Wednesday, 18 November 2026 — Kannadavahini
BREAKING NEWS
ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು
ರಾಜ್ಯ

ಬೇಸಿಗೆಯ 3 ತಿಂಗಳು ವಾಡಿಕೆಗಿಂತ ಹೆಚ್ಚು ಬಿಸಿಲು: ಹವಾಮಾನ ವರದಿ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 21 ವೀಕ್ಷಣೆಗಳು

ಬೆಂಗಳೂರು: ಮಾರ್ಚ್ ಎಪ್ರಿಲ್‌ ಮೇ ಅಂತ್ಯದವರೆಗೂ ಉತ್ತರ ಕರ್ನಾಟಕದಲ್ಲಿ ತೀವ್ರ ಬಿಸಿಲು ಕಾಡುವ ಬೆನ್ನಲ್ಲೇ, ವಾಡಿಕೆಗಿಂತ ಅಧಿಕ ಮುಂಗಾರು ಮಳೆಯಿಂದಾಗಿ ದಕ್ಷಿಣ ಕರ್ನಾಟಕದಲ್ಲಿ ಸಾಮಾನ್ಯ ತಾಪಮಾನ ಇರಲಿದೆ ಎಂದು ಹವಾಮಾನ ಮುನ್ಸೂಚನೆ ಇದೆ.

ಮಾರ್ಚ್ ನಿಂದ ಮೇ ತಿಂಗಳವರೆಗೆ ಕರ್ನಾಟಕದಲ್ಲಿ ತೀವ್ರ ಬಿಸಿಲು ಮತ್ತು ಇದೇ ಸಂದರ್ಭದಲ್ಲಿ ಅಧಿಕ ಮಳೆಯೂ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು ಸೇರಿದಂತೆ, ದಕ್ಷಿಣ ಕರ್ನಾಟಕದಲ್ಲಿ ಮುಂಗಾರು ಪೂರ್ವ ಮಳೆ ಸಾಮಾನ್ಯಕ್ಕಿಂತ ಹೆಚ್ಚಾಗಿ ಬೀಳುವ ಸಾಧ್ಯತೆಯಿದೆ. ಉತ್ತರ ಕರ್ನಾಟಕದ ಜಿಲ್ಲೆಗಳು, ವಿಶೇಷವಾಗಿ ಕಲ್ಯಾಣ-ಕರ್ನಾಟಕ, 2-4 ದಿನಗಳ ಕಾಲ ತೀವ್ರವಾದ ಬಿಸಿಗಾಳಿ ಅನುಭವಿಸುವ ನಿರೀಕ್ಷೆಯಿದೆ.

ಕರಾವಳಿ ಕರ್ನಾಟಕ ಮತ್ತು ಮಲೆನಾಡು ಪ್ರದೇಶಗಳಲ್ಲಿ ಶೇ.50-60 ರಷ್ಟು ಹೆಚ್ಚುವರಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಸೇರಿದಂತೆ ಒಳನಾಡಿನ ಜಿಲ್ಲೆಗಳಲ್ಲಿ ಶೇ.30-40 ರಷ್ಟು ಹೆಚ್ಚಿನ ಮುಂಗಾರು ಪೂರ್ವ ಮಳೆಯಾಗಬಹುದು.

ಈ ಮಳೆಯಿಂದಾಗಿ, ದಕ್ಷಿಣ ಒಳನಾಡಿನ ಕರ್ನಾಟಕದಲ್ಲಿ ತಾಪಮಾನವು ಸಾಮಾನ್ಯವಾಗಿರುತ್ತದೆ. ಆದರೆ ಹಗಲಿನಲ್ಲಿ ಬಿಸಿಲು ಇರುತ್ತದೆ ಎಂದು ವರದಿ ಹೇಳಿದೆ. ಈಶಾನ್ಯ ಕರ್ನಾಟಕದಲ್ಲಿ ಮಾರ್ಚ್ ತಿಂಗಳಿನಲ್ಲಿ 43 ಡಿಗ್ರಿ ಸೆಲ್ಸಿಯಸ್ ನಿಂದ 45 ಡಿಗ್ರಿ ಸೆಲ್ಸಿಯಸ್ ನಡುವೆ ತಾಪಮಾನ ಏರಿಕೆಯಾಗುವ ಸಾಧ್ಯತೆಯಿದೆ.

ಏಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ಬಿಸಿಲಿನ ತೀವ್ರತೆ ಕಡಿಮೆಯಾಗಬಹುದು. ಆದರೆ ಉತ್ತರ ಕರ್ನಾಟಕದಾದ್ಯಂತ ಹೆಚ್ಚಾಗುವ ಸಾಧ್ಯತೆಯಿದೆ.
ನಗರದ ಹಿರಿಯ ವಿಜ್ಞಾನಿ ಸಿ.ಎಸ್. ಪಾಟೀಲ್ ಮಾತನಾಡಿ, “2024 ರ ಬೇಸಿಗೆಗಿಂತ ಭಿನ್ನವಾಗಿ, ಬೆಂಗಳೂರು ಮತ್ತು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಸಾಮಾನ್ಯ ತಾಪಮಾನ ಇರುತ್ತದೆ ಎಂದು ಹೇಳಿದ್ದಾರೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8423 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment