲಿ 5 ಗಂಟೆ 12 ನಿಮಿಷ ಚರ್ಚೆಯಾಗಿದ್ದು, 11 ಜನ ಪರಿಷತ್ ಶಾಸಕರು ಮಾತನಾಡಿದ್ದಾರೆ. ಅದೇ ರೀತಿ ಈ ಬಾರಿಯ ಅಧಿವೇಶನದಲ್ಲಿ ಸಹ ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಭಾಗದ ಜ್ವಲಂತ ಸಮಸ್ಯೆಗಳ ಚರ್ಚೆಗೆ ವಿಶೇಷ ಅವಕಾಶ ಕಲ್ಪಿಸಲಾಗುವುದು ಎಂದರು.

ಕಲಾಪದಲ್ಲಿ ಕೃಷ್ಣಮೇಲ್ದಂಡೆ ಯೋಜನೆ, ಮಹದಾಯಿ, ಕಳಸಾ ಬಂಡೂರಿ ಯೋಜನೆಗಳ ಅನುಷ್ಠಾನದ ಬಗ್ಗೆ,  ಅರಣ್ಯಭೂಮಿ ಅತೀಕ್ರಮಣ, ಸಂತ್ರಸ್ತರ ಸಮಸ್ಯೆ ಹಾಗೂ ಪರಿಹಾರೋಪಾಯಗಳು., ಉತ್ತರ ಕರ್ನಾಟಕ ಭಾಗದ ರೈತರು ಎದುರಿಸುತ್ತಿರುವ  ಸಮಸ್ಯೆಗಳು ಹಾಗೂ ಪರಿಹಾರಗಳು ಮತ್ತು ಉದ್ಯೋಗ ಸೃಷ್ಠಿಗೆ ಕ್ರಿಯಾಯೋಜನೆ ವಿಷಯಗಳ ಮೇಲೆ ಚರ್ಚೆಗೆ ಅವಕಾಶ ನೀಡಲಾಗುವುದು.

157ನೇ ಪರಿಷತ್ ಅಧಿವೇಶನದಲ್ಲಿ 10 ದಿನಗಳನ್ನು ಉಪವೇಶನದ ದಿನಗಳೆಂದು ನಿಗದಿಪಡಿಸಲಾಗಿದೆ. ಪ್ರಸಕ್ತ ಅಧಿವೇಶನಕ್ಕೆ ಇದುವರೆಗೆ ಒಟ್ಟು 1649 ಪ್ರಶ್ನೆಗಳನ್ನು ಸ್ವೀಕರಿಸಿದ್ದು, ಅವುಗಳಲ್ಲಿ 965 ಚುಕ್ಕೆ ಗುರುತಿನ ಹಾಗೂ 684 ಚುಕ್ಕೆ ರಹಿತ ಪ್ರಶ್ನೆಗಳಾಗಿವೆ. ನಿಯಮ 72ರಡಿ 112 ಸೂಚನೆಗಳನ್ನು ಸ್ವೀಕರಿಸಲಾಗಿದೆ. ನಿಯಮ 330 ರಡಿ ಬಂದಂತಹ 84 ಸೂಚನೆಗಳನ್ನು ಸ್ವೀಕರಿಸಲಾಗಿದೆ. ಕಾರ್ಯಕಲಾಪಗಳ ಸಲಹಾ ಸಮಿತಿ ತೀರ್ಮಾನದಂತೆ ಇನ್ನೀತರೆ ವಿಷಯಗಳ ಮೇಲೆ ಚರ್ಚೆ ನಡೆಯಲಿದೆ ಎಂದು ಅವರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ವಿಧಾನ ಪರಿಷತ್ ಕಾರ್ಯದರ್ಶಿ ಕೆ ಆರ್  ಮಹಾಲಕ್ಷ್ಮಿ, ಅಪರ ಕಾರ್ಯದರ್ಶಿ ನಿರ್ಮಲಾ ಎಸ್  ಹಾಗೂ ಸಚಿವಾಲಯದ ಅಧಿಕಾರಿಗಳು ಇದ್ದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment