Tuesday, 17 November 2026 — Kannadavahini
BREAKING NEWS
ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ಕ್ರೀಡೆ ಐಪಿಎಲ್ ಗೆ ಧೋನಿ ವಿದಾಯ; ಸಿಎಸ್ ಕೆಗೆ ಮೆಂಟರ್ ಆಗಿ ನೇಮಕ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್
ರಾಜ್ಯ

ಮಾನವ ಬಹು ಅಂಗಾಂಗ ಕಸಿ ಆಸ್ಪತ್ರೆಗೆ 4000 ಕೋಟಿ ವೆಚ್ಚದ ಗುರಿ : ಸಿಎಂ ಸಿದ್ದರಾಮಯ್ಯ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 27 ವೀಕ್ಷಣೆಗಳು
karnataka hospitals

ಗಳೂರು: ಸಾವಿರ ಹಾಸಿಗೆಗಳ ಚಾರಿಟಬಲ್ ಸೂಪರ್ ಸ್ಪೆಷಾಲಿಟಿ ಹಾಗೂ ಮಾನವ ಬಹು ಅಂಗಾಂಗ ಕಸಿ ಆಸ್ಪತ್ರೆಗೆ ಅಜೀಂ ಪ್ರೇಮ್ ಜಿ ಪ್ರತಿಷ್ಠಾನವು ಐದು ವರ್ಷಗಳಲ್ಲಿ 4000 ಕೋಟಿ ವೆಚ್ಚ ಮಾಡುವ ಗುರಿ ಹೊಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಿಧಾನ ಸೌಧದಲ್ಲಿ ಸಾವಿರ ಹಾಸಿಗೆಗಳ ಚಾರಿಟಬಲ್ ಸೂಪರ್ ಸ್ಪೆಷಾಲಿಟಿ ಹಾಗೂ ಮಾನವ ಬಹು ಅಂಗಾಂಗ ಕಸಿ ಆಸ್ಪತ್ರೆ ನಿರ್ಮಾಣ ಮತ್ತು ನಿರ್ವಹಣೆ ಕುರಿತು ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ಅಜೀಂ ಪ್ರೇಮ್ ಜಿ ಪ್ರತಿಷ್ಠಾನ ನಡುವೆ ಒಡಂಬಡಿಕೆಗೆ ಸಹಿ ಹಾಕಿದ ನಂತರ ಅವರು ಮಾತನಾಡಿದರು.

ಅಜೀಂ ಪ್ರೇಮ್ ಜಿ ಪ್ರತಿಷ್ಠಾನದ ವತಿಯಿಂದ ಸಾವಿರ ಆಸ್ಪತ್ರೆಗಳ ಚಾರಿಟಬಲ್ ಸೂಪರ್ ಸ್ಪೆಷಾಲಿಟಿ ಹಾಗೂ ಮಾನವ ಬಹು ಅಂಗಾಂಗ ಕಸಿ ಆಸ್ಪತ್ರೆ ನಿರ್ಮಾಣಕ್ಕೆ ಸಾವಿರಾರು ಕೋಟಿ ರೂ ಗಳ ಆರೋಗ್ಯ ಸಂಬಂಧಿಸಿದಂತೆ ಒಡಂಬಡಿಕೆಗೆ ಸಹಿ ಮಾಡಲಾಗಿದೆ. ಇದಕ್ಕಾಗಿ ರಾಜೀವ್ ಗಾಂಧಿ ಎದೆ ರೋಗಗಳ ಆಸ್ಪತ್ರೆ ಆವರಣದಲ್ಲಿ ಸರ್ಕಾರ 10 ಎಕರೆ ಸ್ಥಳವನ್ನು 99 ವರ್ಷಗಳ ಅವಧಿಗೆ  ಗುತ್ತಿಗೆ ಆಧಾರದ ಮೇಲೆ ನೀಡಲು ಒಪ್ಪಂದವಾಗಿದೆ ಎಂದರು.

ಅಜೀಂ ಪ್ರೇಮ್ ಜಿ ಅವರ ಈ ಮಹತ್ಕಾರ್ಯಕ್ಕೆ ಸರ್ಕಾರ ಆಭಾರಿಯಾಗಿದೆ. ಅದರಲ್ಲಿಯೂ ಉಚಿತವಾಗಿ ಈ ಕಾರ್ಯವನ್ನು ನೆರವೇರಿಸಲು ಮುಂದಾಗಿರುವುದು ಶ್ರೇಷ್ಠ ಕಾರ್ಯ ಎಂದರು .

ಶಿಕ್ಷಣಕ್ಕೆ ನೆರವು

ಅಜೀಂ ಪ್ರೇಮ್ ಜಿ ಪ್ರತಿಷ್ಠಾನವು ಕಳೆದ 25 ವರ್ಷಗಳಿಂದ ಶಿಕ್ಷಣ ಮತ್ತುಆರೋಗ್ಯ ಕ್ಷೇತ್ರದಲ್ಲಿ ದೊಡ್ಡ ಪ್ರಮಾಣದಲ್ಲಿ ಸೇವೆ ಸಲ್ಲಿಸುತ್ತಿದೆ. 2021ರಲ್ಲಿ ಶಿಕ್ಷಕರ ತರಬೇತಿಗೆ, 2024 ರಲ್ಲಿ ಎಲ್.ಕೆ.ಜಿ ಯಿಂದ ಹತ್ತನೇ ತರಗತಿಯವರೆಗೆ ವಾರದಲ್ಲಿ ನಾಲ್ಕು ದಿನ ಮೊಟ್ಟೆ ಕೊಡುವ ಕಾರ್ಯಕ್ರಮಕ್ಕೆ ಒಂದೂವರೆ ಕೋಟಿ ರೂ ನೀಡುವ ಮೂಲಕ ಕೈಜೋಡಿಸಿದ್ದಾರೆ. ಸರ್ಕಾರಿ ಕಾಲೇಜುಗಳಲ್ಲಿ ಓದಿರುವವವರಿಗೆ ವರ್ಷಕ್ಕೆ 30 ಸಾವಿರ ವಿದ್ಯಾರ್ಥಿ ವೇತನವನ್ನು ದೀಪಿಕಾ ವಿದ್ಯಾರ್ಥಿ ವೇತನದಡಿ ನೀಡುತ್ತಿದ್ದಾರೆ ಎಂದು ತಿಳಿಸಿದ  ಮುಖ್ಯಮಂತ್ರಿಗಳು  ಅಜೀಂ ಪ್ರೇಮ್ ಜಿ ಅವರಿಗೆ ಧನ್ಯವಾದಗಳನ್ನು ತಿಳಿಸಿದರು.

ಸಾರ್ವಜನಿಕ ವ್ಯವಸ್ಥೆಗಳು ಬಲಗೊಳ್ಳಬೇಕು

ಅಜೀಂ ಪ್ರೇಮ್ ಜಿ ಪ್ರತಿಷ್ಠಾನದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನುರಾಗ್ ಬೆಹರ್, ಸಾರ್ವಜನಿಕ ವ್ಯವಸ್ಥೆಗಳಲ್ಲಿ ನಂಬಿಕೆಯಿಟ್ಟಿರುವ ಸಂಸ್ಥೆಯಾಗಿದ್ದು, ಸಾರ್ವಜನಿಕ ವ್ಯವಸ್ಥೆಗಳು ಬಲಗೊಳ್ಳಬೇಕು ಎಂದರು.

ಆರೋಗ್ಯ ಶುರುವಾಗುವುದು ಆಶಾ ಕಾರ್ಯಕರ್ತರು, ಪ್ರಾಥಮಿಕ ಆರೋಗ್ಯ ಕೇಂದ್ರಗಳಿಂದ.  ನಮ್ಮ ಜನತೆ ಖಾಯಿಲೆ ಬೀಳದಿರುವಂತೆ ತಡೆಯುವುದು ನಮ್ಮ ಮುಖ್ಯ ಗುರಿಯಾಗಬೇಕು. ಕರ್ನಾಟಕ ಅತ್ಯಂತ ಕ್ರಿಯಾಶೀಲ ರಾಜ್ಯವಾಗಿದ್ದು, ಆರೋಗ್ಯ ವ್ಯವಸ್ಥೆಯನ್ನು ಬಲಬಡಿಸುವಲ್ಲಿ ಅಧಿಕಾರಿಗಳು, ಆಡಳಿತ ಒಟ್ಟಾಗಿ ಕೆಲಸ ಮಾಡುತ್ತಿರುವ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8421 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment