Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ರಾಜ್ಯ

125 ವರ್ಷದಲ್ಲೇ ದಾಖಲೆ ಮಳೆ: ನೆರವಿಗೆ 1000 ಕೋಟಿ ಲಭ್ಯ ಎಂದ ಸಿಎಂ!

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 23 ವೀಕ್ಷಣೆಗಳು
siddaramiah meeting

ರಾಜ್ಯದಲ್ಲಿ ಕಳೆದ 125 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಮೇ ತಿಂಗಳಲ್ಲಿ ಅತಿ ಹೆಚ್ಚಿನ ಮಳೆ ಆಗಿದ್ದು, ರಾಜ್ಯದ 28 ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಶುಕ್ರವಾರ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಮಳೆ ಹಾನಿಗೆ ಪರಿಹಾರ ಒದಗಿಸಲು ಯಾವುದೇ ಅನುದಾನದ ಕೊರತೆಯಿಲ್ಲ. ಜಿಲ್ಲೆಗಳಲ್ಲಿ SDRF ಅಡಿ ಒಟ್ಟಾರೆಯಾಗಿ 1000 ಕೋಟಿಗಿಂತಲೂ ಹೆಚ್ಚು ಹಣ ಲಭ್ಯವಿದೆ ಎಂದರು.

ಅತಿವೃಷ್ಟಿಯಿಂದ ಮನೆಗಳಿಗೆ ಹಾನಿ ಉಂಟಾದರೆ ಈಗಾಗಲೇ ಪರಿಹಾರ ಒದಗಿಸುವ ಕುರಿತು ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ತಕ್ಷಣ ಪರಿಹಾರ ಒದಗಿಸುವ ಕಾರ್ಯ ನಡೆಯಬೇಕಿದೆ ಎಂದು ಅವರು ಸಲಹೆ ನೀಡಿದರು.

ಭೂಕುಸಿತದಂತಹ ಪ್ರಕರಣಗಳಲ್ಲಿ ಸಾವಿನ ಸಂಭಾವ್ಯತೆಯನ್ನು ತಪ್ಪಿಸಲು, ಜನರ ತೆರವು ಕಾರ್ಯ ಸೇರಿದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಬೇಕು. ಮಳೆ ಹಾನಿ ಪ್ರದೇಶಗಳಿಗೆ ಡಿಸಿ, ಸಿಇಒ ತಕ್ಷಣ ಕಡ್ಡಾಯವಾಗಿ ಭೇಟಿ ನೀಡಿ ಅಗತ್ಯ ಪರಿಹಾರ ಒದಗಿಸಬೇಕು ಎಂದು ಅವರು ಸೂಚಿಸಿದರು.

ಸಂಪೂರ್ಣ ಮನೆ ಹಾನಿ ಪ್ರಕರಣಗಳಲ್ಲಿ ರೂ. 1.20 ಲಕ್ಷ ಮನೆ ಹಾನಿ ತಕ್ಷಣ ಪರಿಹಾರ ಒದಗಿಸಲಾಗುತ್ತಿದೆ. ಅಂತಹವರಿಗೆ ಹೊಸ ಮನೆ ಒದಗಿಸಲು ಕಳೆದ ವರ್ಷದಂತೆ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕು. ವಿವಿಧ ಯೋಜನೆಗಳಡಿ ಮನೆಗಳ ನಿರ್ಮಾಣಕ್ಕೆ ನೆರವು ಒದಗಿಸಬೇಕು ಎಂದು ಸಿದ್ದರಾಮಯ್ಯ ಹೇಳಿದರು.

ಅತಿವೃಷ್ಟಿ ಅನಾಹುತ ಎದುರಿಸಲು ಎಲ್ಲಾ ಗ್ರಾಮ ಪಂಚಾಯತ್ ಮಟ್ಟದಲ್ಲಿ ವಿವಿಧ ಇಲಾಖೆಗಳನ್ನು ಒಳಗೊಂಡ ಕಾರ್ಯಪಡೆ ರಚಿಸಲಾಗಿದ್ದು, ಅವರು ಸಮನ್ವಯದಿಂದ ಕಾರ್ಯನಿರ್ವಹಿಸಿದರೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಬಹುದಾಗಿದೆ ಎಂದರು.

ಬೆಂಗಳೂರು ನಗರದಲ್ಲಿ ಮಳೆ ಬಗ್ಗೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಯಾಕೆ ಸಾಧ್ಯವಿಲ್ಲ. ತಗ್ಗು ಪ್ರದೇಶ, ನೀರು ನಿಲ್ಲುವ ಪ್ರದೇಶದ ಮಾಹಿತಿ ಮೊದಲೇ ಇರುತ್ತದೆ. ಅಧಿಕಾರಿಗಳು ಇನ್ನೂ ಹೆಚ್ಚು ಕ್ರಿಯಾ ಶೀಲರಾಗಿ ಕಾರ್ಯನಿರ್ವಹಿಸಬೇಕು. ತಾತ್ಕಾಲಿಕ ಕ್ರಮಗಳೊಂದಿಗೆ ಶಾಶ್ವತ ಪರಿಹಾರಕ್ಕೂ ಕ್ರಮ ಕೈಗೊಳ್ಳಬೇಕು ಎಂದು ಅವರು ನುಡಿದರು.

ಗ್ರಾಮ ಮಟ್ಟದಲ್ಲಿ ಎಲ್ಲಾ ಸರ್ಕಾರಿ ಜಮೀನು ಗುರುತಿಸಿ, ಒತ್ತುವರಿಯನ್ನು ಗುರುತಿಸುವ ಕಾರ್ಯ ಶೇ.95ರಷ್ಟು ಪೂರ್ಣಗೊಂಡಿದೆ. 14,15,492 ಎಕರೆ ಸರ್ಕಾರಿ ಜಮೀನು ಒತ್ತುವರಿಯನ್ನು ಈಗಾಗಲೇ ಗುರುತಿಸಲಾಗಿದೆ. ಬಗರ್ಹುಕುಂ ಒಟ್ಟು 14,28,838 ಅರ್ಜಿಗಳನ್ನು ಸ್ವೀಕರಿಸಲಾಗಿದ್ದು, ವಿಲೇವಾರಿ ಬಹಳ ವಿಳಂಬವಾಗುತ್ತಿದ್ದು, ಅರ್ಹ ಅರ್ಜಿಗಳನ್ನು ತಕ್ಷಣ ವಿಲೇವಾರಿ ಮಾಡಬೇಕು ಎಂದು ಸಿದ್ದರಾಮಯ್ಯ ಸೂಚಿಸಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment