Home ರಾಜ್ಯ ಶೀಘ್ರದಲ್ಲೇ ಸಿಎಂ ಅಧ್ಯಕ್ಷತೆಯಲ್ಲಿ ಕೆರೆ ಸಂರಕ್ಷಣೆ, ಅಭಿವೃದ್ದಿ ಪ್ರಾಧಿಕಾರ ಸಭೆ: ಸಚಿವ ಎನ್‌ ಎಸ್‌ ಭೋಸರಾಜು

ಶೀಘ್ರದಲ್ಲೇ ಸಿಎಂ ಅಧ್ಯಕ್ಷತೆಯಲ್ಲಿ ಕೆರೆ ಸಂರಕ್ಷಣೆ, ಅಭಿವೃದ್ದಿ ಪ್ರಾಧಿಕಾರ ಸಭೆ: ಸಚಿವ ಎನ್‌ ಎಸ್‌ ಭೋಸರಾಜು

ಸುಮಾರು 40 ಸಾವಿರ ಜಲಮೂಲಗಳ ವ್ಯಾಪ್ತಿಯನ್ನು ಹೊಂದಿರುವ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ದಿ ಪ್ರಾಧಿಕಾರದ ಸಭೆಯನ್ನು ಶೀಘ್ರದಲ್ಲೇ ಸಿಎಂ ಅಧ್ಯಕ್ಷತೆಯಲ್ಲಿ ನಡೆಸಲಾಗುವುದು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌ ಎಸ್‌ ಭೋಸರಾಜು ತಿಳಿಸಿದ್ದಾರೆ.

by Editor
0 comments
n s bhosaraju

ಸುಮಾರು 40 ಸಾವಿರ ಜಲಮೂಲಗಳ ವ್ಯಾಪ್ತಿಯನ್ನು ಹೊಂದಿರುವ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ದಿ ಪ್ರಾಧಿಕಾರದ ಸಭೆಯನ್ನು ಶೀಘ್ರದಲ್ಲೇ ಸಿಎಂ ಅಧ್ಯಕ್ಷತೆಯಲ್ಲಿ ನಡೆಸಲಾಗುವುದು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌ ಎಸ್‌ ಭೋಸರಾಜು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸೋಮವಾರ ಮುಖ್ಯ ಕಾರ್ಯದರ್ಶಿಗಳು ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಂತರ ಸುದ್ದಿಗಾರರೊಂದಗಿಎ ಮಾತನಾಡಿದ ಅವರು, ಜಲಮೂಲಗಳ ಸಂರಕ್ಷಣೆ ಹಾಗೂ ಆದಾಯ ವೃದ್ದಿಗೆ ಇಲಾಖವಾರು ಸಮನ್ವಯಕ್ಕೆ ಸೂಚನೆ ನೀಡಲಾಗಿದೆ ಎಂದರು.

ಸಭೆಯಲ್ಲಿ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ದಿ ಪ್ರಾಧಿಕಾರದ ಸಭೆಯನ್ನು ನಡೆಸಲಾಯಿತು. ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಶ್ರೀಮತಿ ಶಾಲಿನಿ ರಜನೀಶ್‌ ಸೇರಿದಂತೆ ಪ್ರಮುಖ ಅಧಿಕಾರಿಗಳು ಉಪಸ್ಥಿತರಿದ್ದರು.

ಜಲಮೂಲಗಳ ಸಂರಕ್ಷಣೆಗೆ ಆದ್ಯತೆ ನೀಡಿ:

banner

ರಾಜ್ಯದಲ್ಲಿ ಸುಮಾರು 40 ಸಾವಿರ ಜಲಮೂಲಗಳಿವೆ. ಇವುಗಳ ಸಂರಕ್ಷಣೆ ಮತ್ತು ಸಮರ್ಪಕ ನಿರ್ವಹಣೆಯಿಂದ ಅಂತರ್ಜಲವೃದ್ದಿಯಾಗಲಿದೆ. ಈ ನಿಟ್ಟಿನಲ್ಲಿ ಇಲಾಖೆಗಳ ಮಧ್ಯೆ ಸಮನ್ವಯ ಬಹಳ ಮುಖ್ಯ. ಈ ಜಲಮೂಲಗಳ ನಿರ್ವಹಣೆಗೆ ಹಣಕಾಸಿನ ಅಗತ್ಯವಿದೆ. ಈ ನಿಟ್ಟಿನಲ್ಲಿ ಮೀನುಗಾರಿಕೆ, ಪ್ಲೋಟಿಂಗ್‌ ಸೋಲಾರ್‌, ಬೋಟಿಂಗ್‌ ನಂತಹ ಆದಾಯ ಮೂಲಗಳನ್ನು ಗುರುತಿಸಬೇಕು ಎಂದು ಸೂಚನೆ ನೀಡಿದರು.

ಸಿಎಂ ಅಧ್ಯಕ್ಷತೆಯಲ್ಲಿ ಸಭೆ:

ಮುಖ್ಯಮಂತ್ರಿ ಸಿದ್ದರಾಮಯ್ಯ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾಗಿದ್ದಾರೆ. ರಾಜ್ಯದ ಜಲಮೂಲಗಳ ಸಂರಕ್ಷಣೆ ಹಾಗೂ ಅಭಿವೃದ್ದಿಯನಿಟ್ಟಿನಲ್ಲಿ ಹಲವಾರು ವಿಷಯಗಳ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳುವ ನಿಟ್ಟಿನಲ್ಲಿ ಸಭೆಯನ್ನು ನಡೆಸಲು ತೀರ್ಮಾನಿಸಲಾಯಿತು. ಈ ಸಭೆಯಲ್ಲಿ ಮಂಡಿಸಬೇಕಾದ ವಿಷಯಗಳ ಬಗ್ಗೆ ಅಗತ್ಯ ವರದಿಯನ್ನು ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.

ಕಳೆದ ಆಯವ್ಯಯದಲ್ಲಿ ಘೋಷಿಸಿರುವಂತೆ ಕೆರೆ ಬಳಕೆದಾರರ ಸಂಘಗಳನ್ನು ಪುನರುಜ್ಜೀವನಗೊಳಿಸುವ ನಿಟ್ಟಿನಲ್ಲಿ ಕ್ರಮಗಳನ್ನು ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ಅಗತ್ಯ ಪ್ರಸ್ತಾವನೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು.

ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಶಾಲಿನಿ ರಜನೀಶ್‌, ಸಣ್ಣ ನೀರಾವರಿ ಇಲಾಖೆ ಕಾರ್ಯದರ್ಶಿರಾಘವನ್‌, ಆರ್ಥಿಕ ಇಲಾಖೆ ಅಧಿಕಾರಿಗಳು, ಕಾನೂನು ಇಲಾಖೆ ಅಧಿಕಾರಿಗಳು, ಸಹಕಾರ ಇಲಾಖೆ ಅಧಿಕಾರಿಗಳು, ನಗರ ಯೋಜನೆ ಹಾಗೂ ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಉಪಸ್ಥಿತರಿದ್ದರು.

You may also like

Leave a Comment

Soledad is the Best Newspaper and Magazine WordPress Theme with tons of options and demos ready to import. This theme is perfect for blogs and excellent for online stores, news, magazine or review sites.

Buy Soledad now!

Edtior's Picks

Latest Articles

Latest news
ಮೈಸೂರು ಚಾಮುಂಡೇಶ್ವರಿ ಉಡುಗೊರೆ ಕಾಳಸಂತೆಯಲ್ಲಿ ಮಾರಾಟ: ಸ್ನೇಹಮಯಿ ಕೃಷ್ಣ ಗಂಭೀರ ಆರೋಪ ಕೊಡಗು-ಹಾಸನ ಬಳಿ ಆನೆಗಳ ವಿಹಾರಧಾಮ ಸ್ಥಾಪನೆ: ಸಚಿವ ಈಶ್ವರ್ ಖಂಡ್ರೆ ಘೋಷಣೆ World news 1500 ಕ್ರಿಮಿನಲ್ ಗಳಿಗೆ ಕ್ಷಮಾದಾನ ಘೋಷಿಸಿದ ಜೋ ಬಿಡೈನ್! 22,000 ಕೋಟಿ ವೆಚ್ಚದಲ್ಲಿ Su-30 ಫೈಟರ್ ಜೆಟ್ಸ್, ಕೆ-9 ಹೌಥಿಜೆರ್ಸ್ ಖರೀದಿಗೆ ಕೇಂದ್ರ ಸಂಪುಟ ಅಸ್ತು! Cricket ರಹಾನೆ-ಶಾ ಮಿಂಚಿನಾಟ: ವಿಶ್ವದಾಖಲೆ ಬರೆದ ಮುಂಬೈ! 18 ವರ್ಷದ ಭಾರತದ ಗುಕೇಶ್ ವಿಶ್ವ ಚೆಸ್ ಚಾಂಪಿಯನ್! ಪತ್ನಿ ಹಾರಿದ ಬಾವಿಗೆ ಹಾರಿ ಪತಿ ಆತ್ಮಹತ್ಯೆ: ಸಾವಿನಲ್ಲೂ ಒಂದಾದ ದಂಪತಿ! ಬಿಜೆಪಿ ಮುಖಂಡ ಯತ್ನಾಳ್, ತೇಜಸ್ವಿ ಸೂರ್ಯ ಎಫ್ ಐಆರ್ ರದ್ದು! ಸತೀಶ್ ಜಾರಕಿಹೊಳಿಗೆ ಬಿಗ್ ರಿಲೀಫ್: ‘ಹಿಂದೂ ಪದ ಅಶ್ಲೀಲ’ ಹೇಳಿಕೆಯ ಕೇಸು ರದ್ದುಗೊಳಿಸಿದ ಹೈಕೋರ್ಟ್ BREAKING ಸಚಿವ ಈಶ್ವರ್ ಖಂಡ್ರೆ ಕಚೇರಿ ಮುಂದೆ ವಿಷ ಸೇವಿಸಿ ರೈತರಿಂದ ಆತ್ಮಹತ್ಯೆಗೆ ಯತ್ನ!