Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ರಾಜ್ಯ

ತಾಂತ್ರಿಕ ಸಮಸ್ಯೆ ಬಗೆಹರಿದಿದೆ, ಜಾತಿ ಗಣತಿಗೆ ವೇಗ ನೀಡಲು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
3 ನಿಮಿಷ ಓದು 25 ವೀಕ್ಷಣೆಗಳು
siddaramiah meeting

ತಾಂತ್ರಿಕ ದೋಷಗನ್ನು ಸರಿಪಡಿಸಲಾಗಿದ್ದು, ಜಾತಿ ಗಣತಿ ಇಂದಿನಿಂದ ವೇಗವಾಗಿ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಶುಕ್ರವಾರ ರಾಜ್ಯದ ಜಿಲ್ಲಾಧಿಕಾರಿಗಳ ಜೊತೆ ವೀಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾಂತ್ರಿಕ ದೋಷದಿಂದ ಕಳೆದ ನಾಲ್ಕು ದಿನಗಳಿಂದ ನಿಧನಗತಿಯಲ್ಲಿ ನಡೆಯುತ್ತಿದ್ದ ಜಾತಿ ಗಣತಿ ಸಮೀಕ್ಷೆ ಇನ್ನು ಮುಂದೆ ವೇಗವಾಗಿ ನಡೆಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಸಮೀಕ್ಷೆ ಕಾರ್ಯ ರಾಜ್ಯಾದ್ಯಂತ ಆರಂಭವಾಗಿದ್ದು, ಆರಂಭದಲ್ಲಿ ಕೆಲವು ತಾಂತ್ರಿಕ ತೊಂದರೆಗಳ ಕಾರಣ ಸಮೀಕ್ಷೆ ನಿಧಾನವಾಗಿತ್ತು. ಈಗ ಎಲ್ಲಾ ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಲಾಗಿದೆ. ಇಂದಿನಿಂದ ಸಮೀಕ್ಷೆ ಕಾರ್ಯವನ್ನು ಚುರುಕುಗೊಳಿಸಲು ಎಲ್ಲಾ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಸಮೀಕ್ಷೆ ಕಾರ್ಯಕ್ಕೆ ಯಾವುದೇ ತಾಂತ್ರಿಕ ತೊಂದರೆಗಳು ಉಂಟಾಗದಂತೆ ಎಚ್ಚರಿಕೆ ವಹಿಸಬೇಕು. ತಾಂತ್ರಿಕ ತೊಂದರೆಗಳು ಎದುರಾದರೆ ತಕ್ಷಣ ಅದನ್ನು ಬಗೆಹರಿಸಲು ಕ್ರಮ ಕೈಗೊಳ್ಳಬೇಕು. ಸಮೀಕ್ಷೆ ಕಾರ್ಯವನ್ನು ಎಲ್ಲಾ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಅವರು ಹೇಳಿದರು.

ರಾಜ್ಯದಲ್ಲಿ ಒಟ್ಟು 1,43,81,702 ಕುಟುಂಬಗಳ ಸಮೀಕ್ಷೆ ಕಾರ್ಯವನ್ನು ನಡೆಸಬೇಕಾಗಿದ್ದು, ಇದುವರೆಗೆ 2,76,016 ಕುಟುಂಬಗಳ ಸಮೀಕ್ಷೆ ಕಾರ್ಯ ಪೂರ್ಣಗೊಳಿಸಲಾಗಿದೆ. ಸಮೀಕ್ಷೆ ಕಾರ್ಯಕ್ಕೆ ಒಟ್ಟು 1,20,728 ಗಣತಿದಾರರನ್ನು ನಿಯೋಜಿಸಲಾಗಿದೆ. ಒಟ್ಟು 1,22,085 ಗಣತಿ ಬ್ಲಾಕ್‌ಗಳನ್ನು ಗುರುತಿಸಲಾಗಿದೆ. ಅಕ್ಟೋಬರ್‌ 7ರ ಒಳಗಾಗಿ ಗಣತಿ ಕಾರ್ಯ ಪೂರ್ಣಗೊಳ್ಳಬೇಕು ಎಂದು ಅವರು ವಿವರಿಸಿದರು.

ಸಮೀಕ್ಷೆ ಕಾರ್ಯಕ್ಕೆ ನಿಯೋಜಿಸಿರುವ ಎಲ್ಲಾ ಶಿಕ್ಷಕರು ತಮಗೆ ವಹಿಸಲಾಗಿರುವ ಕಾರ್ಯವನ್ನು ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳಿಸಬೇಕು. ಯಾವುದೇ ಶಿಕ್ಷಕರು ಗಣತಿ ಕಾರ್ಯಕ್ಕೆ ಅಸಹಕಾರ ತೋರಿಸಬಾರದು. ಇದು ಸರ್ಕಾರಿ ಕೆಲಸವಾಗಿದ್ದು, ಕರ್ತವ್ಯದಲ್ಲಿ ನಿರ್ಲಕ್ಷ್ಯ ವಹಿಸಬಾರದು. ನಿರ್ಲಕ್ಷ್ಯ ವಹಿಸುವ ಗಣತಿದಾರರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಅವರು ನುಡಿದರು.

ಶಿಕ್ಷಕರಿಗೆ ಗೌರವಧನದ ಬಗ್ಗೆ ಯಾವುದೇ ಅನುಮಾನ ಬೇಡ. ಈಗಾಗಲೇ ಗೌರವಧನವನ್ನು ಬಿಡುಗಡೆ ಮಾಡಿದ್ದೇವೆ. ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರು ಗಣತಿ ಕಾರ್ಯದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಸಿದ್ದರಾಮಯ್ಯ ಸೂಚಿಸಿದರು.

ಇದು ಕೇವಲ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಮೀಕ್ಷೆಯಲ್ಲ. ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ನಿಗದಿತ ಗುರಿಯ ಪ್ರಗತಿ ಬಗ್ಗೆ ಪ್ರತಿ ದಿನ ಪರಿಶೀಲನೆ ನಡೆಸಬೇಕು. ಕಂದಾಯ ಇಲಾಖೆ, ಪಂಚಾಯತ್‌ ರಾಜ್‌ ಇಲಾಖೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು ಎಂದು ಅವರು ಸ್ಪಷ್ಟಪಡಿಸಿದರು.

ಕೆಲವು ಜಿಲ್ಲೆಗಳಲ್ಲಿ ಸಮೀಕ್ಷೆ ನಿಧಾನಗತಿಯಲ್ಲಿದ್ದು, ಚುರುಕುಗೊಳಿಸಬೇಕು. ಅಗತ್ಯವಿರುವ ಕಡೆ ಅನುದಾನಿತ ಶಾಲೆಗಳ ಶಿಕ್ಷಕರ ಸೇವೆಯನ್ನು ಪಡೆದುಕೊಳ್ಳಬೇಕು. ಜಿಲ್ಲಾ ಉಸ್ತುವಾರಿ ಸಚಿವರೊಂದಿಗೂ ಈ ಕುರಿತು ಸಂಪರ್ಕದಲ್ಲಿರಬೇಕು. ಸಮೀಕ್ಷೆ ಕಾರ್ಯದ ಮೇಲ್ವಿಚಾರಣೆ ನಡೆಸಲು ಪ್ರತಿ ತಾಲೂಕಿಗೆ ಜಿಲ್ಲಾ ಮಟ್ಟದ ಅಧಿಕಾರಿಯನ್ನು ನೋಡಲ್‌ ಅಧಿಕಾರಿಯಾಗಿ ನೇಮಕ ಮಾಡಲು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿ ಸಮೀಕ್ಷೆ ಕಾರ್ಯ ಇಂದಿನಿಂದ ಆರಂಭವಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಸುಮಾರು 50ಲಕ್ಷ ಮನೆಗಳಿದ್ದು, ಆದಷ್ಟು ಬೇಗನೆ ಗಣತಿ ಕಾರ್ಯವನ್ನು ಪ್ರಾರಂಭಿಸಲು ಕ್ರಮ ಕೈಗೊಳ್ಳಬೇಕು. ರಾಜ್ಯದ ಪ್ರತಿಯೊಂದು ಕುಟುಂಬಗಳ ಸಮೀಕ್ಷೆ ಕಾರ್ಯವನ್ನು ಕೈಗೊಳ್ಳಬೇಕು. ಯಾವುದೇ ಕುಟುಂಬ ಸಮೀಕ್ಷೆಯಿಂದ ಹೊರಗುಳಿಯದಂತೆ ಎಚ್ಚರಿಕೆ ವಹಿಸಬೇಕು ಎಂದರು
ಗುಡ್ಡಗಾಡು ಪ್ರದೇಶಗಳ ವ್ಯಾಪ್ತಿಯಲ್ಲಿ ಶಾಲೆಗಳಲ್ಲಿ ಸಮೀಕ್ಷೆ ಕೇಂದ್ರಗಳನ್ನು ಆರಂಭಿಸಲು ಅವಕಾಶ ನೀಡಲಾಗಿದೆ. ಜನರು ಕೇಂದ್ರಕ್ಕೆ ಬಂದು ಸಮೀಕ್ಷೆ ಕಾರ್ಯದಲ್ಲಿ ಪಾಲ್ಗೊಳ್ಳಬಹುದಾಗಿದೆ. ಆನ್‌ಲೈನ್‌ ಮೂಲಕ ಸಹ ಸಮೀಕ್ಷೆ ಕಾರ್ಯದಲ್ಲಿ ಭಾಗಿಯಾಗಲು ಅವಕಾಶ ಕಲ್ಪಿಸಲಾಗಿದ್ದು, ಇದರ ಪ್ರಯೋಜನ ಪಡೆದುಕೊಳ್ಳಬೇಕು. ಸಮೀಕ್ಷೆ ಸಂದರ್ಭದಲ್ಲಿ ಮನೆಗಳಿಗೆ ಬೀಗ ಹಾಕಿದ್ದರೆ, ಅಂತಹ ಮನೆಗಳಲ್ಲೂ ಗಣತಿ ಕಾರ್ಯವನ್ನು ಮುಂದಿನ ದಿನಗಳಲ್ಲಿ ಕೈಗೊಳ್ಳಲು ಕ್ರಮ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment