Sunday, July 20, 2025
Google search engine
Homeರಾಜ್ಯಬಳ್ಳಾರಿ ಆಸ್ಪತ್ರೆಯಲ್ಲಿ ಬಾಣಂತಿಯರ ಸಾವು ಪ್ರಕರಣ: ಡ್ರಗ್ ಕಂಟ್ರೋಲರ್ ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶ

ಬಳ್ಳಾರಿ ಆಸ್ಪತ್ರೆಯಲ್ಲಿ ಬಾಣಂತಿಯರ ಸಾವು ಪ್ರಕರಣ: ಡ್ರಗ್ ಕಂಟ್ರೋಲರ್ ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶ

ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವಿನ ಪ್ರಕರಣದಲ್ಲಿ ಕರ್ತವ್ಯಲೋಪಕ್ಕಾಗಿ ಡ್ರಗ್ ಕಂಟ್ರೋಲರ್ ಉಮೇಶ್ ಅವರನ್ನು ಸಸ್ಪೆಂಡ್ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಇತ್ತೀಚೆಗೆ ಸಂಭವಿಸಿದ ಬಾಣಂತಿಯರ ಸಾವಿನ ಕುರಿತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಉನ್ನತ ಸಭೆಯ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದರು.

ರಿಂಗರ್‌ ಲ್ಯಾಕ್ಟೇಟ್‌ ದ್ರಾವಣ ಪೂರೈಸಿರುವ ಪಶ್ಚಿಮ ಬಂಗಾಳ ಕಂಪನಿ ಕಪ್ಪುಪಟ್ಟಿಗೆ ಸೇರಿಸಿ, ಕಂಪನಿ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಲು ಆದೇಶಿಸಲಾಗಿದೆ ಎಂದರು.

ಸಾವಿನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಸರ್ಕಾರದಿಂದ 2 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ. ಡ್ರಗ್ ಪೂರೈಸಿದ ಕಂಪೆನಿಯಿಂದಲೂ  ಪರಿಹಾರವನ್ನು ವಸೂಲು ಮಾಡಿ, ಮೃತರ ಕುಟುಂಬಕ್ಕೆ ನೀಡಲು ಸೂಚನೆ ನೀಡಲಾಗಿದೆ ಎಂದರು.

ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಸಂಭವಿಸಿರುವ ಈ ರೀತಿಯ ಸಾವಿನ ಪ್ರಕರಣಗಳ ಬಗ್ಗೆ ತನಿಖೆ ನಡೆಸಲು ಅಭಿವೃದ್ಧಿ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿಯನ್ನು ರಚಿಸಲು ನಿರ್ಧಾರಿಸಲಾಗಿದೆ ಎಂದರು.

ಮೆಡಿಸಿನ್ ಮಾಫಿಯಾ ನಿಯಂತ್ರಣಕ್ಕೆ ಅತ್ಯಂತ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಬೇಕಾದ ಅನಿವಾರ್ಯತೆ ಇದೆ ಎನ್ನುವ ಅಭಿಪ್ರಾಯಗಳು ಸಭೆಯಲ್ಲಿ ಹಲವರಿಂದ ವ್ಯಕ್ತವಾದವು. ಮೊದಲಿಗೆ ಈ ಬಗ್ಗೆ ಕೇಂದ್ರಕ್ಕೆ ಪತ್ರ ಬರೆಯುವುದು ಹಾಗೂ ತಮಿಳುನಾಡು ಮಾದರಿಯಲ್ಲಿ ಡ್ರಗ್ ನಿಯಂತ್ರಣಕ್ಕೆ ಹೊಸ ರೂಪು ರೇಷೆ, ನಿಯಮಾವಳಿ ರಚಿಸುವ ಬಗ್ಗೆ ಚರ್ಚಿಸಲಾಯಿತು.

ಮುಖ್ಯಮಂತ್ರಿ ಅವರು ನೀಡಿದ ಸೂಚನೆಗಳು

ನವೆಂಬರ್‌ 11ರಿಂದ ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ನಾಲ್ವರು ಬಾಣಂತಿಯರ ಸಾವಿನ ಪ್ರಕರಣ ವರದಿಯಾಗಿದೆ.

ಹಿಮೋಡಯಾಲಿಸಿಸ್‌ ಮತ್ತು ಬಹು ಅಂಗಗಳ ವೈಫಲ್ಯ ಹಾಗೂ ತೀವ್ರತರ ಮೂತ್ರಪಿಂಡದ ಗಾಯದಂತಹ ತೊಂದರೆಗಳ 7 ಪ್ರಕರಣಗಳಲ್ಲಿ , 4ಬಾಣಂತಿಯರು ಸಾವಿಗೀಡಾಗಿದ್ದಾರೆ.

ಉಳಿದ 3 ರೋಗಿಗಳಲ್ಲಿ 2 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿ ಬಳ್ಳಾರಿ ವಿಮ್ಸ್‌ನಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ.

ಬಾಣಂತಿಯರ ಸಾವಿನ ಕುತು ತಜ್ಞರ ಸಮಿತಿ ರಚಿಸಿ ಘಟನಾವಳಿಗಳ ಬಗ್ಗೆ ಪ್ರಾಥಮಿಕ ವರದಿ ಪಡೆಯಲಾಗಿದೆ.

ಬಾಣಂತಿಯರಿಗೆ ನೀಡಲಾಗಿರುವ ರಿಂಗರ್‌ ಲ್ಯಾಕ್ಟೇಟ್‌ ದ್ರಾವಣದ ಎಲ್ಲಾ ಬ್ಯಾಚ್‌ಗಳ ಬಳಕೆಯನ್ನು ಹಿಂಪಡೆಯಲಾಗಿದ್ದು, ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಳಸಲಾದ ದ್ರಾವಣ ಪರೀಕ್ಷಿಸಲು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಸಂಭವಿಸಿರುವ ಈ ರೀತಿಯ ಸಾವಿನ ಪ್ರಕರಣಗಳ ಬಗ್ಗೆ ತನಿಖೆ ನಡೆಸಲು ಅಭಿವೃದ್ಧಿ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿಯನ್ನು ರಚಿಸಲು ನಿರ್ಧಾರ.

ತಮಿಳುನಾಡು ಮಾದರಿಯಲ್ಲಿ ಔಷಧಿಗಳ ಖರೀದಿ ಪ್ರಕ್ರಿಯೆ ಹಾಗೂ ಔಷಧ ನಿಯಂತ್ರಣ ಇಲಾಖೆಯನ್ನು ಪುನಾರಚನೆ ಬಗ್ಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾವನೆ ಸಲ್ಲಿಸಲು ಸೂಚಿಸಲಾಗಿದೆ ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments