Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ರಾಜ್ಯ

ಮೈಸೂರಿನಲ್ಲಿ ಎಸ್ ಎಲ್ ಭೈರಪ್ಪ ಸ್ಮಾರಕ ನಿರ್ಮಾಣ: ಸಿಎಂ ಸಿದ್ದರಾಮಯ್ಯ ಘೋಷಣೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 19 ವೀಕ್ಷಣೆಗಳು
sl bgyrappa smaraka: siddaramiah

ಮೈಸೂರಿನಲ್ಲಿ ಕನ್ನಡದ ಹಿರಿಯ ಸಾಹಿತಿ ಎಸ್.ಎಲ್.ಬೈರಪ್ಪ ಅವರ ಸ್ಮಾರಕ  ನಿರ್ಮಾಣಕ್ಕೆ ಸರ್ಕಾರ ಕ್ರಮ ಕೈಗೊಳ್ಳಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಗುರುವಾರ ಪದ್ಮಭೂಷಣ ಹಿರಿಯ ಸಾಹಿತಿ ದಿವಂಗತ ಎಸ್.ಎಲ್.ಬೈರಪ್ಪ ಅವರ ಪಾರ್ಥಿವ ಶರೀರದ  ಅಂತಿಮ ನಮನ ಸಲ್ಲಿಸಿ ಮಾಧ್ಯಮದದ ಜೊತೆ ಮಾತನಾಡಿದ ಅವರು, ಬಿಜೆಪಿಯವರು ಹೇಳಿದರೆಂದು ಸ್ಮಾರಕ ನಿರ್ಮಿಸುವುದಿಲ್ಲ. ಮೈಸೂರಿನಲ್ಲಿಯೇ ತಮ್ಮ ಜೀವಿತಾವಧಿಯನ್ನು ಕಳೆದಿದ್ದು, ವಿದ್ಯಾಭ್ಯಾಸ, ಸಾಹಿತ್ಯಕೃಷಿಯಲ್ಲಿ ನಡೆಸಿದ್ದರು ಹಾಗಾಗಿ ಮೈಸೂರಿನಲ್ಲಿಯೇ ಸ್ಮಾರಕ ನಿರ್ಮಾಣಕ್ಕೆ ಸರ್ಕಾರ ಕ್ರಮ ತೆಗೆದುಕೊಳ್ಳಲಿದೆ ಎಂದರು.

ಭೈರಪ್ಪ ಕಾದಂಬರಿಗಳು ಜಗತ್ಪ್ರಸಿದ್ಧ

ಎಸ್.ಎಲ್ ಬೈರಪ್ಪನವರು ಅವರ ನಿಧನದಿಂದ ಸಾರಸ್ವತ ಲೋಕ ಬಹಳ ಬಡವಾಗಿದೆ. ಅವರು ಸುಮಾರು 25 ಕಾದಂಬರಿಗಳನ್ನು ಬರೆದಿದ್ದು, ಮೈಸೂರಿನಲ್ಲಿಯೇ ವಿದ್ಯಾಭ್ಯಾಸ ನಡೆಸಿದ ಬೈರಪ್ಪನವರಿಗೆ ಮೈಸೂರು ಕರ್ಮಸ್ಥಳ. ಅವರ ಕಾದಂಬರಿಗಳು 40 ಭಾಷೆಗಳಿಗೆ ತರ್ಜುಮೆಯಾಗಿದ್ದು, ಇಷ್ಟು ಸಂಖ್ಯೆಯಲ್ಲಿ ಸಾಹಿತಿಯೊಬ್ಬರ ಕೃತಿಗಳು ತರ್ಜುಮೆಯಾಗಿರುವುದು ಅಪರೂಪ. ವಿವಿಧ ಭಾಷೆಗಳ ಓದುಗರನ್ನು ಸಂಪಾದಿಸಿದ್ದರು. ಸಣ್ಣ ಗ್ರಾಮವೊಂದರಲ್ಲಿ ಜನಿಸಿದ ಬೈರಪ್ಪನವರು ಫಿಲಾಸಫಿಯನ್ನು ಓದಿದ್ದರೂ, ಸಾಹಿತ್ಯ ಕ್ಷೇತ್ರದಲ್ಲಿ ಆಸಕ್ತಿ ಬೆಳೆಸಿಕೊಂಡವರು ಎಂದರು.

ಬೋಧನಾ ವೃತ್ತಿಯಲ್ಲಿದ್ದುಕೊಂಡು ಸಾಹಿತ್ಯ ಕ್ಷೇತ್ರದಲ್ಲಿ ತಮ್ಮನ್ನೂ ತೊಡಗಿಸಿಕೊಂಡಿದ್ದರು. ಕಾದಂಬರಿಗಳನ್ನು ಆತ್ಮತೃಪ್ತಿಗಾಗಿ ಬರೆಯುತ್ತಿದ್ದ ಅವರ ಕೃತಿಗಳು ಜಗತ್ಪ್ರಸಿದ್ಧವಾಗಿದ್ದವು. ನಾನು ಅವರ ಕೆಲವೊಂದು ಕಾದಂಬರಿಗಳನ್ನು ಓದಿದ್ದೇನೆ. ಬದುಕಿನ ಅನುಭವಗಳನ್ನಾಧರಿಸಿ ಬರೆಯುವ ಸಾಹಿತಿ. ಅವರ  ಆತ್ಮಕ್ಕೆ ಶಾಂತಿ ಕೋರುತ್ತಾ, ಅವರ ಕುಟುಂಬದವರು, ಸಾಹಿತ್ಯಭಿಮಾನಿಗಳಿಗೆ ಅವರ ಅಗಲಿಕೆಯ ನೋವನ್ನು ಭರಿಸಲು ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದರು.

ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

ಬೈರಪ್ಪನವರೊಂದಿಗೆ ಮುಖ್ಯಮಂತ್ರಿಗಳ ಒಡನಾಟದ ಬಗ್ಗೆ ಪ್ರತಿಕ್ರಿಯೆ ನೀಡಿ,  ಸಾಹಿತ್ಯ ಹಾಗೂ ಸ್ನೇಹ ಬೇರೆಯಾಗಿದ್ದು, ನಮ್ಮ ದೃಷ್ಟಿಕೋನಗಳು ಬೇರೆಯಾಗಿದ್ದರೂ, ಉತ್ತಮ ಬಾಂಧವ್ಯವಿತ್ತು ಎಂದರು. ಬೈರಪ್ಪನವರ ಅಂತ್ಯಕ್ರಿಯೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಭಾಗವಹಿಸಲಿದ್ದಾರೆ. ವಿವಿಧ ಪ್ರಶಸ್ತಿಗಳಿಗೆ ಭಾಜನರಾಗಿರುವ ಬೈರಪ್ಪನವರು ನಾಡು ಕಂಡ ಶ್ರೇಷ್ಠ ಸಾಹಿತಿಗಳಾಗಿದ್ದರು. ಯಾವುದೇ ಪ್ರಶಸ್ತಿಗೂ ಹಂಬಲಿಸದ ಬೈರಪ್ಪನವರಿಗೆ ಅವರ ಸಾಹಿತ್ಯದ ಕೊಡುಗೆಯನ್ನು ಪರಿಗಣಿಸಿ ಜ್ಞಾನಪೀಠ ಪ್ರಶಸ್ತಿಯನ್ನು ನೀಡಿದ್ದರೆ ಉತ್ತಮವಾಗಿತ್ತು ಎಂದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment