Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ರಾಜ್ಯ

ಪೌರ ಕಾರ್ಮಿಕರಿಗೆ ಸುರಕ್ಷಿತ ತ್ಯಾಜ್ಯ ವಿಲೇವಾರಿ ತರಬೇತಿ: ಈಶ್ವರ ಖಂಡ್ರೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 20 ವೀಕ್ಷಣೆಗಳು
eshwar khandre
eshwar khandre

ಬೆಂಗಳೂರು: ಘನ ತ್ಯಾಜ್ಯ ನಿರ್ವಹಣೆ ಮಾಡುವ ಪೌರ ಕಾರ್ಮಿಕರಿಗೆ ಸುರಕ್ಷಿತವಾಗಿ ಹೇಗೆ ಕಾರ್ಯ ನಿರ್ವಹಿಸಬೇಕು ಎಂಬ ಬಗ್ಗೆ ವೈಜ್ಞಾನಿಕ ತರಬೇತಿ ನೀಡುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ.

ಜಕ್ಕೂರು ಬಳಿ ಇರುವ ಮಹಾತ್ಮಾ ಗಾಂಧೀ ಗ್ರಾಮೀಣ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆಗೆ ಭೇಟಿ ನೀಡಿ ವಿವಿಧ ಕಾರ್ಯಕ್ರಮಗಳನ್ನು ಪರಾಮರ್ಶೆ ನಡೆಸಿದ ಅವರು, ಘನತ್ಯಾಜ್ಯ ನಿರ್ವಹಣೆಯಲ್ಲಿನ ಉತ್ತಮ ರೂಢಿಗಳನ್ನು ರಾಜ್ಯದ ಎಲ್ಲ ಗ್ರಾಮ ಪಂಚಾಯ್ತಿಗಳೊಂದಿಗೆ ಹಂಚಿಕೊಳ್ಳುವಂತೆ ಮತ್ತು ಪೌರಕಾರ್ಮಿಕರಿಗೆ ಸುರಕ್ಷಿತವಾಗಿ ಹೇಗೆ ತ್ಯಾಜ್ಯ ವಿಲೇವಾರಿ ಮಾಡಬೇಕು ಎಂಬ ಬಗ್ಗೆ ತರಬೇತಿ ನೀಡುವಂತೆ ತಿಳಿಸಿದರು.

ಜೈವಿಕ ಇಂಧನ ಮುಂದಿನ ಪೀಳಿಗೆ ಇಂಧನ- ಈಶ್ವರ ಖಂಡ್ರೆ:

ಜೈವಿಕ ಇಂಧನ ಭವಿಷ್ಯದ ಇಂಧನವಾಗಿದ್ದು, ಈ ಬಗ್ಗೆ ಮುಂದಿನ ಪೀಳಿಗೆಗೆ ಹೆಚ್ಚಿನ ಅರಿವು ಮೂಡಿಸುವ ಅಗತ್ಯವಿದೆ. ಈ ಸಂಸ್ಥೆಯಲ್ಲಿ ನಡೆಯುವ ತರಬೇತಿ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮೀಣ ಪ್ರದೇಶದ ಶಾಲಾ ಮತ್ತು ಕಾಲೇಜು ಮಕ್ಕಳನ್ನು ತೊಡಗಿಸಿಕೊಳ್ಳುವಂತೆ ತಿಳಿಸಿದರು.

ವಾರ್ಷಿಕವಾಗಿ 150 ಐಐಟಿ ಮತ್ತು ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಸಂಸ್ಥೆಯಲ್ಲಿ ಒಂದು ತಿಂಗಳ ತರಬೇತಿ ನೀಡಲಾಗುತ್ತಿದೆ ಎಂಬ ಮಾಹಿತಿ ಪಡೆದ ಅವರು, ವಿದ್ಯಾರ್ಥಿಗಳ ಸಂಖ್ಯೆಯನ್ನು ವಾರ್ಷಿಕ 300ಕ್ಕೆ ಹೆಚ್ಚಿಸಲು ಮತ್ತು ಕನ್ನಡ ಮಾಧ್ಯಮದಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶ ನೀಡಲು ಮತ್ತು ಅವರಿಗೆ ಇಂಗ್ಲಿಷ್ ಮಾತನಾಡುವ (ಸ್ಪೋಕನ್ ಇಂಗ್ಲಿಷ್) ತರಬೇತಿಯನ್ನೂ ನೀಡಲು ಸೂಚಿಸಿದರು.

ಕರ್ನಾಟಕ ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಸ್.ಈ. ಸುಧೀಂದ್ರ, ಪಂಚಾಯತ್ ರಾಜ್ ಇಲಾಖೆ ಕಾರ್ಯದರ್ಶಿ ರಂದೀಪ್, ಮಹಾತ್ಮಾ ಗಾಂಧೀ ಗ್ರಾಮೀಣ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆ ಕಾರ್ಯನಿರ್ವಾಹಕ ನಿರ್ದೇಶಕಿ ಡಾ. ಗಾಯತ್ರಿ ರೆಡ್ಡಿ ಮತ್ತಿತರರು ಪಾಲ್ಗೊಂಡಿದ್ದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment