Home ರಾಜ್ಯ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಕಾರ್ಖಾನೆ ಲಾಭಾಂಶ 108 ಕೋಟಿ ರೂ. ಸರ್ಕಾರಕ್ಕೆ ಹಸ್ತಾಂತರ

ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಕಾರ್ಖಾನೆ ಲಾಭಾಂಶ 108 ಕೋಟಿ ರೂ. ಸರ್ಕಾರಕ್ಕೆ ಹಸ್ತಾಂತರ

ಮುಖ್ಯಮಂತ್ರಿಯವರ ಪರಿಹಾರ ನಿಧಿಗೆ ಇದೇ ಸಂದರ್ಭದಲ್ಲಿ ಐದು ಕೋಟಿ ರೂಪಾಯಿಗಳ ಚೆಕ್ ನೀಡಲಾಯಿತು. ಕಾರ್ಖಾನೆ ಇತಿಹಾಸದಲ್ಲಿ ಇಷ್ಟು ಮೊತ್ತದ ಲಾಭಾಂಶದ ಚೆಕ್ ನೀಡಿರುವುದು ಇದೇ ಮೊದಲು.

by Editor
0 comments
ksdl

ಬೆಂಗಳೂರು: ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ (ಕೆಎಸ್ಡಿಎಲ್) ಕಾರ್ಖಾನೆಯು 2023-24ನೇ ಸಾಲಿನಲ್ಲಿ ಮಾಡಿರುವ 362.07 ಕೋಟಿ ರೂಪಾಯಿ ಲಾಭದ ಪೈಕಿ 108.62 ಕೋಟಿ ರೂಪಾಯಿಗಳ ಲಾಂಭಾಂಶದ ಚೆಕ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಮತ್ತು ಕಾರ್ಖಾನೆ ಅಧ್ಯಕ್ಷ ಸಿ.ಎಸ್.ನಾಡಗೌಡ ಅವರು ಮಂಗಳವಾರ ಇಲ್ಲಿ ಹಸ್ತಾಂತರಿಸಿದರು.

ವಿಧಾನಸಭೆ ಸಭಾಂಗಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಈ ಚೆಕ್ ನೀಡಲಾಯಿತು. ಇದಲ್ಲದೆ, ಮುಖ್ಯಮಂತ್ರಿಯವರ ಪರಿಹಾರ ನಿಧಿಗೆ ಇದೇ ಸಂದರ್ಭದಲ್ಲಿ ಐದು ಕೋಟಿ ರೂಪಾಯಿಗಳ ಚೆಕ್ ನೀಡಲಾಯಿತು. ಕಾರ್ಖಾನೆ ಇತಿಹಾಸದಲ್ಲಿ ಇಷ್ಟು ಮೊತ್ತದ ಲಾಭಾಂಶದ ಚೆಕ್ ನೀಡಿರುವುದು ಇದೇ ಮೊದಲು.

ನಂತರ ಮಾತನಾಡಿದ ಮುಖ್ಯಮಂತ್ರಿಯವರು, ‘ಸಾರ್ವಜನಿಕ ಉದ್ದಿಮೆಗಳು ಲಾಭದಾಯಕ ವಹಿವಾಟು ನಡೆಸುವುದು ಒಳ್ಳೆಯ ಬೆಳವಣಿಗೆಯಾಗಿದೆ. ಐದು ವರ್ಷಗಳ ಹಿಂದೆ 15.91 ಕೋಟಿ ರೂಪಾಯಿ ಲಾಭಾಂಶ ಕೊಟ್ಟಿದ್ದ ಈ ಉದ್ದಿಮೆಯು ಈ ವರ್ಷ 108 ಕೋಟಿ ರೂ.ಗಳಿಗೂ ಹೆಚ್ಚಿನ ಡಿವಿಡೆಂಡ್ ಕೊಟ್ಟಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಸಚಿವ ಎಂ ಬಿ ಪಾಟೀಲ ಮಾತನಾಡಿ, ‘ಈಗಿನ ಸರಕಾರ ಅಸ್ತಿತ್ವಕ್ಕೆ ಬಂದ ಮೇಲೆ ಕೆಎಸ್ಡಿಎಲ್ ಕಾರ್ಖಾನೆಯು ಉನ್ನತಿ ಕಾಣುತ್ತಿದೆ. ಈ ಲಾಭವನ್ನು ಇನ್ನೂ ಹೊಸ ಎತ್ತರಕ್ಕೆ ಕೊಂಡೊಯ್ಯಲು ಮತ್ತು ಜಾಗತಿಕ ಮಟ್ಟದಲ್ಲಿ ಮಾರುಕಟ್ಟೆ ಸೃಷ್ಟಿಸಲು ಅಗತ್ಯ ಉಪಕ್ರಮಗಳನ್ನು ಕೈಗೊಳ್ಳಲಾಗಿದೆ. ಅಲ್ಲದೆ, ಹೊಸಹೊಸ ಉತ್ಪನ್ನಗಳನ್ನು ಬಿಡುಗಡೆ ಮಾಡಲಾಗಿದೆ’ ಎಂದರು.

banner

ಸಾರ್ವಜನಿಕ ಉದ್ದಿಮೆಗಳು ತಮ್ಮ ಲಾಭಾಂಶದಲ್ಲಿ ಶೇ.30ರಷ್ಟನ್ನು ಸರಕಾರಕ್ಕೆ ಕೊಡಬೇಕಾದ್ದು ನಿಯಮವಾಗಿದೆ. ಇದಕ್ಕೆ ತಕ್ಕಂತೆ ಈ ಲಾಭಾಂಶವನ್ನು ಸರಕಾರಕ್ಕೆ ಹಸ್ತಾಂತರಿಸಲಾಗಿದೆ ಎಂದು ಅಧ್ಯಕ್ಷ ನಾಡಗೌಡ ವಿವರಿಸಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿಯವರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ವ್ಯವಸ್ಥಾಪಕ ನಿರ್ದೇಶಕ ಡಾ. ಪಿ.ಕೆ.ಎಂ.ಪ್ರಶಾಂತ್, ಕಾರ್ಖಾನೆ ಪ್ರಧಾನ ವ್ಯವಸ್ಥಾಪಕರಾದ ಕೆ.ಎಲ್.ರವೀಶ, ಗಂಗಪ್ಪ ಅವರು ಉಪಸ್ಥಿತರಿದ್ದರು.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಕಾರ್ಖಾನೆ ಲಾಭಾಂಶ 108 ಕೋಟಿ ರೂ. ಸರ್ಕಾರಕ್ಕೆ ಹಸ್ತಾಂತರ ಅತ್ಯುತ್ತಮ ಶಾಸಕ ಪ್ರಶಸ್ತಿಗೆ ಪಾತ್ರರಾದ ಟಿಬಿ ಜಯಚಂದ್ರ! ಒಂದು ದೇಶ, ಒಂದು ಚುನಾವಣೆ: 31 ಸದಸ್ಯರ ಸಂಸದೀಯ ಸಮಿತಿಗೆ 90 ದಿನದ ಗಡುವು! ಐಸಿಯುನಲ್ಲಿ ಬಿಜೆಪಿ ಹಿರಿಯ ನಾಯಕ ಎಲ್.ಕೆ. ಆಡ್ವಾಣಿಗೆ ಚಿಕಿತ್ಸೆ! ಜಾತಿ ಮೀಸಲಾತಿ ತೆಗೆದು ಆರ್ಥಿಕವಾಗಿ ಹಿಂದುಳಿದವರಿಗೆ ನೀಡಬೇಕು: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ವಿಜಯೇಂದ್ರ, ನಿರ್ಮಲಾ ಸೀತಾರಾಮ್ ಗೆ ಬಿಗ್ ರಿಲೀಫ್: ಚುನವಣಾ ಬಾಂಡ್ ಹೆಸರಲ್ಲಿ ಸುಲಿಗೆ ಪ್ರಕರಣ ಹೈಕೋರ್ಟ್ ರದ್ದು ಬೆಂಗಳೂರಿಗೆ ಫುಡ್ ಪ್ಯಾಕೆಟಲ್ಲಿ ಬರುತ್ತೆ ಡ್ರಗ್ಸ್: ಅಂಗಡಿಯಲ್ಲಿ 24 ಕೋಟಿ ಮೌಲ್ಯದ ಡ್ರಗ್ಸ್ ಪತ್ತೆ! ಕಬ್ಬು ಕಟಾವು ಕಾರ್ಮಿಕರಿಗೂ ಕಾರ್ಡ್ ವಿತರಣೆಗೆ ಚಿಂತನೆ: ಸಚಿವ ಸಂತೋಷ್ ಲಾಡ್ ರಾಹುಲ್, ಜಡೇಜಾ ಅರ್ಧಶತಕ: ಕೂದಲೆಳೆ ಅಂತರದಲ್ಲಿ ಫಾಲೋಆನ್ ತಪ್ಪಿಸಿಕೊಂಡ ಭಾರತ ಬೆಳಗಾವಿ ಸುವರ್ಣ ಸೌಧಕ್ಕೆ ಬರಲಿರುವ 100 ‘ಗೃಹಲಕ್ಷ್ಮೀ’ಯರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್