Wednesday, January 28, 2026
Google search engine
Homeರಾಜ್ಯಹೊತ್ತಿ ಉರಿದ ಖಾಸಗಿ ಬಸ್, ಪ್ರಯಾಣಿಕರು ಪವಾಡಸದೃಶ ಪಾರು

ಹೊತ್ತಿ ಉರಿದ ಖಾಸಗಿ ಬಸ್, ಪ್ರಯಾಣಿಕರು ಪವಾಡಸದೃಶ ಪಾರು

ಶಿವಮೊಗ್ಗ: ಖಾಸಗಿ ಬಸ್ಸಿನಲ್ಲಿ ಬೆಂಕಿ‌ ಕಾಣಿಸಿಕೊಂಡು ಸಂಪೂರ್ಣವಾಗಿ ಸುಟ್ಟು ಕರುಕಲಾಗಿದ್ದು, ಘಟನೆಯಲ್ಲಿ ಹಲವರಿಗೆ ಗಾಯಗಳಾಗಿರುವ ಘಟನೆ ಶಿವಮೊಗ್ಗದಲ್ಲಿ ಮಂಗಳವಾರ ತಡರಾತ್ರಿ ಸಂಭವಿಸಿದೆ.

ಶಿವಮೊಗ್ಗ ಜಿಲ್ಲೆಯ ಅರಸಾಳು ಸಮೀಪದ ಸೂಡುರು ಬಳಿಯ 9ನೇ ಮೈಲುಗಲ್ಲಿನಲ್ಲಿ ಮಂಗಳವಾರ ತಡರಾತ್ರಿ ಸಂಭವಿಸಿದ್ದು, ಶ್ರೀ ಅನ್ನಪೂರ್ಣೇಶ್ವರಿ ಟ್ರಾನ್ಸ್‌ಪೋರ್ಟ್‌ ಸಂಸ್ಥೆಗೆ ಸೇರಿದ ಬಸ್ ಇದಾಗಿದ್ದು,ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.

ಈ ಬಸ್ ರಿಪ್ಪನ್ ಪೇಟೆಯಿಂದ ಶಿವಮೊಗ್ಗ ಮೂಲಕ ಬೆಂಗಳೂರಿಗೆ ಪ್ರಯಾಣಿಕರನ್ನು ಹೊತ್ತು ತೆರಳುತಿತ್ತು.ಮಾರ್ಗ ಮದ್ಯೆ ಸೂಡುರು ಬಳಿಯ 9ನೇ ಮೈಲುಗಲ್ಲು ಬಳಿ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಚಾಲಕ ಸೇರಿ ಒಟ್ಟು 40 ಬಸ್ಸಿನಲ್ಲಿದ್ದರು ಎಂದು ತಳಿದುಬಂದಿದೆ.

ಬಸ್ಸಿನಲ್ಲಿದ್ದ ಸುಮಾರು ಏಳರಿಂದ ಎಂಟು ಜನ ಪ್ರಯಾಣಿಕರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ರಿಪ್ಪನ್ ಪೇಟೆ ಸಮೀಪವಿರುವ ಸರಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಸದ್ಯದ ಸ್ಥಿತಿಯಲ್ಲಿ ಯಾರ ಪ್ರಾಣಕ್ಕೂ ಅಪಾಯ ಸಂಭವಿಸಿಲ್ಲ.

ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಘಟನಾ ಸ್ಥಳಕ್ಕೆ ರಿಪ್ಪನ್ ಪೇಟೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments