Tuesday, 17 November 2026 — Kannadavahini
BREAKING NEWS
ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ದೇಶ ಇಂದಿರಾ ಗಾಂಧಿ ನೋಡಿ ಭಯಗೊಂಡಿದ್ದೆ: ಸೋನಿಯಾ ಗಾಂಧಿ ರಾಜ್ಯ ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಈಶ್ವರಪ್ಪಗೆ ಸುಪ್ರೀಂಕೋರ್ಟ್‌ನಲ್ಲಿ ಹಿನ್ನಡೆ; ಲೋಕಾಯುಕ್ತಕ್ಕೆ ನೋಟಿಸ್ ಅಪರಾಧ ಕೆಪಿಎಸ್ ಸಿ ಹಗರಣ: ಗೆಳತಿಗೆ 52.30 ಲಕ್ಷದ ಚಿನ್ನ ಗಿಫ್ಟ್ ನೀಡಿದ್ದ ಗ್ಯಾನೇಂದ್ರ ದೇಶ ಶಬರಿಮಲೆ ದೇವಸ್ಥಾನ ಓಪನ್: ಮಂಡಲ ಪೂಜೆ ಆರಂಭ ಕಾನೂನು ಬಿಲ್ಕಿಸ್ ಬಾನು ಪ್ರಕರಣ: 17 ವರ್ಷ ಜೈಲಿನಲ್ಲಿದ್ದ ಇಬ್ಬರ ಜೀವಾವಧಿ ಶಿಕ್ಷೆ ಅಮಾನತು ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ
ರಾಜ್ಯ

ವೈಕುಂಠ ಏಕಾದಶಿ ಸಂಭ್ರಮ: ರಾಜ್ಯಾದ್ಯಂತ ದೇವಸ್ಥಾನಗಳಿಗೆ ಹರಿದು ಬಂದ ಭಕ್ತಸಾಗರ

Vahini
ವರದಿ: Vahini ಮುಖ್ಯ ಸಂಪಾದಕರು (Chief Editor)
2 ನಿಮಿಷ ಓದು 18 ವೀಕ್ಷಣೆಗಳು

ರಾಜ್ಯಾದ್ಯಂತ ವೈಕುಂಠ ಏಕಾದಶಿಯ ಸಂಭ್ರಮ ಮನೆ ಮಾಡಿದ್ದು, ದೇವಸ್ಥಾನಗಳಲ್ಲಿ ಭಕ್ತಸಾಗರವೇ ಹರಿದುಬಂದಿದೆ.

ಬೆಂಗಳೂರಿನ ಹಲವು ವಿಷ್ಣು, ವೆಂಕಟೇಶ್ವರ, ಗೊವಿಂದನ ದೇವಾಲಯಗಳಲ್ಲಿ ಮುಂಜಾನೆ 4 ಗಂಟೆಯಿಂದಲೇ ಸುಪ್ರಭಾತ ಸೇವೆ ಸೇರಿದಂತೆ ವಿಶೇಷ ಪೂಜೆಗಳು ನಡೆಯುತ್ತಿದೆ. ಮುಂಜಾನೆಯಿಂದಲೇ ಭಕ್ತರು ಕಿಲೋಮೀಟರ್ ಗಟ್ಟಲೆ ಸಾಲುಗಟ್ಟಿ ನಿಂತು ದರ್ಶನ ಪಡೆಯುತ್ತಿದ್ದಾರೆ.

ಧನುರ್ಮಾಸ ಶುಕ್ಲ ಪಕ್ಷದಲ್ಲಿ ಬರುವ ವೈಕುಂಠ ಏಕಾದಶಿಯಂದು ದೇವತೆಗಳು ಭೂ ಲೋಕಕ್ಕೆ ಬಂದು ಜಗದೊಡೆಯ ಶ್ರೀವಿಷ್ಣು ದೇವರನ್ನು ಪೂಜಿಸುತ್ತಾರೆ ಎಂದು ಪುರಾಣಗಳು ಹೇಳುತ್ತವೆ. ಹೀಗಾಗಿಯೇ ಈ ದಿನದಂದು ದೇವಾಲಯದ ಉತ್ತರ ದ್ವಾರದ ಮೂಲಕ ವಿಷ್ಣುವಿನ ದರ್ಶನ ಮಾಡಿದರೆ ಸಕಲ ಪುಣ್ಯಗಳು ಪ್ರಾಪ್ತಿಯಾಗುತ್ತವೆ ಎಂಬುದು ನಂಬಿಕೆ ಇದೆ.

ಕೋಟೆ ವೆಂಕಟರಮಣಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ ಪ್ರಯುಕ್ತ ಪೂಜಾ ಮತ್ತು ರಥೋತ್ಸವ ಕಾರ್ಯಕ್ರಮ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ಮತ್ತು ವಾಹನ ಸವಾರರ ಹಿತದೃಷ್ಟಿಯಿಂದ ಈ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ.

ಕೋಟೆ ವೆಂಕಟರಮಣ ಸ್ವಾಮಿಯ ವೈಕುಂಠ ಏಕಾದಶಿಯ ಪ್ರಯುಕ್ತ ವಿ ವಿ ಪುರಂ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಕೆ ಆರ್ ರಸ್ತೆ(ಶಿವಶಂಕರ್ ಸರ್ಕಲ್ ನಿಂದ ಮೆಡಿಕಲ್ ಕಾಲೇಜು ಜಂಕ್ಷನ್ ವರೆಗೆ) ಯನ್ನು ಸಾರ್ವಜನಿಕರ ಮತ್ತು ವಾಹನ ಸವಾರರ ಹಿತದೃಷ್ಟಿಯಿಂದ ಈ ಕೆಳಕಂಡಂತೆ ಸಂಚಾರ ಮಾರ್ಪಾಡು ಮಾಡಲಾಗಿದೆ.

ಬೆಂಗಳೂರಿನ ಮಲ್ಲೇಶ್ವರ ಹಾಗೂ ಜೆಪಿ ನಗರದ ಟಿಟಿಡಿ ದೇವಸ್ಥಾನದಲ್ಲಂತೂ ಸಂಭ್ರಮ ಮುಗಿಲುಮುಟ್ಟಿದೆ. ವೈಕುಂಠ ಏಕಾದಶಿ ಪ್ರಯುಕ್ತವಾಗಿಯೇ ದೇವಸ್ಥಾನದಲ್ಲಿ ವಿಶೇಷ ಅಲಂಕಾರ ಮಾಡಲಾಗಿದ್ದು, ಬೆಳಗ್ಗೆ 6 ಗಂಟೆಯಿಂದಲೇ ಭಕ್ತರು ಆಗಮಿಸಿ ವೆಂಕಟೇಶ್ವರನ ದರ್ಶನ ಪಡೆಯುತ್ತಿದ್ದಾರೆ.

ದೇಗುಲಕ್ಕೆ ಬಂದ ಭಕ್ತರಿಗೆ ಪ್ರಸಾದ ವಿತರಣೆ ನಡೆಯುತ್ತಿದ್ದು, ಇಂದು ದೇವಸ್ಥಾನಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ಜನರು ಬರುವ ನಿರೀಕ್ಷೆ ಇದ್ದು, ನೂಕು ನುಗ್ಗಲಾಗದಂತೆ ದೇವಸ್ಥಾನದ ಸುತ್ತಲೂ ಬ್ಯಾರೀಕೇಟ್ ಅಳವಡಿಸಲಾಗಿದೆ.

ಅರಸೀಕೆರೆ ಮಲೇಕಲ್ಲು ಅಮರಗಿರಿ ತಿರುಪತಿ ದೇವಾಲಯ, ಮಾಲೂರಿನ ಚಿಕ್ಕತಿರುಪತಿ, ಮೈಸೂರು, ಬೆಳಗಾವಿ ಹುಬ್ಬಳ್ಳಿ ಚಿಕ್ಕಮಗಳೂರು, ಹಾಸನ, ಶೀರಂಗಪಟ್ಟಣದ ರಂಗನಾಥ ಸೇರಿದಂತೆ ರಾಜ್ಯಾದ್ಯಂತ ಸಾವಿರಾರು ದೇಗುಲದಲ್ಲಿ ಪಂಚಾಭಿಷೇಕ, ಪುಷ್ಪಭಿಷೇಕ ಸೇರಿದಂತೆ ವಿವಿಧ ಪೋಜೆ ನಡೆಯುತ್ತಿದ್ದು, ವಿಶೇಷ ಅಲಂಕಾರ ಮಾಡಿ ಭಕ್ತದಿಗಳಿಗೆ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ.

ನಿರ್ಬಂಧಿಸಲಾದ ಸಂಚಾರಕ್ಕೆ ಪರ್ಯಾಯ ಮಾರ್ಗಗಳು

ಕೆ ಆರ್ ರಸ್ತೆಯಿಂದ ಮೆಡಿಕಲ್ ಕಾಲೇಜು ಜಂಕ್ಷನ್ ಕಡೆಗೆ ಹೋಗುವ ವಾಹನ ಸವಾರರು, ಶಿವಶಂಕರ್ ಸರ್ಕಲ್ ಬಳಿ ಎಡ ತಿರುವನ್ನು ಪಡೆದು ಮಕ್ಕಳ ಕೂಟ ಜಂಕ್ಷನ್ ಬಳಿ ಬಲ ತಿರುವನ್ನು ಪಡೆದು ಪಿ.ಎಂ.ಕೆ ರಸ್ತೆಯಲ್ಲಿ ಚಲಿಸಿ ಮಿಂಟೋ ಜಂಕ್ಷನ್ ಬಳಿ ಬಲತಿರುವನ್ನು ಪಡೆದು ಮೆಡಿಕಲ್ ಕಾಲೇಜು ಜಂಕ್ಷನ್‌ಗೆ ಸಂಪರ್ಕ ಪಡೆದು ಸಂಚರಿಸಬಹುದಾಗಿರುತ್ತದೆ.

ಲಾಲ್‌ಬಾಗ್ ಪೋರ್ಟ್ ರಸ್ತೆಯಿಂದ ಮೆಡಿಕಲ್ ಕಾಲೇಜು ಜಂಕ್ಷನ್ ಕಡೆಗೆ ಹೋಗುವ ವಾಹನ ಸವಾರರು, ಶಿವಶಂಕರ್ ಸರ್ಕಲ್ ಬಳಿ ನೇರವಾಗಿ ಮುಂದೆ ಸಾಗಿ ಬಸಪ್ಪ ರಸ್ತೆ ಮಕ್ಕಳ ಕೂಟ ಜಂಕ್ಷನ್ ಬಳಿ ಬಲ ತಿರುವನ್ನು ಪಡೆದು ಪಿ.ಎಂ.ಕೆ ರಸ್ತೆಯಲ್ಲಿ ಚಲಿಸಿ ಮಿಂಟೋ ಜಂಕ್ಷನ್ ಬಳಿ ಬಲತಿರುವನ್ನು ಪಡೆದು ಮೆಡಿಕಲ್ ಕಾಲೇಜು ಜಂಕ್ಷನ್‌ಗೆ ಸಂಪರ್ಕ ಪಡೆದು ಸಂಚರಿಸಬಹುದಾಗಿದೆ.

👑

JOIN OUR COMMUNITY

✈️
Get Latest Updates, News, Offers & More
ಮುಖ್ಯ ಸಂಪಾದಕರು (Chief Editor) ✍️ 8420 ಲೇಖನಗಳು

Vahini

Vahini ಅವರು ಸಮಕಾಲೀನ ವಿದ್ಯಮಾನಗಳು, ರಾಜ್ಯ ಸುದ್ದಿ ಹಾಗೂ ವಿಶೇಷ ವರದಿಗಳನ್ನು ಬರೆಯುವ ಜವಾಬ್ದಾರಿಯುತ ಲೇಖಕರಾಗಿದ್ದಾರೆ.

Leave a comment