Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ರಾಜ್ಯ

ಫೆ.28ರಿಂದ ಪಿಯು, ಮಾ.18ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ: ಏಪ್ರಿಲ್ ನಲ್ಲಿ ಫಲಿತಾಂಶ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 32 ವೀಕ್ಷಣೆಗಳು
madhu bangarappa

ಬೆಂಗಳೂರು: ಫೆಬ್ರವರಿ 28 ರಿಂದ ಮಾರ್ಚ್‌ 17ರ ವರೆಗೆ ದ್ವಿತೀಯ ಪಿಯುಸಿ ಹಾಗೂ ಮಾರ್ಚ್‌ 18 ರಿಂದ ಏಪ್ರಿಲ್‌ 2ರ ವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ನಡೆಯಲಿವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 2025-26ನೇ ಸಾಲಿನ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟಿಸಿದರು.

ಫೆ. 28 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ, ಮಾ. 18 ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ನಡೆಯಲಿದೆ. ದ್ವಿತೀಯ ಪಿಯುಸಿ ಪರೀಕ್ಷೆಗಳು ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆವರೆಗೆ ನಡೆದರೆ, ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬೆಳಗ್ಗೆ 10 ರಿಂದ ಮಧ್ಯಾಹ್ನ 1.15ರ ವರೆಗೆ ನಡೆಯಲಿದೆ ಎಂದು ಅವರು ತಿಳಿಸಿದರು.

ಏಪ್ರಿಲ್ 7ರಂದು ಪಿಯುಸಿ ಹಾಗೂ ಏಪ್ರಿಲ್ 24ರಂದು ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸುವ ಸಾಧ್ಯತೆ ಇದೆ ಎಂದು ಅವರು ಹೇಳಿದರು.

ದ್ವಿತೀಯ ಪಿಯುಸಿ ಪರೀಕ್ಷೆಗೆ ಒಟ್ಟು ವಿದ್ಯಾರ್ಥಿಗಳ 7,10,363 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ಅದರಲ್ಲಿ 6,46,801 ವಿದ್ಯಾರ್ಥಿಗಳು ಹೊಸಬರು ಮತ್ತು 50,540 ಪುನರಾವರ್ತಿತ ವಿದ್ಯಾರ್ಥಿಗಳಿದ್ದರೆ, 13,022 ಖಾಸಗಿ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ.

ಎಸ್‌ಎಲ್‌ಎಲ್‌ಸಿ ಪರೀಕ್ಷೆಗೆ ಒಟ್ಟು ವಿದ್ಯಾರ್ಥಿಗಳ 9,02,889 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ಅದರಲ್ಲಿ 8,12,855 ವಿದ್ಯಾರ್ಥಿಗಳು ಹೊಸಬರು ಮತ್ತು 62,845 ಪುನರಾವರ್ತಿತ ವಿದ್ಯಾರ್ಥಿಗಳಿದ್ದರೆ, 27,189 ಖಾಸಗಿ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ದ್ವಿತೀಯ ಪಿಯುಸಿ ಪರೀಕ್ಷೆ-1 ವೇಳಾಪಟ್ಟಿ:

ಫೆಬ್ರವರಿ 28: ಕನ್ನಡ, ಅರೇಬಿಕ್

ಮಾರ್ಚ್ 2: ಭೂಗೋಳಶಾಸ್ತ್ರ, ಸಂಖ್ಯಾಶಾಸ್ತ್ರ, ಮನಃಶಾಸ್ತ್ರ

ಮಾರ್ಚ್ 3: ಇಂಗ್ಲಿಷ್

ಮಾರ್ಚ್ 4: ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್

ಮಾರ್ಚ್ 5: ಇತಿಹಾಸ

ಮಾರ್ಚ್ 6: ಭೌತಶಾಸ್ತ್ರ

ಮಾರ್ಚ್ 7: ಐಚ್ಛಿಕ ಕನ್ನಡ, ವ್ಯವಹಾರ ಅಧ್ಯಯನ, ಭೂಗರ್ಭಶಾಸ್ತ್ರ

ಮಾರ್ಚ್ 9: ರಸಾಯನಶಾಸ್ತ್ರ, ಶಿಕ್ಷಣಶಾಸ್ತ್ರ, ಮೂಲ ಗಣಿತ

ಮಾರ್ಚ್ 10: ಅರ್ಥಶಾಸ್ತ್ರ

ಮಾರ್ಚ್ 11: ತರ್ಕಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗೃಹ ವಿಜ್ಞಾನ

ಮಾರ್ಚ್ 12: ಹಿಂದಿ

ಮಾರ್ಚ್ 13: ರಾಜ್ಯಶಾಸ್ತ್ರ

ಮಾರ್ಚ್ 14: ಲೆಕ್ಕಶಾಸ್ತ್ರ, ಗಣಿತ

ಮಾರ್ಚ್ 16: ಸಮಾಜಶಾಸ್ತ್ರ, ಜೀವಶಾಸ್ತ್ರ, ಗಣಕ ವಿಜ್ಞಾನ

ಮಾರ್ಚ್ 17: ಹಿಂದುಸ್ತಾನಿ ಸಂಗೀತ, ರೀಟೇಲ್ ಆಟೋಮೊಬೈಲ್, ಆರೋಗ್ಯ ರಕ್ಷಣೆ

 

ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ವೇಳಾಪಟ್ಟಿ

ಮಾರ್ಚ್ 18: ಪ್ರಥಮ ಭಾಷೆ

ಮಾರ್ಚ್ 23: ವಿಜ್ಞಾನ

ಮಾರ್ಚ್ 25: ದ್ವಿತೀಯ ಭಾಷೆ

ಮಾರ್ಚ್ 28: ಗಣಿತ

ಮಾರ್ಚ್ 30: ತೃತೀಯ ಭಾಷೆ

ಏಪ್ರಿಲ್ 2: ಸಮಾಜ ವಿಜ್ಞಾನ

ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ವೇಳಾಪಟ್ಟಿ

ಮೇ 18: ಪ್ರಥಮ ಭಾಷೆ

ಮೇ 19: ವಿಜ್ಞಾನ

ಮೇ 20: ದ್ವಿತೀಯ ಭಾಷೆ

ಮೇ 21: ಗಣಿತ

ಮೇ 22: ತೃತೀಯ ಭಾಷೆ

ಮೇ 23: ಸಮಾಜ ವಿಜ್ಞಾನ

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment