Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ರಾಜ್ಯ

ಶಿವಮೊಗ್ಗದಲ್ಲಿ ವಿಜಯನಗರ ಕಾಲದ ಅಪೂರ್ವ ಗರುಡ ಶಿಲ್ಪದ ಮಾಸ್ತಿಕಲ್ಲು ಪತ್ತೆ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
1 ನಿಮಿಷ ಓದು 21 ವೀಕ್ಷಣೆಗಳು
shivamogga news

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಹರತಾಳು ಗ್ರಾಮದ ಶಶಿಧರ ಭಟ್ಟರ ತೋಟದಲ್ಲಿ ಅಪರೂಪದ ಗರುಡ ಶಿಲ್ಪ ಹೊಂದಿರುವ ಮಾಸ್ತಿಕಲ್ಲು ಪತ್ತೆಯಾಗಿದೆ. ವಿಜಯನಗರ ಕಾಲಘಟ್ಟಕ್ಕೆ ಸೇರಿದ ಈ ಶಾಸನವು ಇತಿಹಾಸ ಹಾಗೂ ಪುರಾತತ್ವದ ದೃಷ್ಟಿಯಿಂದ ಮಹತ್ವ ಪಡೆದಿದೆ.

ಈ ಮಾಸ್ತಿಕಲ್ಲು ಸುಮಾರು 32 ಇಂಚು ಉದ್ದ ಹಾಗೂ 15 1/2 ಇಂಚು ಅಗಲ ಹೊಂದಿದ್ದು, ಮೇಲ್ಭಾಗದಲ್ಲಿ ಪೂರ್ಣ ಕುಂಭ ಶಿಲ್ಪವಿದೆ. ಮೊದಲ ಪಟ್ಟಿಕೆಯಲ್ಲಿ ಗರುಡ ಶಿಲ್ಪ ಕೆತ್ತಲಾಗಿದ್ದು, ಎರಡನೇ ಪಟ್ಟಿಯಲ್ಲಿ ಒಬ್ಬ ಪುರುಷ ಮತ್ತು ಮೂವರು ಮಹಿಳೆಯರ ಚಿತ್ರಣ ಇದೆ.

ಒಂದು ಚಿತ್ರದಲ್ಲಿ ಎತ್ತಿದ ತೋಳು, ಕೈಪಟ್ಟಿ, ಎರಡು ಬಳೆ ಹಾಗೂ ಬೆರಳ ಮಧ್ಯೆ ನಿಂಬೆಹಣ್ಣು ಹಿಡಿದಿರುವ ಶಿಲ್ಪ ಕಾಣಸಿಗುತ್ತದೆ. ಇದಕ್ಕೆ ಕೆಳಭಾಗದಲ್ಲಿ 7 ಸಾಲಿನ ಶಾಸನವಿದ್ದು, ಅಂತಿಮ ಪಟ್ಟಿಕೆಯಲ್ಲಿ ಪಲ್ಲಕ್ಕಿಯೊಂದಿಗೆ ಸಾಗುತ್ತಿರುವ ಇಬ್ಬರು ಪುರುಷರ ಶಿಲ್ಪವಿದೆ.

ಶಾಸನದ ವಿವರದಂತೆ, ಬೊಮ್ಮದೇವಗೌಡ ಎಂಬವರು ಮರಣ ಹೊಂದಿದ ನಂತರ, ಅವರ ಪತ್ನಿಯರಾದ ಗುರಾಕಾಯಿ, ಬೊಮ್ಮಾಯಿ ಮತ್ತು ಲಿಂಗಾಯಿ ಸಹಗಮನ (ಸತಿ) ಮಾಡಿ ಮೃತರಾದ ಬಗ್ಗೆ ಉಲ್ಲೇಖಿಸಲಾಗಿದೆ. ಈ ಶಾಸನದ ಸಂಶೋಧನೆಯನ್ನು ಆದಿತ್ಯ ನಂಜವಳ್ಳಿ ಹಾಗೂ ಗಣೇಶ್ ಕೆ.ಎನ್. ನಡೆಸಿದ್ದಾರೆ.

ರಾಜ್ಯ ಪುರಾತತ್ವ ಇಲಾಖೆ ನಿರ್ದೇಶಕರಾದ ಡಾ. ಶೆಜೇಶ್ವರ ಅವರು, ಮಾಸ್ತಿಕಲ್ಲಿನಲ್ಲಿರುವ ಗರುಡ ಶಿಲ್ಪವು ವೈಷ್ಣವ ಧರ್ಮಕ್ಕೆ ಸೇರಿದ ವ್ಯಕ್ತಿಯ ಮರಣವನ್ನು ಸೂಚಿಸುತ್ತದೆ ಎಂದು ತಿಳಿಸಿದ್ದು, ಇದು ಅತ್ಯಂತ ಅಪರೂಪದ ಮಾಸ್ತಿಕಲ್ಲು ಎಂದು ಅಭಿಪ್ರಾಯಪಟ್ಟಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment