Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ರಾಜ್ಯ

ಬಲವಂತದ ಸಾಲ ವಸೂಲಿಗೆ ತಕ್ಷಣ ಬ್ರೇಕ್ ಹಾಕಿ: ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 31 ವೀಕ್ಷಣೆಗಳು
karnataka cm siddaramiah
karnataka cm siddaramiah

ಸಾಲ ವಸೂಲಾತಿ ಸಂದರ್ಭದಲ್ಲಿ ಸಾಲ ಪಡೆದವರಿಗೆ ಯಾವುದೇ ಕಿರುಕುಳ ಉಂಟಾಗಬಾರದು ಎಂಬ ಉದ್ದೇಶದಿಂದ ಸುಗ್ರಿವಾಜ್ಞೆ ಜಾರಿಗೊಳಿಸಲಾಗಿದೆ. ಕಾಯ್ದೆಯ ಎಲ್ಲಾ ಅಂಶಗಳನ್ನು ಜಿಲ್ಲೆಗಳಲ್ಲಿ ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.

ಬೆಂಗಳೂರಿನಲ್ಲಿ ಶನಿವಾರ ಮೈಕ್ರೋ ಫೈನಾನ್ಸ್‌ ಸುಗ್ರಿವಾಜ್ಞೆ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳೊಂದಿಗೆ ನಡೆಸಿದ ವಿಡಿಯೋ ಸಂವಾದದಲ್ಲಿ ಅವರು ಅಧಿಕಾರಿಗಳಿಗೆ ಹಲವು ಸಲಹೆ ನೀಡಿದರು.

ಸಾಲ ವಸೂಲಾತಿ ಸಂದರ್ಭದಲ್ಲಿ ಸಾಲ ಪಡೆದವರಿಗೆ ಯಾವುದೇ ಕಿರುಕುಳ ಉಂಟಾಗಬಾರದು ಎಂಬ ಉದ್ದೇಶದಿಂದ ಈ ಕಾಯ್ದೆಯನ್ನು ಜಾರಿಗೊಳಿಸಲಾಗಿದೆ. ಕಾಯ್ದೆಯ ಎಲ್ಲಾ ಅಂಶಗಳನ್ನು ಜಿಲ್ಲೆಗಳಲ್ಲಿ ಕಟ್ಟುನಿಟ್ಟಿನಿಂದ ಜಾರಿಗೊಳಿಸಬೇಕು ಎಂದು ಅವರು ಹೇಳಿದರು.

ಪರವಾನಿಗೆ ಪಡೆಯದ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳ ಮೇಲೆ ನಿರಂತರ ನಿಗಾ ಇರಿಸಬೇಕು. ಪರವಾನಿಗೆ ಪಡೆದಿರುವ ಮೈಕ್ರೋ ಫೈನಾನ್ಸ್‌ ಸಂಸ್ಥೆಗಳು ಆರ್‌ಬಿಐ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸುವುದನ್ನು ಖಾತ್ರಿಪಡಿಸಬೇಕು. ಬಲವಂತದ ವಸೂಲಾತಿ ಮಾಡುವವರ ವಿರುದ್ದ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಬೇಕು ಎಂದು ಅವರು ಸೂಚಿಸಿದ್ದಾರೆ.

ಎಲ್ಲಾ ಜಿಲ್ಲೆಗಳಲ್ಲಿ ಈಗಾಗಲೇ ಸಹಾಯವಾಣಿ ಪ್ರಾರಂಭಿಸಲು ಸೂಚಿಸಲಾಗಿದ್ದು, ಬಲವಂತದ ಸಾಲ ವಸೂಲಾತಿ ಮಾಡುವ ಪ್ರಕರಣಗಳಲ್ಲಿ ಸ್ವಯಂಪ್ರೇರಿತವಾಗಿ ಮೊಕದ್ದಮೆ ದಾಖಲಿಸಬೇಕು. ಸಾಲ ನೀಡುವವರಿಗೆ ತೊಂದರೆ ಉಂಟು ಮಾಡುವ ಯಾವುದೇ ಉದ್ದೇಶದಿಂದ ಈ ಕಾಯ್ದೆಯನ್ನು ಜಾರಿಗೊಳಿಸಿಲ್ಲ. ಆದರೆ ಬಲವಂತದ ವಸೂಲಾತಿ, ಮಾನಹಾನಿ, ಕಿರುಕುಳದ ಮೂಲಕ ಸಾಲ ವಸೂಲಾತಿಯನ್ನು ತಡೆಯುವ ಉದ್ದೇಶದಿಂದ ಜಾರಿಗೆ ತರಲಾಗಿದೆ ಎಂದರು.

ಯಾವುದೇ ಜಿಲ್ಲೆಗಳಲ್ಲಿ ಸಾಲಗಾರರ ಕಿರುಕುಳ ಮುಂದುವರೆದಿರುವುದು ಗಮನಕ್ಕೆ ಬಂದರೆ ಆಯಾ ಜಿಲ್ಲೆಯ ಜಿಲ್ಲಾಧಿಕಾರಿ ಹಾಗೂ ಪೊಲೀಸ್‌ ವರಿಷ್ಠಾಧಿಕಾರಿ ಅವರನ್ನು ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಸಿದರು.

ಕಾಯ್ದೆ ಜಾರಿಗೊಳಿಸಿದ ಬಳಿಕ ಹಲವು ಜಿಲ್ಲೆಗಳಲ್ಲಿ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯವಾಗಿ ಇಳಿಮುಖವಾಗಿದ್ದು, ಕಟ್ಟುನಿಟ್ಟಿನಿಂದ ಕಾಯ್ದೆಯ ಅಂಶಗಳನ್ನು ಜಾರಿಗೊಳಿಸುವ ಮೂಲಕ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಮುಖ್ಯಮಂತ್ರಿ ಅವರು ಸೂಚನೆ ನೀಡಿದರು.

ಕಾನೂನು ಸಚಿವ ಹೆಚ್.ಕೆ.ಪಾಟೀಲ್‌, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಗಳಾದ ನಸೀರ್‌ ಅಹ್ಮದ್‌, ಗೋವಿಂದರಾಜು, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌, ಮುಖ್ಯಮಂತ್ರಿ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್‌, ಕಾನೂನು ಸಲಹೆಗಾರ ಎ.ಎಸ್.‌ ಪೊನ್ನಣ್ಣ, ಅಡ್ವಕೇಟ್‌ ಜನರಲ್‌ ಶಶಿಕಿರಣ ಶೆಟ್ಟಿ, ಹ ಪೊಲೀಸ್‌ ಮಹಾ ನಿರ್ದೇಶಕ ಅಲೋಕ್‌ ಮೋಹನ್‌, ಬೆಂಗಳೂರು ನಗರ ಪೊಲೀಸ್‌ ಆಯುಕ್ತ ದಯಾನಂದ್‌ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment